ಮಹಿಳೆಯರ ಸುರಕ್ಷತೆ ಬಗ್ಗೆ 'ಗ್ಯಾರಂಟಿ' ಕೊಡಿ: ಸರ್ಕಾರಕ್ಕೆ ಆಗ್ರಹ
ಬೆಂಗಳೂರು, ಡಿಸೆಂಬರ್ 18: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಇನ್ನೂ ಮಹಿಳಾ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡದ ಕ್ರಮಕ್ಕೆ ಭಾರೀ ಖಂಡನೆ ವ್ಯಕ್ತವಾಗಿದೆ. ಆಯೋಗಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಕ ಮಾಡಬೇಕು. ಮಹಿಳೆರಯ ಸುರಕ್ಷತೆಗೆ ಗ್ಯಾರಂಟಿ ಕೊಡಬೇಕು ಎಂಬ ಆಗ್ರಹ ಕೇಳಿ ಬಂದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳು, ಅಮಾನವೀಯ ಘಟನಾ ಪ್ರಕರಣಗಳು, ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ಆಮ್ ಆದ್ಮಿ ಪಕ್ಷದ ಮಹಿಳಾ ಕಾರ್ಯಕರ್ತರು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸೋಮವಾರ ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ಮಾಡಿದರು. ರಾಜ್ಯ ಸರ್ಕಾರಕ್ಕೆ ಮಹಿಳೆಯರ ಬಗ್ಗೆ ಕಾಳಜಿ ಇಲ್ಲ ಎಂದು ಕಿಡಿ ಕಾರಿದರು.

ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಕೊಟ್ಟು ಕಾಂಗ್ರೆಸ್ ಸರ್ಕಾರದ ನಾಟಕವಾಡುತ್ತಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಮಹಿಳಾ ಆಯೋಗ ಏನು ಮಾಡುತ್ತಿದೆ?. ರಾಜ್ಯ ಸರ್ಕಾರಕ್ಕೆ ನಾಚಿಕೆ ಇದ್ದರೆ ಕೂಡಲೇ ಮಹಿಳಾ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಪಕ್ಷದ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷ ವೀಣಾ ಸರ್ರಾವ್ ಒತ್ತಾಯಿಸಿದರು.
ವಾರ್ಷಿಕ ಮಹಿಳಾ ದೌರ್ಜನ್ಯ 10,000 ಕೇಸ್ ವರದಿ
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಳಗಾವಿ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಪ್ರತಿ ವರ್ಷ 10 ಸಾವಿರ ಮಹಿಳಾ ದೌರ್ಜನ್ಯ ಪ್ರಕರಣ ವರದಿಯಾಗುತ್ತಿವೆ. ರಾಜ್ಯದಲ್ಲಿ ಮಹಿಳಾ ಆಯೋಗದ ಅಧ್ಯಕ್ಷರನ್ನೇ ನೇಮಕ ಮಾಡದೇ ಸರ್ಕಾರ ತಾತ್ಸಾರ ನೀತಿ ಅನುಸರಿಸುತ್ತಿದೆ. ಆರೋಪಿಗಳಿಗೆ ಶಿಕ್ಷೆಯಾಗುತ್ತಿಲ್ಲ , ಪೊಲೀಸ್ ಠಾಣೆಗಳಲ್ಲಿ ಮಹಿಳೆಯರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಎಎಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ಕಿಡಿ ಕಾರಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಯಾವ ಕ್ರಮವನ್ನೂ ತೆಗೆದುಕೊಳ್ಳುತ್ತಿಲ್ಲ. ಮಹಿಳೆಯರ ಸುರಕ್ಷತೆಗೆ ಇರುವ ಅಪ್ಲಿಕೇಶನ್ ಕೆಲಸ ಮಾಡುತ್ತಿಲ್ಲ, ಅದು ಅಪ್‌ಡೇಟ್ ಆಗಿಲ್ಲ. 112 ಗೆ ಕರೆ ಮಾಡಿದರೆ ಸರಿಯಾಗಿ ಸ್ಪಂದಿಸುತ್ತಿಲ್ಲ.
ಸರ್ಕಾರಕ್ಕೆ ಎಚ್ಚರಿಕೆ
ರಾಜ್ಯ ಸರ್ಕಾರ, ಪೊಲೀಸ್ ಇಲಾಖೆಗೆ ಇದರ ಬಗ್ಗೆ ಕಾಳಜಿಯೇ ಇಲ್ಲ, ಮಹಿಳೆಯರ ರಕ್ಷಣೆ ಒದಗಿಸದೆ ಯಾವ ಸಬಲೀಕರಣ ಮಾಡ್ತೀರಾ? ಕೂಡಲೇ ಮಹಿಳಾ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡದಿದ್ದಲ್ಲಿ ಪಕ್ಷವು ತೀವ್ರ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ವೀಣಾ ರಾವ್, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್, ಅಂಜನಾ ಗೌಡ, ಮರಿಯ, ಪುಷ್ಪ ಕೇಶವ್ , ಸತ್ಯವಾಣಿ ಸೇರಿದಂತೆ ಇತರೆ ಮುಖಂಡರು ಮತ್ತು ಕಾರ್ಯಕರ್ತೆಯರು ಭಾಗವಹಿಸಿದ್ದರು.
-
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications