ಶಿಕ್ಷಕರ ವರ್ಗಾವಣೆಗೆ ಇನ್ನೂ ಕೂಡಿಬರದ ಮುಹೂರ್ತ

ಬೆಂಗಳೂರು, ಜೂನ್‌ 30: ಇನ್ನೂ ಕೆಲ ಅರ್ಜಿಗಳು ಹೈಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ ಎಲ್ಲಾ ಅರ್ಜಿಗಳು ಇತ್ಯರ್ಥಗೊಂಡ ಬಳಿಕವೇ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಕೈಗೆತ್ತಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಒಂದು ಪ್ರಕರಣದಲ್ಲಿ ಹೈಕೋರ್ಟ್‌ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ್ದರೂ ನ್ಯಾಯಾಲಯದಲ್ಲಿ ಇನ್ನೂ ಏಳೆಂಟು ಅರ್ಜಿಗಳು ಬಾಕಿ ಇದೆ. ಈ ಎಲ್ಲ ಅರ್ಜಿಗಳು ವಜಾಗೊಂಡ ನಂತರವೇ ವರ್ಗಾವಣೆ ಕೌನ್ಸೆಲಿಂಗ್‌ ನಡೆಸಲು ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರ ಪ್ರದೇಶದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ಶಿಕ್ಷಕರು ಕಡ್ಡಾಯವಾಗಿ ಹಳ್ಳಿಗಳಿಗೆ ವರ್ಗಾವಣೆಗೊಳಿಸಲು ಸರ್ಕಾರ 2018ರ ಜನವರಿ 1 ರಂದು 6 ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದ್ದರೂ ಕಾನೂನು ತೊಡಕಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ನಡೆಸಲು ಇಲಾಖೆಗೆ ಅಡ್ಡಿಯಾಗಿ ಪರಿಣಮಿಸಿದೆ.

Govt teachers yet to wait for transfer counselling

ಈ ಹಿಂದೆ ಜೂನ್‌ 18ರಿಂದಲೇ ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್‌ ನಡೆಸುವುದಾಗಿ ಶಿಕ್ಷಣ ಇಲಾಖೆ ಪ್ರಕಟಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+