ಯತೀಂದ್ರ ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ! ವರ್ಗಾವಣೆಯಾದ ಅಧಿಕಾರಿಗಳು ಯಾರು ಗೊತ್ತಾ?
ಬೆಂಗಳೂರು, ನವೆಂಬರ್ 18: ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ಜೋರಾಗಿದೆ ಎಂದು ವಿಪಕ್ಷಗಳ ಆರೋಪ ಕಳೆದ ಹಲವು ತಿಂಗಳಿಂದ ಕೇಳಿ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಡಾ ಯತೀಂದ್ರ ಕೈವಾಡ ಇದೆ ಎಂಬ ಆರೋಪದ ಬೆನ್ನಲ್ಲೇ ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ.
ಹೌದು, ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಅನೇಕ ಅಧಿಕಾರಿಗಳ ವರ್ಗಾವಣೆಯಾಗಿದೆ. ಬರೋಬ್ಬರಿ 71 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ 40 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಲಾಗಿದ್ದು, ವಿವಿಧ ಪೊಲೀಸ್ ಅಧಿಕಾರಿಗಳನ್ನು ಬೇರೆ ಬೇರೆ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ. ಕೆಳೆದ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದೀಗ ಅಧಿಕಾರಿಗಳ ವರ್ಗಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು
1. ಶಿವನಂಜ ಶೆಟ್ಟಿ. ಸಿ
2. ಮಹದೇವಸ್ವಾಮಿ. ಎಂ
3. ಮುನಿಯಪ್ಪ ಎನ್
4. ವಿವೇಕಾನಂದ
5. ಸೋಮಶೇಖರಪ್ಪ. ಜಿ ಜುತ್ತಾಲ್
6. ಹನುಮಂತಪ್ಪ ವೈ.ಎಸ್
7. ರಾಮಕೃಷ್ಣಯ್ಯ.ಸಿ.ಹೆಚ್
8. ಬಸವರಾಜ್ ಭೋಜಪ್ಪ ಲಮಾಣಿ
9. ಜಗದೇವಪ್ಪ
10. ಕಿರಣ್ ಕುಮಾರ್. ಎಸ್ ತಾವರಗಿ
11. ಮಹಾಂತೇಶ್ ಬಿ
12. ವಿಜಯಕುಮಾರ್
13. ಅವಿನಾಶ್. ವಿ
14. ರವಿ ಸಂಗನಗೌಡ ಪಾಟೀಲ್
15. ಸಿದ್ದೇಗೌಡ ಹೆಚ್. ಎಂ
16. ನಟರಾಜ್
17. ಪುಂಡಲೀಕ ಎಂ ಪಟ್ಟಾತರ್
18. ಬಸು ಚವ್ಹಾಣ್
19. ಶಿವಕುಮಾರ್ ಕೆ.ಆರ್
20. ಪರಸಪ್ಪ ಹೆಚ್.ಭಜಂತ್ರಿ
21. ಹಸನ್ ಸಾಬ್ ಡಿ.ಮುಲ್ಲಾ
22. ಜಯಕುಮಾರ್ ಎನ್
23. ಉಮೇಶ್ ಬಾಬು.ಜಿ
24. ಅಮರಪ್ಪ
25. ಕನಕಲಕ್ಷ್ಮೀ
ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ
ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಕಾಸಿಗಾಗಿ ಹುದ್ದೆ ಎಂಬ ಹ್ಯಾಶ್ ಟ್ಯಾಗ್ ಬಳಸಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!!
ಡೂಪ್ಲಿಕೇಟ್ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್ ಮಾಡಿ ಸಿದ್ದರಾಮಯ್ಯನವರೇ..? ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications