ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು : ಸಚಿವ ಸಂಪುಟದ ನಿರ್ಣಯ

By Mahesh
|
Google Oneindia Kannada News

ಬೆಂಗಳೂರು, ಮಾರ್ಚ್ 19: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡುವ ಬಗ್ಗೆ ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ನೀಡಿರುವ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದ್ದು, ಕೇಂದ್ರಕ್ಕೆ ಶಿಫಾರಸು ಕಳಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಬಸವ ತತ್ತ್ವದ ಮೇಲೆ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸರ್ಕಾರ ಮಾನ್ಯತೆ ನೀಡಲು ಮುಂದಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲರು ಘೋಷಿಸಿದರು.

ಲಿಂಗಾಯತ ಪ್ರತ್ಯೇಕ ಧರ್ಮ: ಯಾರು, ಏನು ಹೇಳಿದರು?ಲಿಂಗಾಯತ ಪ್ರತ್ಯೇಕ ಧರ್ಮ: ಯಾರು, ಏನು ಹೇಳಿದರು?

Siddaramaiah govt bats for separate Lingayat religion recommendation

ನ್ಯಾ.ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಕೇಂದ್ರದ ಶಿಫಾರಸ್ಸಿಗೆ ಕಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹಾಗೂ ಗಣಿ ಸಚಿವ ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ ಅವರುಗಳು ಒತ್ತಾಯಿಸಿದ್ದರು, ವರದಿಯನ್ನು ಶಿಫಾರಸ್ಸಿಗೆ ಕಳುಹಿಸಬಾರದೆಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ತೋಟಗಾರಿಕಾ ಸಚಿವ ಸೋಮಶೇಖರ್ ಅವರುಗಳು ಆಗ್ರಹಿಸಿದ್ದರು. ಹೀಗಾಗಿ, ಈ ವಿಷಯದಲ್ಲಿ ಗೊಂದಲ ಇನ್ನೂ ಮುಂದುವರೆದಿತ್ತು.

ಆದರೆ, ಮಾರ್ಚ್ 19ರಂದು ನಡೆದ ಸಚಿವ ಸಂಪುಟದಲ್ಲಿ ಲಿಂಗಾಯತ ಹಾಗೂ ವೀರಶೈವ ಎರಡನ್ನು ಐಕ್ಯಗೊಳಿಸಿ ಅಲ್ಪಸಂಖ್ಯಾತ ಮಾನ್ಯತೆ ಹಾಗೂ ಪ್ರತ್ಯೇಕ ಧರ್ಮ ಮಾನ್ಯತೆ ನೀಡಲು ತೀರ್ಮಾನಿಸಲಾಯಿತು.

ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಕೊಡದಂತೆ ಕೇಂದ್ರಕ್ಕೆ ಮನವಿ: ಚಿಮೂಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಕೊಡದಂತೆ ಕೇಂದ್ರಕ್ಕೆ ಮನವಿ: ಚಿಮೂ

English summary
Siddaramaiah led Karnataka Government cabinet today decided to grant separate Lingayat religion status as recommended by Nagamohandas committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X