ಮುರುಘಾ ಶರಣರದ ಪ್ರಕರಣದಲ್ಲಿ ಸರ್ಕಾರ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು: ಕುಮಾರಸ್ವಾಮಿ
ಬೆಂಗಳೂರು, ಆ.31: ಪೋಸ್ಕೋ ಪ್ರಕರಣದ ಆರೋಪಿ ಆಗಿರುವ ಮುರುಘಾ ಶರಣರ ವಿರುದ್ಧ ಸರ್ಕಾರ ಎಚ್ಚರಿಕೆಯ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ನನ್ನ ಮೌನದ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ದಾಖಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನಾನು ಮತ್ತು ಸಿದ್ದರಾಮಯ್ಯ ಮೌನಕ್ಕೆ ಶರಣನಾಗಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಇಂಥ ಪ್ರಕರಣಕ್ಕೆ ನಾನು ಮೌನಕ್ಕೆ ಶರಣಾಗುವ ಪ್ರಶ್ನೆಯೇ ಇಲ್ಲ. ಇದು ಸರಕಾರದ ಜವಾಬ್ದಾರಿ, ಅವರ ವಿರುದ್ಧ ಇರುವ ಆರೋಪಗಳ ಬಗ್ಗೆ ಮನಗಂಡು ಸಂಬಂಧಪಟ್ಟ ಇಲಾಖೆಗಳು ತೀರ್ಮಾನ ಮಾಡಬೇಕು, ಅದು ಅವರ ಕರ್ತವ್ಯ. ಇದನ್ನು ರಾಜಕೀಯವಾಗಿ ಯಾರು ಬಳಕೆ ಮಾಡಿಕೊಳ್ಳಬಾರದು ಎಂದು ಮಾರ್ಮಿಕವಾಗಿ ನುಡಿದರು.
ಪ್ರಕರಣಗಳಿಂದ ಧಾರ್ಮಿಕ ಕ್ಷೇತ್ರದ ಮೇಲೆ ಇರುವ ನಂಬಿಕೆಗೆ ಅಪಚಾರ ಆಗಬಾರದು. ಕಾನೂನು ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗೊಂದಲ ಆಗದಂತೆ ಸರಕಾರ ತೀರ್ಮಾನ ಮಾಡಬೇಕು. ಇಲ್ಲಿ ಸಮುದಾಯದ ಪ್ರಶ್ನೆ ಅಲ್ಲ, ದೇಶದಲ್ಲಿ ನಾವು ಕಾನೂನು ರಚನೆ ಮಾಡಕೊಂಡಿದ್ದೇವೆ. ಯಾರು ಯಾವ ಸ್ಥಾನದಲ್ಲಿ ಇದ್ದಾರೆ, ಅವರು ಇಲ್ಲಿ ಉತ್ತರ ಕೊಡಬೇಕು ಎಂದರು ಎಂದು ಹೇಳಿದರು.

ಮೇಲೆ ಪಂಚರತ್ನ ರಥಯಾತ್ರೆಗೆ ಶೀಘ್ರದಲ್ಲಿಯೇ ದಿನಾಂಕ
ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಳೆ ನಿಂತ ಮೇಲೆ ಪ್ರಾರಂಭಿಸಲಾಗುವುದು. ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಜೆಪಿ ನಗರದ ತಮ್ಮ ನಿವಾಸಲ್ಲಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗನ ಜೊತೆ ಗಣೇಶನ ಪೂಜೆ ನೆರವೇರಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಳೆ ನಿಂತ ಮೇಲೆ ಸರಿಯಾದ ಮೂಹೂರ್ತ ನಿಗದಿ ಮಾಡಿ ಪಂಚರತ್ನ ಕಾರ್ಯಕ್ರಮ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.
ಮುಂದಿನ ತಿಂಗಳು ಪಿತೃಪಕ್ಷ, ದಸರಾ ಇದೆ. ಒಮ್ಮೆ ಪ್ರಾರಂಭ ಮಾಡಿದರೆ 120-130 ಕ್ಷೇತ್ರದಲ್ಲಿ ಮಾಡುತ್ತೇವೆ. ಹೀಗಾಗಿ ಸರಿಯಾದ ಸಮಯ ನೋಡಿಕೊಂಡು ಪ್ರಾರಂಭಿಸುವುದಾಗಿ ಹೇಳಿದ ಅವರು, ಪ್ರವಾಸದ ವೇಳೆ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಅಲ್ಲದೆ ಗ್ರಾಮ ವಾಸ್ತವ್ಯದಲ್ಲಿ 14-15 ಕಾರ್ಯಕ್ರಮಗಳು ಇರಲಿವೆ ಎಂದರು.

ರಾಮನಗರಕ್ಕೆ ವಿಶೇಷ ಪ್ಯಾಕೇಜ್ ನೀಡಲು ಮನವಿ
ರಾಮನಗರ ಮಳೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿಗಳು ರಾಮನಗರಕ್ಕೆ ಭೇಟಿ ನೀಡಿದ್ದರು. ಅವರಿಗೆ ನಿಜವಾದ ಸಮಸ್ಯೆ ಅರಿವಾಗಿದೆ. ಎಲ್ಲವನ್ನು ಅರಿತಿದ್ದಾರೆ. ಎನ್ ಡಿ ಆರ್ ಎಫ್ ನಿಯಮದಂತೆ ಪರಿಹಾರ ಕೊಟ್ಟರೆ ಅಲ್ಲಿ ಸಮಸ್ಯೆ ಪರಿಹಾರ ಆಗುವುದಿಲ್ಲ. ಹೀಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಮನವಿ ಮಾಡಿದ್ದೇನೆ ಎಂದು ಹೇಳಿದರು.
ರೇಷ್ಮೆ ನೂಲು ಸರ್ವ ನಾಶ ಆಗಿದೆ. ಮೂಲಭೂತ ಸೌಕರ್ಯಗಳು ಹಾಳಾಗಿವೆ, ಮನೆಗಳು ಬಿದ್ದಿವೆ. ಅದಕ್ಕೆ ದೊಡ್ಡ ಪರಿಹಾರ ಕೊಡಬೇಕಾಗಿದೆ. ಸಿಎಂ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಪರಿಹಾರ ಕೊಡಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದರು.
ಹಬ್ಬದ ಸಂದರ್ಭದಲ್ಲಿ ನಾಡಿಗೆ ಬಂದಿರುವ ದೊಡ್ಡಮಟ್ಟದ ಆಪತ್ತಿನಿಂದ. ದೊಡ್ಡಮಟ್ಟದ ಅನಾಹುತಗಳಾಗಿವೆ. ಮತ್ತೊಂದೆಡೆ ಸಮಾಜದಲ್ಲಿ ಸಂಘರ್ಷ ವಾತಾವರಣ ಉಂಟು ಮಾಡಲು ಕೆಲ ಶಕ್ತಿಗಳು ಪ್ರಯತ್ನ ಮಾಡುತ್ತಿರುವುದು ಕಂಡಿದ್ದೇವೆ. ಈ ಎರಡು ವಿಚಾರದಲ್ಲಿ ಭಗವಂತ ಸಮಾಜದಲ್ಲಿ ಶಾಂತಿ ನೆಲಿಸುವ ರೀತಿಯಲ್ಲಿ ಗಣೇಶನ ಅನುಗ್ರಹ ದೊರಕಲಿ ಎಂದು ಅವರು ಪ್ರಾರ್ಥಿಸಿದರು.

