ರಾಜ್ಯದಲ್ಲಿ 100 ಹೊಸ ಹಾಸ್ಟೆಲ್‌ಗಳನ್ನು ತೆರೆಯುವ ಪ್ಲಾನ್, ಯಾವ ಸಮುದಾಯದವರಿಗೆ?-ಮಾಹಿತಿ
ಬೆಂಗಳೂರು, ಡಿಸೆಂಬರ್, 07: ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್‌ಗಳ ಬೇಡಿಕೆ ಇರುವುದರಿಂದ, ಹೆಚ್ಚಿನ ವಿದ್ಯಾರ್ಥಿಗಳಿಗೆ 100 ಹೊಸ ಹಾಸ್ಟೆಲ್‌ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಮಸ್ಯೆ ಕರ್ನಾಟಕದಾದ್ಯಂತ ಪ್ರಚಲಿತದಲ್ಲಿರುವುದರಿಂದ ಮಧ್ಯಂತರ ಪರಿಹಾರಕ್ಕೆ ಮುಂದಾಗದೆ. ಇನ್ನು ಸಮಸ್ಯೆ ಬಗೆಹರಿಸಲು ದೀರ್ಘಾವಧಿ ಯೋಜನೆ ರೂಪಿಸುವಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸರ್ಕಾರಕ್ಕೆ ಸೂಚನೆ ನೀಡಿದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು, ಒಬಿಸಿ ಸಮುದಾಯದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳದ ಹಿನ್ನೆಲೆ ಈಗಿರುವ ಹಾಸ್ಟೆಲ್‌ಗಳಲ್ಲಿ ಅವರಿಗೆ ವಸತಿ ಕಲ್ಪಿಸಲು ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡರು. ಇದು ಇಲಾಖೆಯ ಗಮನಕ್ಕೂ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಹಿನ್ನೆಲೆ ವಿಶೇಷವಾಗಿ ಮಂಗಳೂರು, ಉಡುಪಿ ಧಾರವಾಡ ಸೇರಿದಂತೆ ಇತರ ಜಿಲ್ಲಾ ಕೇಂದ್ರಗಳಲ್ಲಿ ಶೈಕ್ಷಣಿಕ ಕೇಂದ್ರಗಳಲ್ಲಿ ಇನ್ನೂ 100 ಹಾಸ್ಟೆಲ್‌ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಹಾಸ್ಟೆಲ್ ಸೌಲಭ್ಯ ಪಡೆಯದ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ವಿದ್ಯಾಸಿರಿ ಯೋಜನೆಗೆ ಸರ್ಕಾರ 30 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿಲಾಗಿದೆ. ಇದರಿಂದ ಅವರಿಗೆ 10 ತಿಂಗಳಿಗೆ ಮಾಸಿಕ 1,500 ರೂಪಾಯಿ ಶೈಕ್ಷಣಿಕ ವರ್ಷ ಪ್ರಾರಂಭವಾಗುವುದರೊಂದಿಗೆ ಜೂನ್‌ನಲ್ಲಿಯೇ ಹಾಸ್ಟೆಲ್‌ಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆ ಶೈಕ್ಷಣಿಕ ಕ್ಯಾಲೆಂಡರ್‌ನಲ್ಲಿನ ಬದಲಾವಣೆಯಿಂದಾಗಿ ಇದು ವಿಳಂಬ ಆಗಿದೆ ಎಂದರು.
ರಾಜ್ಯ ಸರ್ಕಾರದಿಂದ ರೈತರಿಗೆ ಘೋರ ಅನ್ಯಾಯ
ರಾಜ್ಯ ಸರ್ಕಾರದ ಬಳಿ ರೈತರಿಗೆ ಕೊಡೋಕೆ ಹಣ ಇಲ್ಲ, ಆದರೆ ಅಲ್ಪಸಂಖ್ಯಾತರಿಗೆ ಮಾತ್ರ ಕೋಟಿ ಕೋಟಿ ಹಣ ಕೊಡುತ್ತೇವೆ ಅಂತಾ ಹೇಳುತ್ತಾರೆ. ಇದೇನಾ ನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಖಾಸಗಿ ಹೊಟೆಲ್‌ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲವಿದೆ, ಆದರೆ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಒಣಮೇವು, ಹಸಿ ಮೇವಿನ ಅಭಾವ ಉಂಟಾಗಿದ್ದು, ರೈತರು ಆತಂಕದಲ್ಲಿ ಇದ್ದಾರೆ. ರಾಜ್ಯದ ಯಾವ ಭಾಗದಲ್ಲಿಯೂ ಗೋಶಾಲೆ ತೆರೆದಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಆಗಿದೆ ಎಂದ ಅವರು, ಮೌಲ್ವಿಗಳಿಗೆ ದುಡ್ಡು ಕೊಡೋಕೆ ಜೇಬಿನಲ್ಲಿ ಹತ್ತು ಸಾವಿರ ಕೋಟಿ ಇಟ್ಟುಕೊಂಡು ಅಡ್ಡಾಡುತ್ತಾರೆ.ಇದ್ಯಾವ ನ್ಯಾಯ ಎಂದು ಅವರು ಪ್ರಶ್ನೆ ಮಾಡಿದರು. ಇನ್ನು ಕಾಂಗ್ರೆಸ್ ಸರ್ಕಾರ ಒಡೆದಾಳುವ ನೀತಿ ಅನುಸರಿಸುತ್ತಿದೆ. ರಾಜ್ಯದಲ್ಲಿ ದಲಿತರ ಹಣ ದುರ್ಬಳಕೆ ಆಗಬಾರದು ಎಂದು ಸರ್ಕಾರದ ವಿರುದ್ಧ ಗುಡುಗಿದರು.
ಸರ್ಕಾರ ರಾಜ್ಯದ ಜನತೆ ಮೇಲೆ ತೆರಿಗೆ ಹಾಕುತ್ತಿದ್ದೀರಿ. ರಾಜ್ಯದಲ್ಲಿ ಬರಗಾಲ ಉಂಟಾಗಿದೆ. ಇದರ ಬಗ್ಗೆ ಗಮನಹರಿಸಲಿ. ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲದೇ ಪಾಪರ್ ಆಗಿದ್ದಾರೆ. ಜನರ ಮೇಲೆ ವಿಪರಿತ ತೆರಿಗೆ ಹಾಕಿ ಹಣ ವಸೂಲಿ ಮಾಡೋಕೆ ಹೋಗುತ್ತಿದ್ದಾರೆ. ಚುನಾವಣೆಗೂ ಮುಂಚೆ ಗ್ಯಾರಂಟಿಗಳನ್ನು ಕೊಟ್ಟರು. ಈಗ ಏನಾಯಿತು ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications