ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಲೇಜು ತರಗತಿ ಪ್ರಾರಂಭಿಸಲು ಎಸ್‌ಒಪಿ ಪ್ರಕಟಿಸಿದ ರಾಜ್ಯ ಸರ್ಕಾರ

|
Google Oneindia Kannada News

ಬೆಂಗಳೂರು, ನವೆಂಬರ್ 9: ಯುಜಿಸಿ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದಲ್ಲಿ ನವೆಂಬರ್ 17ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದೆ. ತರಗತಿಗಳು ಮತ್ತು ಪರೀಕ್ಷೆಗಳನ್ನು ನಡೆಸುವ ಸಂದರ್ಭದಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಯುಜಿಸಿ ಸೂಚನೆ ನೀಡಿತ್ತು.

Recommended Video

ಎಲ್ಲಾಕಡೆ ಅರಳಿದ ಕಮಲ!! | BJP | Oneindia Kannada

ಅದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ಬಿಡುಗಡೆ ಮಾಡಿದೆ.

 Govt Releases SOP For College Education Activities Reopen

ಕಾಲೇಜು ಮತ್ತೆ ಆರಂಭ: ತರಗತಿಗಳು ಹೇಗೆ ನಡೆಯಲಿವೆ? ಇಲ್ಲಿದೆ ವಿವರ ಕಾಲೇಜು ಮತ್ತೆ ಆರಂಭ: ತರಗತಿಗಳು ಹೇಗೆ ನಡೆಯಲಿವೆ? ಇಲ್ಲಿದೆ ವಿವರ

* ಸ್ನಾತಕೋತ್ತರ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳು ಭೌತಿಕ ತರಗತಿಗೆ ಹಾಜರಾಗಲು ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ತರಬೇಕು.

* ತರಗತಿಗಳನ್ನು ನಡೆಸುವಾಗ ವಿದ್ಯಾರ್ಥಿಗಳ ಸಂಖ್ಯೆ, ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ದೈಹಿಕ ಅಂತರ ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿ ನಡೆಸಲು ಅನುಕೂಲವಾಗುವಂತೆ ವೇಳಾಪಟ್ಟಿಯನ್ನು ಕಾಲೇಜು ಹಂತದಲ್ಲಿ ಸಿದ್ಧಪಡಿಸಬೇಕು.

* ಬೋಧನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಅವಶ್ಯಕತೆ ಇದ್ದಲ್ಲಿ ಪಾಳಿ ವ್ಯವಸ್ಥೆಯಂತೆ ನಡೆಸಬೇಕು.

ಶಾಲೆಗಳ ಆರಂಭ, ವಿದ್ಯಾರ್ಥಿಗಳು,ಶಿಕ್ಷಕರ ಮಾರಣಹೋಮಕ್ಕೆ ನಾಂದಿ ಹಾಡಿದಂತೆ: ಎಚ್‌ಡಿಕೆಶಾಲೆಗಳ ಆರಂಭ, ವಿದ್ಯಾರ್ಥಿಗಳು,ಶಿಕ್ಷಕರ ಮಾರಣಹೋಮಕ್ಕೆ ನಾಂದಿ ಹಾಡಿದಂತೆ: ಎಚ್‌ಡಿಕೆ

* ಆನ್‌ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಮಾನ ಮತ್ತು ಸಮಸ್ಯೆ ಬಗೆಹರಿಸಲು ಭೌತಿಕ ಸಂಪರ್ಕ ತರಗತಿಗಳನ್ನು ನಡೆಸುವುದು.

* ಎಲ್ಲ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಕನಿಷ್ಠ ಒಂದುತಿಂಗಳ ಅಧ್ಯಯನ ಸಾಮಗ್ರಿಗಳನ್ನು ಪ್ರತಿ ಅವಧಿಗೆ ಸಂಬಂಧಿಸಿದಂತೆ ತಯಾರಿಸಿ ವಾಟ್ಸಾಪ್, ಟೆಲಿಗ್ರಾಂ, ಇಮೇಲ್ ಮೂಲಕ ಕಡ್ಡಾಯವಾಗಿ ನೀಡಬೇಕು. ಅಧ್ಯಯನ ಸಾಮಗ್ರಿಗಳನ್ನು ವಿಡಿಯೋ, ಪವರ್ ಪಾಯಿಂಟ್, ಇ-ನೋಟ್ಸ್, ಆಡಿಯೋ ಬುಕ್ಸ್ ಮುಂತಾದವುಗಳ ರೂಪದಲ್ಲಿ ಕಾಲೇಜ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು.