ಸಂಸದ ಪ್ರತಾಪ ಸಿಂಹಗೆ ತಿರುಗೇಟು
ರಾಮನಗರದಲ್ಲಿ ಭಕ್ಷಿ ಕೆರೆ ಒಡೆಯಲು ಕಾರಣ ಏನು? ಭಕ್ಷಿ ಕೆರೆ ಒಡೆದಿದ್ದಕ್ಕೆ ರಾಮನಗರದಲ್ಲಿ ನೀರಿನ ಪ್ರವಾಹ ಆಗಿದ್ದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕೆಲಸ ಆಗಿದೆ. ನೀರು ಎಲ್ಲೂ ಹೋಗಲು ಸಾಧ್ಯವಿಲ್ಲ. ಕೆಲಸ ಮಾಡಬೇಕಾದರೆ ಸಿಕ್ಕಸಿಕ್ಕ ಕಡೆ ಕ್ವಾರಿ ಮಾಡಿದ್ದಾರೆ. ಸಿಕ್ಕಸಿಕ್ಕ ಕಡೆ ಮಣ್ಣು ಎತ್ತಿದ್ದಾರೆ, ರಾಜಕಾಲುಗಳಲ್ಲಿ ಸರಾಗವಾಗಿ ನೀರು ಹರಿಯಲು ಅವಕಾಶವಿಲ್ಲ. ಭಕ್ಷಿ ಕೆರೆಗೆ ನಿರೀಕ್ಷೆಗೂ ಮೀರಿ ನೀರು ಬರಲು ಹೆದ್ದಾರಿಯೇ ಕಾರಣ. ರಾಮನಗರದ ಬಲ ಭಾಗದಲ್ಲಿ ಜೋಳಪ್ಪನ ಕೆರೆ ಇದೆ. ಅಲ್ಲಿಯೂ ಸಹ ನೀರು ನುಗ್ಗಲು ರಾಷ್ಟೀಯ ಹೆದ್ದಾರಿ ಅವೈಜ್ಞಾನಿಕ ಕೆಲಸವೇ ಕಾರಣ. ನೀರು ಹೋಗಲು ಜಾಗವಿಲ್ಲ, ಅದನ್ನು ನೋಡಿ ಹೇಳಿದ್ದೇನೆ. ಈ ಮಹಾನುಭಾವ ರಸ್ತೆ ಕೆಲಸಕ್ಕೆ ಶ್ರಮಪಟ್ಟು ನಿರ್ವಹಣೆ ಮಾಡಿದ್ದೇನೆ ಎಂದು ಪೋಸ್ ಕೊಟ್ಟರಲ್ಲಾ, ಏನಾದರೂ ವೇಗವಾಗಿ ಕೆಲಸವಾಗಿದ್ದರೆ ನಾನು ಸಿಎಂ ಆಗಿದ್ದಾಗ ಭೂ ಸ್ವಾಧೀನಕ್ಕಾಗಿ ಎಂಟು ಬಾರಿ ಸಭೆ ಮಾಡಿದ್ದು ಕಾರಣ. ರೈತರ ಮನವೊಲಿಸಿದಕ್ಕೆ ಪರಿಹಾರ ಕಲ್ಪಿಸಿದಕ್ಕೆ ಕೆಲಸದಲ್ಲಿ ವೇಗ ಕಂಡಿದ್ದೇವೆ. ಇವರು ಹೋಗಿ ರಸ್ತೆಯಲ್ಲಿ ನಿಂತು ಫೋಟೋ ತೆಗಿಸಿದಕ್ಕೆ ಅಲ್ಲ. ಇವರಿಗೆ ಪರಿಜ್ಞಾನ ಇದ್ದರೆ, ನೀರು ಯಾಕೆ ನುಗ್ಗಿತು ಎಂದು ತಿಳಿದುಕೊಳ್ಳಲಿ ಎಂದು ಪ್ರತಾಪ್ ಸಿಂಹ ಅವರಿಗೆ ತಿರುಗೇಟು ನೀಡಿದರು.
