ಮೂರು ವರ್ಷ ಹೊಸ ಖಾಸಗಿ ಶಾಲೆಗಳ ಆರಂಭಕ್ಕೆ ಅನುಮತಿ ಇಲ್ಲ

ಬೆಂಗಳೂರು, ಜೂನ್ 13: ಸರ್ಕಾರಿ ಶಾಲೆಗಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಮುಂದಿನ ಮೂರು ವರ್ಷಗಳವರೆಗೆ ನೂತನ ಶಾಲೆಗಳ ಆರಂಭಕ್ಕೆ ಅವಕಾಶ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಖಾಸಗಿ ಶಾಲೆಗಳಿಂದ ಸರ್ಕಾರ ಶಾಲೆಗಳಿಗೆ ಹೊಡೆತ ಬೀಳುತ್ತಿದೆ. ಪರೋಕ್ಷವಾಗಿ ಆರ್‌ಟಿಇ ಸರ್ಕಾರಿ ಶಾಲೆಗಳಲ್ಲಿರುವ ಮಕ್ಕಳ ಸಂಖ್ಯೆ ಕುಸಿತಕ್ಕೆ ಕಾರಣ ಎಂದು ವಿಶ್ಲೇಷಣೆ ಮಾಡಿರುವುದಾಗಿ ತಿಳಿದುಬಂದಿದೆ. ರಾಜ್ಯದಲ್ಲಿ 261 ಪ್ರಾಥಮಿಕ ಮತ್ತು 57 ಪ್ರೌಢಶಾಲೆಗಳಲ್ಲಿ ಶೂನ್ಯ ದಾಖಲಾತಿ ಇದೆ. ಈ ಮಧ್ಯೆಯೇ ರಾಜ್ಯದಲ್ಲಿ 2429 ಹೊಸ ಶಾಲೆಗಳ ಆರಂಭಕ್ಕೆ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಒಂದೊಮ್ಮೆ ಖಾಸಗಿ ಶಾಲೆಗಳಿಗೆ ಅವಕಾಶ ನೀಡಿದರೆ ಪರೋಕ್ಷವಾಗಿ ಸರ್ಕಾರಿ ಶಾಲೆಗಳನ್ನು ತಾವೇ ಮುಚ್ಚಿದಂತಾಗುತ್ತದೆ ಎನ್ನುವುದು ಇಲಾಖೆ ಮನದಟ್ಟಾಗಿದೆ. ಈ ಹಿಂದೆ ಸಚಿವರಾಗಿದ್ದ ತನ್ವೀರ್ ಸೇಠ್ ಕೂಡ ಮುಂದಿನ 5 ವರ್ಷಗಳ ಕಾಲ ಹೊಸದಾಗಿ ಆರಂಭವಾಗುವ ಖಾಸಗಿ ಶಾಲೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ಸೂಚಿಸಿದ್ದರು. ಅಂತಿಮದಲ್ಲಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ಒಪ್ಪಿಗೆ ಸೂಚಿಸಿದ್ದರು.

Govt to hold permission for new schools in the state

ಇದೀಗ ಹೊಸ ಖಾಸಗಿ ಶಾಲೆಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದರೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗಲಿದೆ ಹಾಗಾಗಿ ಇನ್ನು ಮೂರು ವರ್ಷಗಳವರೆಗೆ ನೂತನ ಖಾಸಗಿ ಶಾಲೆಗಳ ಆರಂಭಕ್ಕೆ ಅನುಮತಿ ನೀಡಬಾರದು ಎಂದು ಎಂದು ಆಲೋಚನೆ ನಡೆಸಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+