ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೇಕಾರರಿಗೆ ಉದ್ಯೋಗ: ಸುವರ್ಣಸೌಧದಲ್ಲಿ ಸಭೆ

|
Google Oneindia Kannada News

ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿರುವ ನೇಕಾರರ ನೆರವಿಗೆ ಸರ್ಕಾರ ಮುಂದಾಗಿದ್ದು, ಸುಮಾರು 10 ಲಕ್ಷ ಕೈಮಗ್ಗ ಕಾರ್ಮಿಕರಿಗೆ ಉದ್ಯೋಗ ಒದಗಿಸಲಾಗುವುದು ಎಂದು ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.

ಕೈಮಗ್ಗ ರಾಜ್ಯದ ಅನೇಕ ಜನರಿಗೆ ಉದ್ಯೋಗ ನೀಡಿದೆ. ಆದರೆ, ಕೊರೊನ, ಲಾಕ್‌ಡೌನ್ ಕಾರಣದಿಂದಾಗಿ ಈ ಉದ್ಯೋಗ ಅವಲಂಭಿಸಿದವರು ಆರ್ಥಿಕ ಸಂಕಷ್ಟಕ್ಕೆ ಒಳಗಗಾಗಿದ್ದಾರೆ. ಅಂತವರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಆವರು ತಿಳಿಸಿದ್ದಾರೆ.

ಸುವರ್ಣ ಸೌಧದಲ್ಲಿ ಸಭೆ

ನೇಕಾರರಿಗೆ ಉದ್ಯೋಗ ನೀಡುವ ಸಂಬಂಧ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಮಂಗಳವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ಕರೆದಿದ್ದಾರೆ. ಉತ್ತರ ಕರ್ನಾಟಕ ಭಾಗದ ಸಚಿವರು, ಶಾಸಕರು ಮತ್ತು ಹಿರಿಯ ಅಧಿಕಾರಿಗಳನ್ನು ಅವರು ಸಭೆಗೆ ಆಹ್ವಾನಿಸಿದ್ದಾರೆ. ಈ ಬಗ್ಗೆ ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸರ್ಕಾರ ರೂಪಿಸಬೇಕಾದ ಯೋಜನೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.

Govt planning to create 10 lakh jobs for weavers says Shankar Patil Munenakoppa Minister of Textiles & Sugarcane

"ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೇಕಾರರ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರ, ನಬಾರ್ಡ್ ಯೋಜನೆಗಳು, ರಾಜ್ಯ ಸರ್ಕಾರ ರೂಪಿಸಿರುವ ಯೋಜನೆಗಳು ಹೀಗೆ ಹಲವು ಯೋಜನೆಗಳಿವೆ. ಇವುಗಳನ್ನು ಒಳಗೊಂಡಂತೆ ನೇಕಾರರನ್ನು ಬಲಪಡಿಸುವುದು ಹೇಗೆ ಎಂಬುದರ ಬಗ್ಗೆ ಚರ್ಚಿಸಲಾಗುತ್ತದೆ" ಎಂದು ಸಚಿವರು ಹೇಳಿದ್ದಾರೆ.

Recommended Video

ಈ ಸ್ಟಾರ್ ಆಟಗಾರನ ಭವಿಷ್ಯದ ಜೊತೆ ವಿರಾಟ್ ಚೆಲ್ಲಾಟವಾಡ್ತಿರೋದು ಯಾಕೆ? | Oneindia Kannada

English summary
Karnataka Govt planning to create 10 lakh jobs for weavers who facing hardship due top covid-19 pandemic says Shankar Patil Munenakoppa Minister of Textiles & Sugarcane .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X