ಕಾಳಸಂತೆಯಲ್ಲಿ ರೆಮ್‌ಡೆಸಿವಿರ್ ಮಾರಾಟ, ತನಿಖೆಗೆ ಆದೇಶಿಸುವುದಾಗಿ ಯಡಿಯೂರಪ್ಪ ಭರವಸೆ
ಬೆಂಗಳೂರು, ಮೇ04: ಒಂದೆಡೆ ದೇಶದಲ್ಲಿ ಕೊರೊನಾವೈರಸ್ ಎರಡನೇ ಅಲೆಯ ಅಟ್ಟಹಾಸ ಮುಂದುವರೆದಿದೆ. ಇನ್ನೊಂದೆಡೆ ರೋಗಿಗಳಿಗೆ ಬೇಕಾದ ರೆಮ್‌ಡೆಸಿವಿರ್ ಲಸಿಕೆ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ.
ಹೀಗಾಗಿ ಈ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ರೆಮ್‌ಡೆಸಿವಿರ್ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತನಿಖೆಗೆ ಆದೇಶಿಸಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ವ್ಯಾಪಕವಾಗಿದೆ. ಇದು ಅತ್ಯಂತ ಕ್ಲಿಷ್ಟಕರವಾದ ಸಂದರ್ಭ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಮ್ಮ ಜೊತೆಗೆ ನಿಂತಿದೆ. ಆದರೆ ಕೆಲ ಅಧಿಕಾರಿಗಳು ರೆಮ್‌ಡೆಸಿವಿರ್ ಡೋಸ್‌ಗಳನ್ನು ಅನ್ಯ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ.
ಈ ಬಗ್ಗೆ ತನಿಖೆ ಮಾಡಿಸುತ್ತೇನೆ. ಇದರಲ್ಲಿ ಯಾರನ್ನು ಕಾಪಾಡುವ ಮಾತಿಲ್ಲ. ನಾನು ಇದನ್ನು ತನಿಖೆಗೆ ವಹಿಸಿದರೇ, ಸತ್ಯ ಹೊರ ಬರುತ್ತದೆ.ಯಾವುದೇ ಅಧಿಕಾರಿಗಳು ಇದರಲ್ಲಿ ಭಾಗಿಯಾದ್ರೆ ಪರಿಣಾಮ ಭೀಕರವಾಗಿರಲಿದೆ. ಇದನ್ನೇ ಎಚ್ಚರಿಕೆ ಎಂದು ಭಾವಿಸಬೇಕು. ಮುಂದೆ ಜನರ ಸೇವೆ ಬದ್ಧರಾಗಿರಬೇಕು ಎಂದು ಯಡಿಯೂರಪ್ಪ ಹೇಳಿದರು.

ಇಲ್ಲವಾದರೆ ತನಿಖೆ ಮಾಡಿಸಿ ಎಲ್ಲವನ್ನೂ ಬಯಲಿಗೆಳೆಯುತ್ತೇನೆ. ಯಾವುದೇ ಅಧಿಕಾರಿಗಳನ್ನು ಕಾಪಾಡುವುದಿಲ್ಲ. ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚಿಸಿದರು.
ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ರಾಜ್ಯದಲ್ಲಿ ರೆಮ್‌ಡೆಸಿವಿರ್ ಬ್ಲಾಕ್ ಮಾರಾಟದ ಬಗ್ಗೆ ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ ನೀಡಿದರು.












Click it and Unblock the Notifications