Industry: ಕೈಗಾರಿಕೆ ಮೂಲಸೌಕರ್ಯಕ್ಕಾಗಿ ₹5,000 ಕೋಟಿ ಸಾಲ ಮಾಡಲಿದೆ ಸರ್ಕಾರ

ಬೆಂಗಳೂರು, ಸೆಪ್ಟಂಬರ್ 05: ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಹಾಗೂ ಹಾಲಿ ಕೈಗಾರಿಕಾ ಪ್ರದೇಶಗಳಿಗೆ ನದಿ ಮೂಲದ ಪ್ರತ್ಯೇಕ ನೀರು ಸರಬರಾಜು ಸೇರಿದಂತೆ ಮೂಲಸೌಕರ್ಯ ಕಲ್ಪಿಸಲಾಗುವುದು. ಈ ಸಂಬಂಧ ₹5,000 ಕೋಟಿ ಸಾಲ ಪಡೆಯುವ ಉದ್ದೇಶ ಇದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಗುರುವಾರ ಇಲ್ಲಿ ಹೇಳಿದರು.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಇಲ್ಲಿ ಏರ್ಪಡಿಸಿರುವ 'ಇನ್ನೋವರ್ಜ್' ಸಮಾವೇಶದಲ್ಲಿ ಅವರು ಗುರುವಾರ ಮಾತನಾಡಿದರು. ರಾಜ್ಯದ ಬಹುತೇಕ ಕೈಗಾರಿಕಾ ಪ್ರದೇಶಗಳಲ್ಲಿ ನಿರೀಕ್ಷಿತ ಮೂಲಸೌಕರ್ಯ ಇಲ್ಲ. ಅದರಲ್ಲೂ ಪ್ರತ್ಯೇಕ ನೀರು ಸರಬರಾಜು ವ್ಯವಸ್ಥೆಯಂತೂ ಇಲ್ಲವೇ ಇಲ್ಲ. ಹೀಗಾಗಿ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ಈ ಸಂಬಂಧ ಹಣಕಾಸು ಇಲಾಖೆ ಜತೆಗೂ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು.

Govt Planned to Get 5 000 Loan for Separate Water Supply to Industry and Infra Development

ಉದ್ದೇಶಿತ ನೀರು ಸರಬರಾಜು ಯೋಜನೆಗೆ ಅಂದಾಜು ಎರಡು ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಉಳಿದ ಮೂರು ಸಾವಿರ ಕೋಟಿಯನ್ನು ಹಳೇ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದಕ್ಕೆ ಹಾಗೂ ಹೊಸ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮತ್ತು ಭೂಸ್ವಾಧೀನಕ್ಕೆ ಬಳಸಲಾಗುವುದು ಎಂದು ಹೇಳಿದರು.

ರಾಜಧಾನಿ, ಗಡಿ ಜಿಲ್ಲೆಯಲ್ಲಿ ಸ್ಟಾರ್ಟಪ್ ಪಾರ್ಕ್

ರಾಜ್ಯವು ಉದ್ಯಮ, ಸಂಶೋಧನೆ, ಅಭಿವೃದ್ಧಿ ಮತ್ತು ತಂತ್ರಜ್ಞಾನಗಳ ಪರವಾಗಿದ್ದು, ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಸ್ಟಾರ್ಟಪ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಸಚಿವ ಪಾಟೀಲ ವಿವರಿಸಿದರು. ಸ್ಟಾರ್ಟಪ್ ಪಾರ್ಕಿಗೆ ಬೇಕಾಗುವ ಭೂಮಿಯನ್ನು ಬೆಂಗಳೂರಿನಲ್ಲಿ ಈಗಾಗಲೇ ಗುರುತಿಸಲಾಗಿದೆ. ಬೆಳಗಾವಿಯಲ್ಲಿ ಸೂಕ್ತ ಜಾಗವನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಲ್ಲಿ ಮೆಡ್-ಟೆಕ್ ಸ್ಟಾರ್ಟಪ್ ಪಾರ್ಕ್ ಸ್ಥಾಪಿಸುವ ಉದ್ದೇಶವಿದೆ ಎಂದರು.

Govt Planned to Get 5 000 Loan for Separate Water Supply to Industry and Infra Development

ವಿಜ್ಞಾನ, ತಂತ್ರಜ್ಞಾನಕ್ಕೆ ಮಾನವ ಸಂಪನ್ಮೂಲ ಒದಗಿಸಬೇಕು

ಕರ್ನಾಟಕವು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಯ ತಾಣವಾಗಿದೆ. ಇದರ ಜತೆಗೆ ನಾವು ಕೌಶಲಪೂರ್ಣ ಮಾನವ ಸಂಪನ್ಮೂಲವನ್ನು ಕೂಡ ಸೃಷ್ಟಿಸಬೇಕು. ಆಗ ಇದರ ಲಾಭ ರಾಜ್ಯಕ್ಕೆ ಸಿಗುತ್ತದೆ ಎಂದು ಅವರು ವಿವರಿಸಿದ್ದಾರೆ.

ತಯಾರಿಕಾ ವಲಯದಲ್ಲಿ ಸೂಕ್ತ ನೀತಿಗಳು ಮತ್ತು ಪ್ರೋತ್ಸಾಹದೊಂದಿಗೆ ರಾಜ್ಯವು ಭಾರೀ ಬಂಡವಾಳ ಹೂಡಿಕೆಯನ್ನು ಆಕರ್ಷಿಸುತ್ತಿದೆ. ನಾಲ್ಕನೆಯ ಕೈಗಾರಿಕಾ ಕ್ರಾಂತಿಯನ್ನು ಪರಿಣಾಮಕಾರಿಯಾಗಿ ಸಾಧಿಸಬೇಕು ಎನ್ನುವುದು ರಾಜ್ಯದ ಗುರಿಯಾಗಿದೆ ಎಂದು ಪಾಟೀಲ ತಿಳಿಸಿದರು.

ಇದೇ ವೇಳೆ ಸಚಿವರು ಉದ್ಯಮಿಗಳ ಜತೆ ಸಂವಾದ ನಡೆಸಿ ಮಹತ್ವದ ವಿಚಾರಗಳನ್ನು ಚರ್ಚಿಸಿದರು. ಕಾರ್ಯಕ್ರಮದಲ್ಲಿ ಸಿಐಐ ಕರ್ನಾಟಕ ಘಟಕದ ಅಧ್ಯಕ್ಷ ಎನ್ ವೇಣು ಸ್ವಾಗತಿಸಿದರು. ಸಿಐಐ ಇಂಡಿಯಾ ಅಧ್ಯಕ್ಷರೂ ಆದ ವೊಲ್ವೊ ಅಧ್ಯಕ್ಷ ಕಮಲ್ ಬಾಲಿ, ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಮಾತನಾಡಿದರು. ಸಿಐಐ ಉಪಾಧ್ಯಕ್ಷ ರಬೀಂದ್ರ ಶ್ರೀಕಂಠನ್ ವಂದಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+