6000 ಮದ್ಯದಂಗಡಿ ಓಪನ್: ಹೆಂಡತಿ ದುಡ್ಡು ಗಂಡನಿಂದ ಪಡೆಯಲು ಸರ್ಕಾರದ 'ಮನಿ ರಿಟರ್ನ್ ಪಾಲಿಸಿ' ಇದು: ಬೊಮ್ಮಾಯಿ

ಬೆಂಗಳೂರು, ಸೆಪ್ಟಂಬರ್ 24: ಚುನಾವಣೆಗೂ ಮುನ್ನ ನೀಡಿದ್ದ ಐದು ಗ್ಯಾರಂಟಿ ಭರವಸೆಗಳನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಈಡೇರಿಸುವಲ್ಲಿ ನಿರತವಾಗಿದೆ. ಇದರೊಂದಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಸರ್ಕಾರ ಹೊರಟಿದೆ ಎಂದಿರುವ ಮಾಜಿ ಮುಖ್ಯಮಂತ್ರಿಗಳು, ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಹೊಸದಾಗಿ ಮದ್ಯದಂಗಡಿ ತೆರೆಯುವ ಬಗ್ಗೆ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ.

Govt Proposal To Open Liquor Shop In Gram Panchayat: Basavaraj Bommai Slams

ಒಂದೆಡೆ ಗ್ಯಾರೆಂಟಿ ಯೋಜನೆಗಳ ಹೆಸರಲ್ಲಿ ಮಹಿಳೆಯರಿಗೆ 2000 ರೂಪಾಯಿ ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ ಎಂದು ದೂರಿದರು.

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಡಗಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಅಕ್ರಮ ತಡೆಯಲಾಗದಿದ್ದರೆ ನಿಮ್ಮ ಇಲಾಖೆ ಮಾಡುವುದಾದರೂ ಏನು? ಎಂದು ಪ್ರಶ್ನೆ ಮಾಡಿದ್ದಾರೆ.

ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಸರ್ಕಾರ ನಿರ್ಧಾರ?

ಗ್ಯಾರೆಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ-ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ ಎಂದು ಅವರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

Govt Proposal To Open Liquor Shop In Gram Panchayat: Basavaraj Bommai Slams

ಸರ್ಕಾರ ಆದಾಯ ಗಳಿಸಲು ಮದ್ಯ ಮಾರಾಟ ಮೊರೆ ಹೋದರೆ, ಸರ್ಕಾರದ ಗ್ಯಾರೆಂಟಿ ಪಡೆಯುವ ಮಹಿಳೆಯರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದರು.

ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

6000 ಮದ್ಯದಂಗಡಿ ತೆರೆಯಲು

ರಾಜ್ಯದಲ್ಲಿನ ಸುಮಾರು 6000ಕ್ಕೂ ಅಧಿಕ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಮದ್ಯದ ಅಂಗಡಿ ತೆರೆಯಲು ಪರವಾನಿಗೆ ನೀಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಹತ್ತು ದಿನಗಳ ಹಿಂದೆ ನಡೆದ ಅಬಕಾರಿ ಇಲಾಖಾ ಸಭೆಯಲ್ಲಿ ಚರ್ಚಿಸಲಾಗಿದೆ. ಅಲ್ಲದೇ ಇದೇ ವಿಚಾರವಾಗಿ ಈಗಾಗಲೇ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ರಾಜಸ್ವ ಸಂಗ್ರಹದ ಗುರಿ ಹಾಕಿಹೊಂಡಿದೆ. ಅದಕ್ಕಾಗಿ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯುವ ಯೋಜನೆ ಮೂಲಕ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+