ಉಪನ್ಯಾಸಕರ ನೇಮಕಾತಿ ಸ್ಥಗಿತ, ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು, ಜೂ. 17 : ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ನಡೆಸುತ್ತಿದ್ದ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 1,130 ಹುದ್ದೆಗಳಿದ್ದು ಮೀಸಲಾತಿ ಗೊಂದಲದ ಕಾರಣ ನೇಮಕಾತಿ ಸ್ಥಗಿತಗೊಂಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವೂ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಕನ್ನಡ, ಇಂಗ್ಲಿಶ್, ಹಿಂದಿ, ತೆಲಗು, ಮರಾಠಿ, ಉರ್ದು, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ತರ್ಕಶಾಸ್ತ್ರ, ಭೂಗೋಳಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಸೇರಿದಂತೆ ಹಲವು ವಿಷಯಗಳಿಗೆ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಿದೆ. [ಪಿಯು ಕಾಲೇಜು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ]

puc

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ದ್ವಿತೀಯ ದರ್ಜೆಯಲ್ಲಿ ಶೇ 55 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣನಾಗಿರಬೇಕು ಎಂಬ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ಅಭ್ಯರ್ಥಿಗಳ ಆಕ್ಷೇಪ : ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಶೇ 55ರಷ್ಟು ಅಂಕಗಳನ್ನು ಗಳಿಸಬೇಕು ಎಂಬ ಅರ್ಹತೆಗೆ ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಪರಿಶಿಷ್ಟರು ಮತ್ತು ಅಂಗವಿಕಲರಿಗೆ ಈ ಅಂಕಗಳಲ್ಲಿ ಶೇ 5ರಷ್ಟು ವಿನಾಯ್ತಿ ಇರುತ್ತದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಈ ನಿಯಮ ಜಾರಿಯಲ್ಲಿದೆ. [ಅರ್ಜಿ ಸಲ್ಲಿಸಲು ವಿಳಾಸ]

ಪಿಯುಸಿಯಲ್ಲೂ ಈ ನಿಯಮ ಜಾರಿಗೊಳಿಸಲು ತಿದ್ದುಪಡಿ ತರಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಪ್ರಸ್ತುತ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ನೀತಿಯನ್ನು ಅಳವಡಿಸಲು ಇಲಾಖೆ ನಿರ್ಧರಿಸಿದೆ. ಇದಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅನುಮತಿ ಬೇಕು.

ಆದ್ದರಿಂದ, ನೇಮಕಾತಿ ಪ್ರಕ್ರಿಯೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿತ್ತು. ದಿನಾಂಕವನ್ನು ಜೂನ್ 30ರ ತನಕ ವಿಸ್ತರಣೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+