ಉಕ್ರೇನ್‌ನಿಂದ ಬರುವ ಕನ್ನಡಿಗರಿಗೆ ವಸತಿ, ಸಾರಿಗೆ ವ್ಯವಸ್ಥೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಫೆಬ್ರವರಿ 26: ಉಕ್ರೇನ್‌ನಿಂದ ಮುಂಬೈ ಅಥವಾ ದಿಲ್ಲಿಗೆ ಇಂದು ಆಗಮಿಸಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಕರೆತಂದು ಅವರವರ ಊರುಗಳಿಗೆ ಕಳುಹಿಸಲು ಸಹಾಯ ಸಹಕಾರವನ್ನು ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಿಲ್ಲಿಗೆ ಬರುವಂತಹ ವಿದ್ಯಾರ್ಥಿಗಳಿಗೆ ಸಾರಿಗೆ ಮತ್ತು ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸುವಂತೆ ದಿಲ್ಲಿಯಲ್ಲಿರುವ ಮುಖ್ಯ ಆಯುಕ್ತರಿಗೂ ಸೂಚಿಸಲಾಗಿದೆ ಎಂದು ಅವರು ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಷ್ಯಾ ಉಕ್ರೇನ್ ಮೇಲೆ ನಡೆಸಿರುವ ಯುದ್ಧದಲ್ಲಿ ಕನ್ನಡಿಗ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳುವ ಬಗ್ಗೆ ನಿನ್ನೆ ಕೇಂದ್ರ ವಿದೇಶಾಂಗ ಸಚಿವ ಜಯಶಂಕರ್ ಅವರೊಂದಿಗೆ ಮಾತನಾಡಿದ ನಂತರ ಅವರ ಪಟ್ಟಿಯನ್ನು ಸಹ ಕಳುಹಿಸಿಕೊಡಲಾಗಿದೆ. ಪಶ್ಚಿಮ ಭಾಗದಲ್ಲಿರುವವರನ್ನು ರಸ್ತೆ ಮುಖಾಂತರ ಕಳುಹಿಸುವುದು ಎಂದು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು. ಆ ಪ್ರಕಾರ ರೋಮಾನಿಯಾ ಮತ್ತಿತರ ಕಡೆಯಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಅವರ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ ಎಂದರು.

ಹೆಚ್ಚಿನ ವಿದ್ಯಾರ್ಥಿಗಳು ಖಾರಖೈ ಎಂಬಲ್ಲಿದ್ದಾರೆ. ಅದು ಈಶಾನ್ಯ ಭಾದಲ್ಲಿದ್ದು, ಅವರಿಗೆ ಸುರಕ್ಷಿತ ಸ್ಥಳದಲ್ಲಿರಲು ಸೂಚಿಸಲಾಗಿದೆ. ಹಾಗೂ ಅನಾವಶ್ಯಕವಾಗಿ ರಸ್ತೆಗೆ ಬರುವುದನ್ನು ತಪ್ಪಿಸಲು ತಿಳಿಸಲಾಗಿದೆ. ನಮ್ಮ ಪ್ರಧಾನ ಮಂತ್ರಿಗಳು ರಷ್ಯಾದ ಅಧ್ಯಕ್ಷರೊಂದಿಗೆ ಮಾತನಾಡಿದ್ದು, ಭಾರತೀಯರನ್ನು ಸ್ಥಳಾಂತರ ಮಾಡಲು ಇರುವ ವಿಮಾನಗಳಿಗೆ ಸುರಕ್ಷಿತ ಮಾರ್ಗವನ್ನು ಮಾಡಿಕೊಡುವಂತೆ ಕೋರಿದ್ದಾರೆ. ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ಯುದ್ಧದ ವಾತಾವರಣ ನಿಯಂತ್ರಣಕ್ಕೆ ಬಂದ ಮೇಲೆ ಆ ಪ್ರಕ್ರಿಯೆ ಕೂಡ ಪ್ರಾರಂಭವಾಗಲಿದೆ. ಕೆಲವೇ ದಿನಗಳಲ್ಲಿ ರಸ್ತೆ ಹಾಗೂ ವಿಮಾನಗಳ ಮೂಲಕ ನಮ್ಮ ವಿದ್ಯಾರ್ಥಿಗಳನ್ನು ಕರೆತರಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಿಎಂ:
"ನಾನೂ ಸಹ ಕೆಲವು ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದೇನೆ. ವಿಚಾರಗಳನ್ನು ತಿಳಿಸಿ ಸಂಪರ್ಕಿಸುವ ಸಂಖ್ಯೆಗಳನ್ನು ಒದಗಿಸಲಾಗಿದೆ. ಮಾಹಿತಿಗಳನ್ನು ಪಡೆದು ಧೈರ್ಯ ಹೇಳಿದ್ದೇನೆ. ರಷ್ಯಾ ಅಧ್ಯಕ್ಷರೊಂದಿಗೆ ನಮ್ಮ ಪ್ರಧಾನಿಗಳು ಮಾತನಾಡಿರುವ ಫಲಶ್ರುತಿಯಿಂದ ಭಾರತೀಯರು ಮತ್ತು ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಕರೆತರಲಾಗುವುದು ಎಂದರು.
