ಕರ್ನಾಟಕ ಲೋಕಾಯುಕ್ತ ಹುದ್ದೆಗೆ ನ್ಯಾ ವಿಶ್ವನಾಥ್ ಶೆಟ್ಟಿ ಹೆಸರು ಅಂತಿಮ

Posted By:
Subscribe to Oneindia Kannada

ಬೆಂಗಳೂರು, ಜನವರಿ 09: ಕರ್ನಾಟಕ ಲೋಕಾಯುಕ್ತ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನ್ಯಾ ವಿಶ್ವನಾಥ್ ಶೆಟ್ಟಿ ಹೆಸರು ಅಂತಿಮಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಸೋಮವಾರ ಈ ತೀರ್ಮಾನ ಕೈಗೊಳ್ಳಲಾಗಿದೆ. ಉನ್ನತಾಧಿಕಾರ ಸಮಿತಿ ಶಿಫಾರಸಿನ ಮೇರೆಗೆ ರಾಜ್ಯಪಾಲರು ಅಂತಿಮ ಘೋಷಣೆ ಹೊರಡಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಲೋಕಾಯುಕ್ತ ಹುದ್ದೆಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿ ಆನಂದ್ ಬೈರಾರೆಡ್ಡಿ, ನಿವೃತ್ತ ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ಹಾಗೂ ಸಿ.ವಿಶ್ವನಾಥ್ ಶೆಟ್ಟಿ ಅವರ ಹೆಸರು ಪ್ರಸ್ತಾಪವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವನಾಥ್ ಶೆಟ್ಟಿ ಪರ ಒಲವು ತೋರಿದ್ದು , ಇದಕ್ಕೆ ವಿರೋಧ ಪಕ್ಷಗಳು ಸಹಮತ ವ್ಯಕ್ತಪಡಿಸಿದವು.[ಲೋಕಾಯುಕ್ತದಲ್ಲಿ ಭ್ರಷ್ಟಾಚಾರ: ನ್ಯಾ. ಭಾಸ್ಕರ್ ರಾವ್ ಗೆ ಜಾಮೀನು]

Government recommends Justice Vishwanath Shetty's name for Karnataka Lokayukta

ಸುಮಾರು ಒಂದೂವರೆ ವರ್ಷಗಳಿಂದ ಖಾಲಿ ಉಳಿದಿದ್ದ ಲೋಕಾಯುಕ್ತ ಹುದ್ದೆ ನೇಮಕಾತಿಗೆ ಕಾಲ ಕೂಡಿ ಬಂದಿದ್ದು , ಇಂದಿನ ಸಭೆ ವಿವರಗಳನ್ನು ರಾಜ್ಯಪಾಲ ವಜುಭಾಯಿ ವಾಲ ಅವರಿಗೆ ಕರ್ನಾಟಕ ಸರ್ಕಾರ ಸಲ್ಲಿಸಿದೆ.[ಲೋಕಾಯುಕ್ತ ನೇಮಕಕ್ಕೆ ಸಭೆ, ಮತ್ತೆ ನಾಯಕ್ ಹೆಸರು]

ಸಿ.ವಿಶ್ವನಾಥ್ ಶೆಟ್ಟಿ ಅವರು ಮಂಗಳೂರು ಮೂಲದವರಾಗಿದ್ದು , ರಾಜ್ಯ ಹೈಕೋರ್ಟಿನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದು, ಸುಪ್ರೀಂಕೋರ್ಟಿನ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.(ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Karnataka government has recommended the name of Justice P Vishwanath Shetty as the next Lokayukta of Karnataka. The high level committee on Monday decided to send Justice Shetty's name to the Governor for a final approval. With the name now being recommended, it is now up to the governor to take a final call on the matter.
Please Wait while comments are loading...