ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಅನುಮತಿ

|
Google Oneindia Kannada News

ಬೆಂಗಳೂರು, ಜುಲೈ 16: ಕೊರೊನಾ ಸೋಂಕಿನ ಪ್ರಕರಣಗಳ ಇಳಿಕೆ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಸಂಬಂಧಿತ ಕೋರ್ಸ್‌ಗಳ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ನರ್ಸಿಂಗ್ ಹಾಗೂ ಆರೋಗ್ಯ ಸಂಬಂಧಿ ಇತರೆ ಕೋರ್ಸ್‌ಗಳ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಭೌತಿಕವಾಗಿ ತರಗತಿಗಳನ್ನು ಆರಂಭಿಸುವಂತೆ ತಿಳಿಸಿದೆ.

ಕೊರೊನಾ 3ನೇ ಅಲೆ, ಮಕ್ಕಳಿಗೆ ಗಂಭೀರ ಪರಿಣಾಮ ಅನ್ನೋದೇ ಅವೈಜ್ಞಾನಿಕಕೊರೊನಾ 3ನೇ ಅಲೆ, ಮಕ್ಕಳಿಗೆ ಗಂಭೀರ ಪರಿಣಾಮ ಅನ್ನೋದೇ ಅವೈಜ್ಞಾನಿಕ

ಈ ಸಂಬಂಧ ಕಂದಾಯ ಇಲಾಖೆ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದು, ಕೊರೊನಾ ನಿಯಮಾವಳಿಗಳ ಪಾಲನೆಯೊಂದಿಗೆ ವೈದ್ಯಕೀಯ ಕೋರ್ಸ್‌ಗಳ ಶಿಕ್ಷಣ ಸಂಸ್ಥೆಗಳನ್ನು ಆರಂಭ ಮಾಡಬಹುದು ಎಂದು ಹೇಳಿದ್ದಾರೆ.

Karnataka Govt Permits Reopening Medical Education Institutions

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕನಿಷ್ಠ ಒಂದು ಡೋಸ್ ಕೊರೊನಾ ಲಸಿಕೆ ಪಡೆದಿರಬೇಕು. ಅಂಥವರಿಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಆದೇಶಿಸಲಾಗಿದೆ.

ಕೊರೊನಾ ನಿಯಮಗಳ ಉಲ್ಲಂಘನೆ ಮಾಡಿದರೆ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1806 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ ಸೋಂಕಿನಿಂದ 42 ಮಂದಿ ಸಾವನ್ನಪ್ಪಿದ್ದಾರೆ. 2748 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶುಕ್ರವಾರದ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 28,80,370ಕ್ಕೆ ಏರಿಕೆಯಾಗಿದೆ. ಸದ್ಯ 31399 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Recommended Video

ಭಾರತದ ಹೆಸರಾಂತ ಫೋಟೊ ಜರ್ನಲಿಸ್ಟ್ Danish Siddiqui ಇನ್ನಿಲ್ಲ | Indian Photojournalist | Oneindia Kannada

English summary
Karnataka government on friday has permitted reopening of academic institutions pertaining to health and medical sector,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X