ಯುದ್ಧ ನಡೆಯುತ್ತಿರುವುದರಿಂದ ಯಾವುದೇ ವ್ಯವಸ್ಥೆಗಳು ಇಲ್ಲ. ರಷ್ಯಾದವರು ಪ್ರವೇಶಿಸಿರುವ ನಗರ ಭಾಗಗಳಲ್ಲಿ ಬಹಳಷ್ಟು ಅವ್ಯವಸ್ಥೆ ಇದೆ. ಭಾರತೀಯರು ಸಹ ಅಲ್ಲಿ ಸಿಲುಕಿದ್ದಾರೆ. ಯಾವುದೇ ರೀತಿಯ ಅನಾಹುತ ಅಥವಾ ತೊಂದರೆ ಆಗಿಲ್ಲ. ಆದರೆ ಅವರಿಗೆ ಸರಿಯಾದ ಊಟ, ಇರಲು ವ್ಯವಸ್ಥೆ ಇಲ್ಲ. ಬಹಳಷ್ಟು ಜನ ಮೆಟ್ರೊದಲ್ಲಿರುವ ಬಂಕರ್‌ಗಳಲ್ಲಿ ಆಶ್ರಯ ಪಡೆದಿದ್ದಾರೆ. ಬಹಳ ಜನ ಅಲ್ಲಿ ಸೇರಿರುವುದರಿಂದ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ವಿವರಿಸಿದರು.
ರಾಜತಾಂತ್ರಿಕವಾಗಿ ಭಾರತದ ಪ್ರಧಾನ ಮಂತ್ರಿಗಳ ಮಾತುಕತೆ ಯಶಸ್ವಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ ಎಂದ ಮುಖ್ಯಮಂತ್ರಿಗಳು, ನಮ್ಮ ವಿದೇಶಾಂಗ ಸಚಿವ ಸಹಕಾರದಿಂದ ಉಕ್ರೇನ್‌ಗೆ ಹೊಂದಿಕೊಂಡಿರುವ ದೇಶಗಳೊಂದಿಗೆ ಮಾತನಾಡಿ ರಷ್ಯಾ ಭಾಷೆ ತಿಳಿದಿರುವ ರಾಯಭಾರಿಗಳನ್ನು ಅಲ್ಲಿಗೆ ಕಳುಹಿಸಲಾಗಿದೆ. ರಷ್ಯಾದವರ ಮೇಲುಗೈ ಇರುವುದರಿಂದ ಅವರೊಂದಿಗೆ ಮಾತನಾಡಿ ಭಾರತೀಯರನ್ನು ಸುರಕ್ಷಿತವಾಗಿ ಹೊರ ತರಲು ಇದು ಸಹಕಾರಿಯಾಗಲಿದೆ ಎಂದರು.
ಪಶ್ಚಿಮ ಭಾಗದಿಂದ ರಸ್ತೆ ಮೂಲಕ ಕರೆತರಲು ಅವಕಾಶವಿದೆ. ಅದನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಪೂರ್ವ ಭಾಗದಲ್ಲಿರುವರನ್ನು ಕರೆತರಲು ಗಮನ ಹರಿಸಲಾಗಿದೆ. ಕೆಲವು ವಿಮಾನ ನಿಲ್ದಾಣಗಳು ಯಾರ ನಿಯಂತ್ರಣದಲ್ಲಿಯೂ ಇಲ್ಲದ ಕಾರಣ ಸುರಕ್ಷಿತ ಮಾರ್ಗಗಳ ಮೂಲಕ ಕರೆತರಲಾಗುತ್ತಿದೆ. ಅವರ ಪೈಕಿ ಬರುವ ಕನ್ನಡಿಗರನ್ನು ಊರು ತಲುಪಿಸುವ ಕೆಲಸ ಮಾಡಲಾಗುವುದು. ಅಲ್ಲಿನ ಸಹಾಯವಾಣಿಯೊಂದಿಗೆ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಕೇಂದ್ರ ಸರ್ಕಾರದ ಸಹಾಯವಾಣಿಯೂ ಇದೆ. ಕರ್ನಾಟಕದ ಇನ್ನೂರಕ್ಕೂ ಹೆಚ್ವು ಜನ ಸಂಪರ್ಕ ಮಾಡಿದ್ದಾರೆ ಎಂದರು.
ಯುದ್ಧದ ನೀತಿಯಲ್ಲಿ ನಾಗರಿಕರಿಗೆ ತೊಂದರೆಯಾಗುವ ಉದ್ದೇಶವಿರುವುದಿಲ್ಲ. ಆಕಸ್ಮಿಕವಾಗಿ ಒಮ್ಮೊಮ್ಮೆ ಅನಾಹುತಗಳು ಸಂಭವಿಸಬಹುದು. ಉಕ್ರೇನ್ ನಲ್ಲಿರುವ ಭಾರತದ ದೂತವಾಸ ಕಚೇರಿಯವರೂ ಸಹ ಸಂಪರ್ಕದಲ್ಲಿದ್ದಾರೆ ಎಂದರು.
-
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications