ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ: ಕೃಷಿ ಕೋಟಾದಡಿ ಪ್ರವೇಶಕ್ಕೆ ದಾಖಲೆ ಸಲ್ಲಿಸಲು ಮತ್ತೊಂದು ಅವಕಾಶ!

|
Google Oneindia Kannada News

ಬೆಂಗಳೂರು, ಸೆ. 24: ರಾಜ್ಯ ಕೃಷಿ, ತೋಟಗಾರಿಕೆ, ಪಶುಸಂಗೋಪಾನೆ ವಿಶ್ವವಿದ್ಯಾಲಯಗಳಿಗೆ 2020-21ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳಿಗೆ ಆನ್‌ಲೈನ್ ಮೂಲಕ ಕೃಷಿಕರ ಕೋಟಾದಡಿಯಲ್ಲಿ ಪ್ರವೇಶ ಪಡೆಯಲು ಮೂಲ ದಾಖಲಾತಿಗಳನ್ನು ಅಪ್‌ಲೋಡ್ ಮಾಡಲು ಸರ್ಕಾರ ಮತ್ತೊಂದು ಅವಕಾಶ ಕಲ್ಪಿಸಿದೆ. ಸಿಇಟಿ 2020ರಲ್ಲಿ ರ‌್ಯಾಂಕ್ ಪಡೆದು ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಆ. 29 ರೊಳಗೆ ಮೂಲದಾಖಲೆಗಳನ್ನು ಅಪ್‌ಲೋಡ್ ಮಾಡಲು ಕೊನೆಯ ದಿನವಾಗಿತ್ತು.

ಇದೀಗ ಕೃಷಿ ಕೋಟಾದಡಿ ಅರ್ಹತೆ ಪಡೆಯಲು ಮೂಲ ದಾಖಲೆಗಳನ್ನು ಅಪ್‌ಲೋಡ್ ಮಾಡದೇ ಇರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿದ್ದು ದಿನಾಂಕ ವಿಸ್ತರಿಸಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಮೂಲ ದಾಖಲೆಗಳನ್ನು ಇಲ್ಲಿಯವರೆಗೆ ಅಪ್ಲೋಡ್ ಮಾಡದೇ ಇರುವ ಅಭ್ಯರ್ಥಿಗಳು ಸೆ.25 ರಿಂದ 29 ರೊಳಗೆ ಸಂಬಂಧಪಟ್ಟ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ವಿಶ್ವವಿದ್ಯಾಲಯಗಳಲ್ಲಿ ದಾಖಲಾತಿಗಳನ್ನು ಆನ್‌ಲೈನ್‌ ಮೂಲಕ ಅಪ್‌ಲೋಡ್ ಮಾಡಬಹುದಾಗಿದ್ದು, ಕೃಷಿ ಕೋಟಾದಡಿ ಪ್ರವೇಶ ಪಡೆಯಲು ಸಂಬಂಧಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಈಗ ಸೆ. 29 ಕೊನೆಯ ದಿನವಾಗಿರುತ್ತದೆ.

Govt Provided Another Opportunity For Cet Students Upload Documents To Get Agriculture Quota Seats

Recommended Video

Dasara ಉದ್ಘಾಟನೆಯಲ್ಲಿ ಈ ಬಾರಿ 200 ಮಂದಿಗೆ ಮಾತ್ರ ಅವಕಾಶ | Oneindia Kannada

ವಿದ್ಯಾರ್ಥಿಗಳು ಆದಷ್ಟು ಬೇಗ ಅಂತಿಮ‌ ದಿನದೊಳಗೆ ದಾಖಲೆಗಳನ್ನು ಅಪ್‌ಲೋಡ್ ಮಾಡುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಮನವಿ ಮಾಡಿದ್ದಾರೆ. ಅಲ್ಲದೇ ಈ ಮೊದಲು ಶುಲ್ಕ ಪಾವತಿಸಿ ಕೃಷಿ ಕೋಟಾದಡಿ ಪ್ರವೇಶಾತಿಗೆ ಸಂಬಂಧಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅನರ್ಹರಾದ ಅಭ್ಯರ್ಥಿಗಳಿಗೂ ಕೂಡ ಮತ್ತೊಂದು ಅವಕಾಶ ಕಲ್ಪಿಸಿಕೊಡಲಾಗಿದ್ದು, ಸಂಬಂಧಪಟ್ಟ ಆಯಾ ಕೃಷಿ ವಿಶ್ವವಿದ್ಯಾಲಯ ಪರಿಶೀಲನಾ ಕೇಂದ್ರಗಳಿಗೆ ಅಭ್ಯರ್ಥಿಗಳು ಖುದ್ದು ಭೇಟಿ ನೀಡಿ ಸರಿಯಾದ ದಾಖಲೆಗಳನ್ನು ಸಲ್ಲಿಸಿ ಪರಿಶೀಲಿಸಿಕೊಳ್ಳಬಹುದಾಗಿದೆ.

English summary
The government has provided another opportunity for CET students to get state agriculture, horticulture and animal husbandry universities to upload basic enrollment in the 2020-21 academic year under the agriculture quota. That is the schedule that CET 2020 has already received. Last day to upload original documents by Aug 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X