
ತೊಗರಿ ಬೆಳೆಗೆ ರೋಗ: ರೈತರಿಗೆ 10,000 ಪರಿಹಾರ ಘೋಷಣೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಜನವರಿ 24: ಕಲ್ಯಾಣ ಕರ್ನಾಟಕ ಭಾಗದ ತೊಗರಿ ಬೆಳೆಯುವ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಸಂಭವಿಸಿದ್ದ ತೊಗರಿ ಬೆಳೆ ನಾಶಕ್ಕೆ ಪ್ರತಿ ಹೆಕ್ಟೇರ್‌ಗೆ 10,000 ಪರಿಹಾರವನ್ನು ರಾಜ್ಯ ಸರ್ಕಾರ ಮಂಗಳವಾರ ಘೋಷಿಸಿದೆ.
ಬೆಂಗಳೂರಿನಲ್ಲಿನ ಸಭೆ ಬಳಿಕ ಪರಿಹಾರ ಹಣ ಘೋಷಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರ್ ಗೆ 10,000 ರೂ. ಗಳಂತೆ NDRF - SDRF ಮಾರ್ಗಸೂಚಿಯಡಿ ಗರಿಷ್ಟ 2 ಹೆಕ್ಟೇರ್‌ಗೆ ಪರಿಹಾರ ಹಣ ಸೀಮಿತ ಮಾಡಿ ಘೋಷಿಸಲಾಗಿದೆ ಎಂದು ಅವರು ವಿವರಿಸಿದರು.
ಕರ್ನಾಟಕ ಪ್ರವಾಸ ಕೈಗೊಳ್ಳಲು ಮುಂಬೈ ಜನರಿಗೆ ಸಿಹಿಸುದ್ದಿ ನೀಡಿದ IRCTC: ಏನಿದು ಕೊಡುಗೆ?
ಸುಮಾರು 02ಲಕ್ಷ ಹೇಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಲೆ ನಾಶವಾಗಿದೆ. ಅದಕ್ಕಾಗಿ ಘೋಷಣೆಯಾದ ಪರಿಹಾರದ ಒಟ್ಟು ಮೊತ್ತವು 223 ಕೋಟಿ ರೂಪಾಯಿ ಆಗಲಿದೆ ಎಂದು ಸರ್ಕಾರ ಅಂದಾಜಿಸಿದೆ.
ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ತದನಂತರ ನವೆಂಬರ್ ತಿಂಗಳಿನಲ್ಲಿ ತಲೆದೋರಿದ ಒಣ/ ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಆವರಿಸಿದೆ. ಈ ರೋಗವು ಕಲ್ಯಾಣ ಕರ್ನಾಟಕ ಭಾಗದ ಮೂರು ಜಿಲ್ಲೆಗಳಲ್ಲಿ ಉಲ್ಬಣಗೊಂಡು ಬೆಳೆಹಾನಿಯಾಗಿ ರೈತರು ಸಂಕಷ್ಟಕ್ಕೆ ತುತ್ತಾಗಿದ್ದರು.
ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ್ ಜಿಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಒಟ್ಟಾರೆಯಾಗಿ 2.2278 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿನ ತೊಗರಿ ಬೆಳೆಗೆ ನೆಟೆ ರೋಗ ಬಡಿದಿತ್ತ. ಹಾನಿಗೊಳಗಾದ ರೈತರ ನೆರೆವಿಗೆ ಧಾವಿಸುವುದಾಗಿ ಕಲಬುರಗಿ ಭೇಟಿ ವೇಳೆ ಮುಖ್ಯಮಂತ್ರಿಗಳು ತಿಳಿಸಿದ್ದರು.