ಬಿಎಸ್‌ವೈ ಪ್ರಕರಣಗಳ ವಿರುದ್ಧ ಮೇಲ್ಮನವಿ, ಮೌನ ಮುರಿದ ಸರ್ಕಾರ

ಬೆಂಗಳೂರು, ಏಪ್ರಿಲ್ 20 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಸರ್ಕಾರ ಮೌನ ಮುರಿದಿದೆ. 15 ಅಕ್ರಮ ಡಿನೋಟಿಫಿಕೇಷನ್ ಪ್ರಕರಣಗಳನ್ನು ರದ್ದುಪಡಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಮಾತ್ರ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.

ಬುಧವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಈ ಕುರಿತು ಮಾಹಿತಿ ನೀಡಿದರು. 'ಇಂದು ನಡೆದ ಸಭೆಯಲ್ಲಿ ಮೇಲ್ಮನವಿ ಕುರಿತು ಯಾವುದೇ ಚರ್ಚೆ ನಡೆದಿಲ್ಲ' ಎಂದು ಸ್ಪಷ್ಟಪಡಿಸಿದರು. [15 ಪ್ರಕರಣಗಳು ಯಾವುವು?]

tb jayachandra

'ಯಡಿಯೂರಪ್ಪ ಅವರ ವಿರುದ್ಧ 15 ಅಕ್ರಮ ಡಿನೋಟಿಫಿಕೇಷನ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಈ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಲೋಕಾಯುಕ್ತ ಸಹ ತೀರ್ಪನ್ನು ಪ್ರಶ್ನಿಸಬಹುದು ಎಂದು ಅಭಿಪ್ರಾಯಪಟ್ಟಿತ್ತು' ಎಂದು ಜಯಚಂದ್ರ ಹೇಳಿದರು. [FIR ರದ್ದಾದರೂ ಯಡಿಯೂರಪ್ಪ ಕಾನೂನು ಹೋರಾಟ ಮುಗಿದಿಲ್ಲ]

'15 ಪ್ರಕರಣಗಳ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ಈ ಬಗ್ಗೆ ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿದೆ. ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್‌ನಲ್ಲಿ ಜೋಸೆಫ್ ಅರಿಸ್ಟಾಟಲ್ ಅವರು ವಾದ ಮಂಡನೆ ಮಾಡಲಿದ್ದಾರೆ' ಎಂದು ಜಯಚಂದ್ರ ಅವರು ವಿವರಿಸಿದರು. [ಬಿಎಸ್ ವೈ ವಿರುದ್ಧದ ಪ್ರಕರಣ ರದ್ದು, ಸುಪ್ರೀಂಗೆ ಸರ್ಕಾರದ ಮೇಲ್ಮನವಿ?]

ಯಾವ ಪ್ರಕರಣಗಳು : 2016ರ ಜನವರಿ 5ರಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ರತ್ನಕಲಾ ಅವರ ಏಕಸದಸ್ಯ ಪೀಠ, 2015ರ ಜೂನ್ 19 ರಿಂದ 27ರ ತನಕ ಲೋಕಾಯುಕ್ತ ಪೊಲೀಸರು ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಯಡಿಯೂರಪ್ಪ ಅವರ ವಿರುದ್ದ ದಾಖಲಿಸಿದ್ದ 15 ಎಫ್ಐಆರ್‌ಗಳನ್ನು ರದ್ದುಪಡಿಸಿದ್ದರು.

ಮಹಾಲೆಕ್ಕಪಾಲ ವರದಿ (ಸಿಎಜಿ) ಅನ್ವಯ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ ಅವರು ಸಲ್ಲಿಸಿದ್ದ ದೂರಿನ ಅನ್ವಯ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ್ದ ಕೋರ್ಟ್, ಸಿಎಜಿ ವರದಿ ಹೊರತುಪಡಿಸಿ ಇತರೆ ಅಂಶಗಳ ಆಧಾರದಲ್ಲಿ ಯಡಿಯೂರಪ್ಪ ಅವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಅವಕಾಶಗಳನ್ನು ಮಕ್ತವಾಗಿಟ್ಟಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+