ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು, ಸೆಪ್ಟಂಬರ್ 16: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ವೇಳೆ ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ಕ್ಕೆ ಪ್ರಜಾಪ್ರಭುತ್ವ ರಕ್ಷಣೆಯ ಕಾಳಜಿಯೇ ಇಲ್ಲ. ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಜರಿದಿದ್ದಾರೆ.

ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸೋಮವಾರ ಟ್ವೀಟ್ ಮಾಡಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಈ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಮೇಲಾಯಿತು. ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದಿದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಒತ್ತಾಯಿಸಿದರು.

Govt Should Conduct BBMP Taluk and Zilla Panchayat Elections to Protect Democracy HD Kumaraswamy

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರ ಸ್ತಂಭಗಳಾದ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ ಯಾಕೆ?. ಸ್ಥಳೀಯ ಚುನಾವಣೆ ಕಡೆಗಣನೆ ಮಾಡಿ ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಅವರು ದೂರಿದ್ದಾರೆ.

ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಒಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ನಿಮ್ಮಿಂದ ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ.

Govt Should Conduct BBMP Taluk and Zilla Panchayat Elections to Protect Democracy HD Kumaraswamy

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಎಂದು ಖಾರವಾಗಿ ಅವರು ಪ್ರಶ್ನಿಸಿದ್ದಾರೆ. ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ?

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಅವರು ಆಗ್ರಹಿಸಿದ್ದಾರೆ.

ನಾಲ್ಕು ವರ್ಷದಿಂದ ಬಿಬಿಎಂಪಿಗಿಲ್ಲ ಚುನಾವಣೆ ಭಾಗ್ಯ

ಸದ್ಯ ಬಿಬಿಎಂಪಿ ಚುನಾವಣೆ ಆಗಿಯೇ ಕೆಲವು ವರ್ಷಗಳಾಗಿವೆ. ಇದರ ಆಡಳಿತ ಯಂತ್ರ ಅಧಿಕಾರಿಗಳು, ಆಯುಕ್ತರಿಂದಲೇ ನಡೆಯುತ್ತಿದೆ. ಕೊನೆಯದಾಗಿ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರೇ ಮೇಯರ್ ಆಗಿದ್ದರು. ಅವರ ಅವಧಿ ಮುಗಿದ ಬಳಿಕ 2020ರಿಂದ ಈಚೆಗೆ ಚುನಾವಣೆ ನಡೆದೇ ಇಲ್ಲ. ನಾಲ್ಕು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಕಂಡಿಲ್ಲ.

ಅದೇ ರೀತಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಸಹ ನಡೆದಿಲ್ಲ. ಹಿಂದೆ ಇದ್ದ ಬಿಜೆಪಿ ಸರ್ಕಾರದ ಸಮಯದಲ್ಲಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು. ಈಗಿನ ಕಾಂಗ್ರೆಸ್ ಸರ್ಕಾರ ಸಹ ಆ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ. ಈ ಕುರಿತು ರಾಜ್ಯ ಸರ್ಕಾರದ ನಿಲುವು, ನಿರ್ಧಾರದ ಬಗ್ಗೆ ತಿಳಿಯಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+