ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾಷಾ ಮಾಧ್ಯಮ ತೀರ್ಪು, ಶುಕ್ರವಾರ ಸಿಎಂ ಸಭೆ

|
Google Oneindia Kannada News

ಬೆಂಗಳೂರು, ಮೇ 8 : ಕನ್ನಡ ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಕುರಿತು ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಯಲಿದೆ. ಸಭೆಯಲ್ಲಿ ತಜ್ಞರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನವನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

ಮೇ 9ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಪ್ರಮುಖ ಸಾಹಿತಿಗಳು, ಶಿಕ್ಷಣ ತಜ್ಞರು ಹಾಗೂ ಕನ್ನಡ ಪರ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ಈ ಸಭೆಗೆ ಪೂರಕವಾಗಿ ಕಿಮ್ಮನೆ ರತ್ನಾಕರ್ ಬುಧವಾರ ಇಲಾಖೆಯು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. [ಸುಪ್ರೀಂ ತೀರ್ಪಿನಲ್ಲಿ ಏನಿದೆ]

siddaramaiah

ಈಗಾಗಲೇ ಸುಪ್ರೀಂ ತೀರ್ಪಿಗೆ ವಿರೋಧ ವ್ಯಕ್ತಪಡಿಸಿರುವ ಹಲವಾರು ಸಂಘಟನೆಗಳು, ಸರ್ಕಾರ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿವೆ. ಈ ಪ್ರಕರಣದಲ್ಲಿ ಪ್ರಮುಖ ಪ್ರತಿವಾದಿ ಕರ್ನಾಟಕ ಸರ್ಕಾರ ಆಗಿದ್ದರೂ ಅದು ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕವೇ ಹೋರಾಟ ನಡೆಸಬೇಕು. ಆದ್ದರಿಂದ ಮೇಲ್ಮನವಿ ಸಲ್ಲಿಸುವ ಕುರಿತು ಶುಕ್ರವಾರದ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. [ಸುಪ್ರೀಂ ತೀರ್ಪು ಸ್ವಾಗತಿಸಿದ ಕುಸ್ಮಾ]

ಮುಂದುವರೆದ ಹೋರಾಟ : ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು. ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದಿಂದ ಕನ್ನಡ ಭಾಷೆಯ ಉಳಿವಿಗೆ ಪೆಟ್ಟಾಗಲಿದೆ. ಆದ್ದರಿಂದ ಸರ್ಕಾರ ಶೀಘ್ರವೇ ನ್ಯಾಯಾಲಯದಲ್ಲಿ ತೀರ್ಪು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. [ಸುಪ್ರೀಂತೀರ್ಪು ಯಾರು, ಏನು ಹೇಳಿದರು?]

ಸುಪ್ರೀಂ ತೀರ್ಪು ಏನು : ಭಾಷಾ ಮಾಧ್ಯಮ ವಿವಾದ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಸಂವಿಧಾನ ಪೀಠ ಮಂಗಳವಾರ ತನ್ನ ತೀರ್ಪನ್ನು ಪ್ರಕಟಿಸಿ, ಅನುದಾನರಹಿತ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂದು ಹೇಳಿತ್ತು. ಇದರಿಂದ ಕಾನೂನು ಹೋರಾಟ ನಡೆಸುತ್ತಿದ್ದ ಕರ್ನಾಟಕ ಸರ್ಕಾರಕ್ಕೆ ಭಾರೀ ಹಿನ್ನಡೆ ಉಂಟಾಗಿತ್ತು.

English summary
Karnataka government to approach the Supreme Court with a review petition with regard to the medium of instruction in primary schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X