ಹೆದ್ದಾರಿಯಲ್ಲಿ ನೀರು ನಿಂತಿದೆ. ಪ್ರಮುಖ ರಸ್ತೆಗಳಲ್ಲಿಯೂ ನೀರು ನಿಂತಿದೆ. ನೀರು ಹೋಗಲು ಎಲ್ಲಿ ವ್ಯವಸ್ಥೆ ಮಾಡಿದ್ದಾರೆ. ಮಾತು ಎಲ್ಲರೂ ಮಾತನಾಡಬಹುದು, ಮಾತಿನಲ್ಲಿ ಕೆಲಸ ಆಗಲ್ಲ. ಸಮಸ್ಯೆ ಎಲ್ಲಿದೆ, ಹೇಗೆ ಸರಿಪಡಿಸಬೇಕು ಎಂದು ತಿಳಿಯಬೇಕು. ಮಂಡ್ಯ ಸಂಸದರಿಗೂ, ಪ್ರತಾಪ್ ಸಿಂಹ್ ಅವರಿಗೆ ಕ್ರೆಡಿಟ್ ವಾರ್ ನಡೆದಿತ್ತು. ಹಣೆಬರಹ ಎಲ್ಲಿಗೆ ಬಂದಿದೆ ನೋಡಿ, ಅದನ್ನು ಸರಿಪಡಿಸಿಕೊಳ್ಳಪ್ಪ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರದಲ್ಲಿ ಎಲ್ಲರೂ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು. ಯಾರೂ ಆದೇಶ ಉಲ್ಲಂಘನೆ ಮಾಡಬಾರದು. ಹಬ್ಬಗಳು ಆಚರಣೆ ಮಾಡೋರು ಪರಿಶುದ್ಧ ಮನಸ್ಸಿನಿಂದ ಹಬ್ಬಗಳನ್ನು ಆಚರಣೆ ಆಗಬೇಕು. ಇದರಲ್ಲಿ ಪೈಪೋಟಿ ಬೇಡ. ಯಾರು ಕೂಡ ಜಿದ್ದಿಗೆ ಬಿದ್ದು ಹಬ್ಬ ಆಚರಣೆ ಮಾಡಬಾರದು. ಸರ್ವ ಜನಾಂಗದ ಶಾಂತಿಯ ತೋಟದ ಕರ್ನಾಟಕದಲ್ಲಿ ಎಲ್ಲರೂ ನೆಮ್ಮದಿಯಿಂದ ಜೀವನ ನಡೆಸಬೇಕು. ಯಾರೂ ಗಲಾಟೆ ಮಾಡಿಕೊಂಡು ಹಬ್ಬ ಆಚರಣೆ ಮಾಡೋದು ಬೇಡ ಎಂದು ಅವರು ಮನವಿ ಮಾಡಿದರು.
ಬಳಿಕ ಪದ್ಮನಾಭ ನಗರದಲ್ಲಿರುವ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ವಿನಾಯಕನ ಪೂಜೆಯಲ್ಲಿ ಪಾಲ್ಗೊಂಡ ನಂತರ ಕುಮಾರಸ್ವಾಮಿ ಅವರು ತಂದೆ ತಾಯಿಯವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ನಾಡಿನ ಜನರಿಗೆ ಗಣೇಶೋತ್ಸವದ ಶುಭಾಶಯ ಕೋರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, 13-14 ವರ್ಷಗಳಿಂದ ಈ ಮನೆಯಲ್ಲಿ ವಿಶೇಷ ಪೂಜೆ ಮಾಡಿಕೊಂಡು ಬರುತ್ತಿದ್ದೇವೆ. ದೇವರ ಅನುಗ್ರಹದಿಂದ ನಾನು ಇವತ್ತು ಪೂಜೆ ಮಾಡುವ ಹಾಗೆ ಹಾಗಿದೆ. ಇಷ್ಟು ಸುಧಾರಣೆ ಆಗುತ್ತೇನೆಂದು ನಾನು ಅಂದುಕೊಂಡಿರಲಿಲ್ಲ. ನಾನು ಅನೇಕ ಕಷ್ಟಗಳನ್ನು ಅನುಭವಿಸಿದ್ದೇನೆ. ಮುಂದಿನ ದಿನಗಳಲ್ಲಿ ನನ್ನ ಹೋರಾಟಕ್ಕೆ ಗಣಪತಿ ಶಕ್ತಿ ಕೊಡುವ ನಂಬಿಕೆ ಇದೆ ಎಂದು ಗೌಡರು ಆಶಾಭಾವನೆ ವ್ಯಕ್ತಪಡಿಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications