• search

ಮಗುವೆ ಮರಳಿ ಬಾ ಶಾಲೆಗೆ: ಮೇ 29ರಿಂದ ಸರ್ಕಾರಿ ಶಾಲೆಗಳು ಆರಂಭ

By Nayana
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಬೆಂಗಳೂರು, ಮೇ 28: ಬೇಸಿಗೆ ರಜೆಯ ಬಳಿಕ ಮೇ 29ರಿಂದ 2018-19ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲೆಗಳು ಆರಂಭಗೊಳ್ಳಲಿವೆ. ಮಕ್ಕಳು ಈ ದೀರ್ಘ ರಜೆಯಲ್ಲಿ ಅಪ್ಪ, ಅಮ್ಮ, ಅಜ್ಜ, ಅಜ್ಜಿಯೊಂದಿಗೆ ನಲಿದಾಡಿ ಇದೀಗ ಮತ್ತೆ ಶಾಲೆ ಆರಂಭವಾಯಿತಾ ಹೋಗಲೇ ಬೇಕಾ ಎನ್ನುವ ಬೇಜಾರದ ಮಾತುಗಳು ಕೂಡ ಆರಂಭವಾಗಿದೆ.

  ಮೇ 28ರಂದು ಶಾಲೆಗಳಿಗೆ ಶಿಕ್ಷಕರು ಮತ್ತು ಅಧಿಕಾರಿಗಳು ಆಗಮಿಸಿ ಶಾಲಾ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕೃತವಾಗಿ ತರಗತಿಗಳು ಮೇ 29ರಿಂದ ಆರಂಭವಾಗಲಿದೆ. ಶಾಲೆ ಆರಂಭಕ್ಕೂ ಮುನ್ನ ಶಾಲಾ ವೇಳಾಪಟ್ಟಿ, ಸ್ವಚ್ಛತೆ, ಶಾಲಾ ಅಭಿವೃದ್ಧಿ ಯೋಜನೆ ಕುರಿತು ಆಡಳಿತ ಮಂಡಳಿಯು ಸಂಪೂರ್ಣ ಆಸಕ್ತಿ ವಹಿಸಬೇಕು.

  ಎಲ್ಲಾ ಶಾಲೆಗಳಲ್ಲಿ ಮಾದಕ ವಸ್ತುಗಳ ಜಾಗೃತಿಗೆ ಸಹಾಯವಾಣಿ

  ಶಾಲಾ ಪ್ರಾರಂಭೋತ್ಸವವನ್ನು ಒಂದು ಯಾಂತ್ರಿಕ ಪ್ರಕ್ರಿಯೆ ಎಂದು ಪರಿಗಣೊಸದೆ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಶಾಲಾ ಕಟ್ಟಡಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಶಾಲೆ ಆರಂಭವನ್ನು ಯುಗಾದಿ ಹಬ್ಬದಂತೆ ಆಚರಿಸಲು ಶಿಕ್ಷಕರಿಗೆ ಹಾಗೂ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

  Govt schools reopen from tomorrow

  ಶಾಲಾ ಪ್ರಾರಂಭೋತ್ಸವ ಮುಗಿದ ಬಳಿಕ ಕ್ರೋಢೀಕೃತ ವರದಿಯನ್ನು ಜಿಲ್ಲಾ ಉಪನಿರ್ದೇಶಕರಿಗೆ ಜೂ.10ರೊಳಗೆ ಆಯುಕ್ತರ ಕಚೇರಿಗೆ ಕಳುಹಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಎಂ.ಟಿ. ರೇಜು ಸೂಚನೆ ನೀಡಿದ್ದಾರೆ. ಸೋಮವಾರದಿಂದ ಪಠ್ಯಪುಸ್ತಕ ಸರಬರಾಜು ಮಾಡಲಾಗುತ್ತದೆ. ಆದರೆ, ಸಮವಸ್ತ್ರ, ಶೂ ಮತ್ತು ಸಾಕ್ಸ್‌ ವಿತರಣೆ ವಿಳಂಬವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

  ಪಠ್ಯಪುಸ್ತಕ ಮುದ್ರಣ ಕಾರ್ಯ ಮುಗಿದಿದ್ದು, ಮೇ 28ರಿಂದಲೇ ಸರಬರಾಜು ಮಾಡಲಾಗುತ್ತದೆ. ಕಲಬುರಗಿ ಮತ್ತು ಬೆಂಗಳೂರು ವಿಭಾಗಕ್ಕೆ ಸಮವಸ್ತ್ರ ಪೂರೈಕೆ ಮಾಡಲಾಗಿದೆ. ಬೆಳಗಾವಿ ಮತ್ತು ಮೈಸೂರು ವಿಭಾಗಕ್ಕೆ ಟೆಂಡರ್ ನೀಡಲಾಗಿದ್ದು ಸದ್ಯದಲ್ಲೇ ವಿಭಾಗಕ್ಕೆ ಪೂರೈಕೆಯಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ನಿರ್ದೇಶಕ ಬಸವರಾಜು ತಿಳಿಸಿದ್ದಾರೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Government schools in the state will be reopened by Tuesday as teachers and officers would join for the duties from Monday itself. Education department has already distributing text books, uniforms to respective schools.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more