* ಸ್ನಾತಕೋತ್ತರ ಮತ್ತು ಅಂತಿಮ ವರ್ಷ ಹೊರತುಪಡಿಸಿ ಇತರೆ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಬೇಕು.

ಭಾರತದಲ್ಲಿ ಶಾಲಾ-ಕಾಲೇಜು ಆರಂಭಿಸಲು ಅನುಮತಿ: ಯುಜಿಸಿ ಮಾರ್ಗಸೂಚಿಭಾರತದಲ್ಲಿ ಶಾಲಾ-ಕಾಲೇಜು ಆರಂಭಿಸಲು ಅನುಮತಿ: ಯುಜಿಸಿ ಮಾರ್ಗಸೂಚಿ

* ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಮತ್ತು ಎಲ್ಲ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡಿಸಬೇಕು.

* ಬೋಧಕರು, ವಿದ್ಯಾರ್ಥಿಗಳು ಮತ್ತು ಇತರೆ ಸಿಬ್ಬಂದಿ ಕಡ್ಡಾಯವಾಗಿ ಮೂರು ದಿನ ಮುಂದೆ ಆರ್‌ಟಿಪಿಸಿಆರ್ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ಇದ್ದರೆ ಮಾತ್ರ ಹಾಜರಾಗಬೇಕು.

* ಎಲ್ಲ ಕಾಲೇಜುಗಳು ತಮ್ಮ ಸಮೀಪದ ಆರೋಗ್ಯ ಕೇಂದ್ರಗಳೊಂದಿಗೆ ಮ್ಯಾಪಿಂಗ್ ಮಾಡಬೇಕು.

* ಪ್ರತಿ ತರಗತಿಯಿಂದ ಒಬ್ಬ ವಿದ್ಯಾರ್ಥಿಯನ್ನು ಗುರುತಿಸಿ ಆತನಿಂದ ತನ್ನ ಸಹಪಾಠಿಗಳಲ್ಲಿ ಕೋವಿಡ್ ಲಕ್ಷಣ ಕಂಡರೆ ಅದನ್ನು ಕೋವಿಡ್ ಕಾರ್ಯಪಡೆ ಘಟಕದ ಗಮನಕ್ಕೆ ತರುವಂತೆ ಸೂಚಿಸುವುದು.

* ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರು ತರಬೇಕು.

* ಗ್ರಂಥಾಲಯ ಮತ್ತು ಕ್ಯಾಂಟೀನ್ ತೆರೆಯುವಂತಿಲ್ಲ.

* ಸಾಂಸ್ಕೃತಿಕ ಕಾರ್ಯಕ್ರಮಗಳು, ಎನ್‌ಸಿಸಿ, ಎನ್ಎಸ್ಎಸ್ ಚಟುವಟಿಕೆ ಶುರುಮಾಡುವಂತಿಲ್ಲ.

* ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಟ್ಟು ಅದರಲ್ಲಿ ಕೋವಿಡ್ ಪ್ರಥಮ ಚಿಕಿತ್ಸೆಗಾಗಿ ಕೋವಿಡ್ ಕಿಟ್‌ಗಳನ್ನು ಹಾಗೂ ಪಲ್ಸ್ ಆಕ್ಸಿ ಮೀಟರ್‌ಗಳನ್ನು ಒದಗಿಸಬೇಕು.

* ಕೊರೊನಾ ವೈರಸ್ ನಿಯಂತ್ರಣಕ್ಕೆ ಮಾಸ್ಕ್, ದೈಹಿಕ ಅಂತರ ಸೇರಿದಂತೆ ಸರ್ಕಾರ ಹೊರಡಿಸಿರುವ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

English summary
Karnataka government has released the SOP for all state colleges to reopen teaching activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X