ಪಶುವೈದ್ಯಕೀಯ ಸಂಸ್ಥೆಗಳ ಬಲವರ್ಧನೆಗೆ ₹11 ಕೋಟಿ: ಜಾನುವಾರು ಲಸಿಕೆಯಲ್ಲಿ ತುಮಕೂರು ರಾಜ್ಯಕ್ಕೆ ಪ್ರಥಮ!

ತುಮಕೂರು: ಪಶುವೈದ್ಯಕೀಯ ಸಂಸ್ಥೆಗಳ ಬಲವರ್ಧನೆಗೆ 11 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ತುಮಕೂರು ಜಿಲ್ಲೆಯಲ್ಲಿ ಈಗಾಗಲೇ 120 ಫಲಾನುಭವಿಗಳ ಆಯ್ಕೆಯಾಗಿದೆ. ಜಾನುವಾರುಗಳಿಗೆ ಲಸಿಕೆ ನೀಡುವುದರಲ್ಲಿ ತುಮಕೂರು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು.

ನಗರದ ಕಲ್ಟೆಕ್ಸ್‌ ಸರ್ಕಲ್‌ ಸಮೀಪದ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಸಂಗೋಪನಾ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

Govt Preferance to Development of Veterinary Feild in State Tumakur Ranks First in Livestock Vaccination

ಪಶುವೈದ್ಯಕೀಯ ಸಂಸ್ಥೆಗಳ ಬಲವರ್ಧನೆ ಕ್ರಮವಹಿಸಿರುವ ರಾಜ್ಯ ಸರ್ಕಾರ, ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಈಗಾಗಲೇ ಮಾಡಿದ ಆಯ್ಕೆ ಬಿಟ್ಟು, ಹೆಚ್ಚುವರಿಯಾಗಿ 400 ಫಲಾನುಭವಿಗಳ ಆಯ್ಕೆ ಮಾಡಿ ಸಹಾಯಧನ ಒದಗಿಸಲಿದೆ.

ಬಿಜೆಪಿ ಪ್ರತಿಭಟನೆಗೆ ರಾಜ್ಯ ಸರ್ಕಾರದ ತಿರುಗೇಟು: ಬೆಲೆ ಏರಿಕೆ, ಬರ ಪರಿಹಾರದ ಬಗ್ಗೆ ಕೇಂದ್ರದತ್ತ ಬೊಟ್ಟು!
ಬಿಜೆಪಿ ಪ್ರತಿಭಟನೆಗೆ ರಾಜ್ಯ ಸರ್ಕಾರದ ತಿರುಗೇಟು: ಬೆಲೆ ಏರಿಕೆ, ಬರ ಪರಿಹಾರದ ಬಗ್ಗೆ ಕೇಂದ್ರದತ್ತ ಬೊಟ್ಟು!

ವಿವಿಧ ಯೋಜನೆಗಳಡಿ ₹11.70 ಕೋಟಿ ಅನುದಾನ ಮಂಜೂರಾಗಿದ್ದು, ಪಶುವೈದ್ಯಕೀಯ ಸಂಸ್ಥೆಗಳ ಬಲವರ್ಧನೆಗೆ ₹11 ಕೋಟಿ ಬಿಡುಗಡೆ ಮಾಡಲಾಗಿದೆ. ಅನುಗ್ರಹ ಯೋಜನೆಯಡಿ ₹17 ಕೋಟಿ ಮಂಜೂರಾಗಿದ್ದು, ಈ ಪೈಕಿ ₹11 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಅವರು ಅಂಕಿ ಸಂಖ್ಯೆ ನೀಡಿದರು.

ಪಶುಸಂಗೋಪನಾ ಕ್ಷೇತ್ರದ ಪ್ರಗತಿಗೆ ಒತ್ತು

ಜಾನುವಾರುಗಳಿಗೆ ಲಸಿಕೆ ನೀಡಿಕೆಯಲ್ಲಿ ಪ್ರಥಮ ಸ್ಥಾನದಲ್ಲಿರುವ ತುಮಕೂರು ಜಿಲ್ಲೆ ಜನರ ಜೀವನೋಪಾಯ, ಕೃಷಿ ಚಟುವಟಿಕೆ ಹಾಗೂ ಗ್ರಾಮೀಣ ಆರ್ಥಿಕತೆಯ ದೃಷ್ಟಿಯಿಂದ ಪಶುಸಂಗೋಪನಾ ಇಲಾಖೆ ಅತ್ಯಂತ ಮಹತ್ವದ್ದಾಗಿದೆ ಎಂದರು.

ಸರ್ಕಾರ ಒಟ್ಟಾರೆ ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಪಶುಸಂಪತ್ತಿನ ಸಂರಕ್ಷಣೆ ಹಾಗೂ ರೈತರಿಗೆ ಗುಣಮಟ್ಟದ ಪಶುವೈದ್ಯಕೀಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. 2 ಕೋಟಿ ರೂ. ವೆಚ್ಚದಲ್ಲಿ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಇಲಾಖೆಯ ಆಡಳಿತ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.

ಮಾತ್ರವಲ್ಲದೇ 50 ಲಕ್ಷ ರೂ. ವೆಚ್ಚದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿಗೆ ಚಾಲನೆ, ಬೆಳ್ಳಾವಿ ಮತ್ತು ಅರಕೆರೆಯಲ್ಲಿ ತಲಾ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ, ಹಿರೇಗುಂಡಕಲ್‌ನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ ಎಂದು ಅವರು ಹೇಳಿದರು.

ಗ್ರಾಮೀಣ ಆರ್ಥಿಕತೆ ಪಶುಸಂಗೋಪನೆಯ ಮಹತ್ವ

ಪಶುಸಂಗೋಪನೆ ಗ್ರಾಮೀಣ ಆರ್ಥಿಕತೆಯ ಪ್ರಮುಖ ಭಾಗವಾಗಿದೆ. ಮನುಷ್ಯನ ಬದುಕಿನೊಂದಿಗೆ ಪ್ರಾಣಿಗಳ ಬದುಕು ಬೆಸೆದುಕೊಂಡಿವೆ. ಜಿಲ್ಲೆಯಲ್ಲಿ ಹಸು, ಎಮ್ಮೆ ಸೇರಿದಂತೆ ಸುಮಾರು 5 ಲಕ್ಷ ಜಾನುವಾರುಗಳಿವೆ. 17 ಲಕ್ಷ ಕುರಿ ಮತ್ತು ಮೇಕೆಗಳಿವೆ. ವಿಶೇಷವಾಗಿ ಶಿರಾ, ಪಾವಗಡ, ಮಧುಗಿರಿ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಹೆಚ್ಚಾಗಿದೆ ಎಂದರು.

ಕುರಿ ಸಾಕಾಣಿಕೆಯಲ್ಲಿ ತೊಡಗಿದ್ದ ಬಡ್ಡಿ ಈರಣ್ಣ ಎಂಬುವವರು ಒಬ್ಬರೇ ಸುಮಾರು 5 ಸಾವಿರ ಕುರಿಗಳನ್ನು ಸಾಕುತ್ತಿದ್ದರು. ಪಶುಸಂಗೋಪನೆಯು ರೈತರ ಜೀವನೋಪಾಯಕ್ಕೆ ನೆರವಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೂ ಪೂರಕವಾಗಿದೆ. ಕೃಷಿ ಮತ್ತು ಪಶುಸಂಗೋಪನೆ ಪರಸ್ಪರ ಅವಲಂಬಿತವಾಗಿವೆ ಎಂದು ತಿಳಿಸಿದರು.

A-Khata: ಕೃಷ್ಣ ಬೈರೇಗೌಡರ ಕ್ಷೇತ್ರದಲ್ಲೇ ಭಾರಿ ಅಕ್ರಮ? 49 ಅನಧಿಕೃತ ಸೈಟ್‌ಗಳಿಗೆ ಎ-ಖಾತಾ, ಫೋರ್ಜರಿ ಸಹಿ!
A-Khata: ಕೃಷ್ಣ ಬೈರೇಗೌಡರ ಕ್ಷೇತ್ರದಲ್ಲೇ ಭಾರಿ ಅಕ್ರಮ? 49 ಅನಧಿಕೃತ ಸೈಟ್‌ಗಳಿಗೆ ಎ-ಖಾತಾ, ಫೋರ್ಜರಿ ಸಹಿ!

ಜಾನುವಾರುಗಳಿಗೆ ಅಗತ್ಯ ಮೇವಿಗೆ ಪೂರೈಕೆಗೆ ಆದ್ಯತೆ

ಪ್ರಸ್ತುತ ಜಿಲ್ಲೆಯಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದು, ಮಧುಗಿರಿ, ಪಾವಗಡ ಮತ್ತು ಶಿರಾ ಭಾಗದ ಬಹುತೇಕ ಕೆರೆಗಳು ಒಣಗಿವೆ. ಇಂತಹ ಸಂದರ್ಭದಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸುವ ಮೂಲಕ ಪಶುಸಂಪತ್ತನ್ನು ಉಳಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಮೇವು ಖರೀದಿಗೆ ಹೆಚ್ಚಿನ ಹಣ ವ್ಯಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪಶುಸಂಗೋಪನೆಯಲ್ಲಿ ತೊಡಗಿರುವವರಿಗೆ ಅಗತ್ಯ ನೆರವು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜಾ, ತುಮಕೂರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+