ರಾಜ್ಯಕ್ಕೆ ವಾಪಸ್ ಆಗುವ ಕನ್ನಡಿಗರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ
ಬೆಂಗಳೂರು, ಮೇ 10 : ಲಾಕ್ ಡೌನ್ ಸಮಯದಲ್ಲಿ ಕರ್ನಾಟಕಕ್ಕೆ ಮರಳುವ ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಸಿಹಿ ಸುದಿಯನ್ನು ನೀಡಿದೆ. ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿರುವ ಕನ್ನಡಿಗರು ಶೀಘ್ರದಲ್ಲೇ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.
"ಹೊರ ರಾಜ್ಯದಲ್ಲಿರುವ ನಮ್ಮವರು ಮರಳಿ ರಾಜ್ಯಕ್ಕೆ ಬರಲು, ಅವರ ಟ್ರೈನ್ ಟಿಕೆಟ್ ದರವನ್ನು ನಮ್ಮ ರಾಜ್ಯ ಸರ್ಕಾರವೇ ಬರಿಸಲಿದೆ" ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಇರಾನ್ v/s ಯುಎಸ್ಎ: ಮಿಲಿಟರಿ ಶಕ್ತಿ, ಸಾಮರ್ಥ್ಯ ತುಲನೆ
"ಈಗಾಗಲೇ ಮಧ್ಯಪ್ರದೇಶ, ತ್ರಿಪುರ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ರಾಜ್ಯಗಳು ಸಹ ಬೇರೆ ಬೇರೆ ರಾಜ್ಯದಲ್ಲಿ ಇರುವ ತಮ್ಮವರನ್ನು ವಾಪಸ್ ಕರೆಸಿಕೊಳ್ಳಲು 15% ಟ್ರೈನ್ ಟಿಕೆಟ್ ದರವನ್ನು ನಾವೇ ನೀಡುವುದಾಗಿ ಘೋಷಣೆ ಮಾಡಿದೆ" ಎಂದು ಸಚಿವರು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ.
ಶ್ರಮಿಕ್ ವಿಶೇಷ ರೈಲಿನ ದರ; ರೈಲ್ವೆ ಇಲಾಖೆಯ ಸ್ಪಷ್ಟನೆ
"ಅದರಂತೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಅದೇ ಮಾದರಿಯನ್ನು ಅನುಸರಿಸುವ ಮೂಲಕ ನಮ್ಮವರಿಗಾಗಿ ಸಹಾಯ ಹಸ್ತ ಚಾಚಿದೆ" ಎಂದು ತಿಳಿಸಿದ್ದಾರೆ.
ಕನ್ನಡಿಗರಿಗಾಗಿ ದೆಹಲಿ-ಬೆಂಗಳೂರು ನಡುವೆ ವಿಶೇಷ ರೈಲು
ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಉದ್ಯೋಗ, ವಿದ್ಯಾಭ್ಯಾಸ, ಯಾತ್ರೆ ಹೀಗೆ ಹಲವು ಕಾರಣಗಳಿಗೆ ಹೋಗಿರುವ ಹಲವಾರು ಕನ್ನಡಿಗರು ಕರ್ನಾಟಕಕ್ಕೆ ವಾಪಸ್ ಆಗಲಿದ್ದಾರೆ. ಇವರನ್ನು ಕರೆತರಲು ದೆಹಲಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ನಡೆಸಲು ಈಗಾಗಲೇ ಒಪ್ಪಿಗೆ ಸಿಕ್ಕಿದೆ.
ಭಾರತೀಯ ರೈಲ್ವೆಯ ಶ್ರಮಿಕ್ ವಿಶೇಷ ರೈಲಿನ ಮೂಲಕ ಇವರು ಸಂಚಾರ ನಡೆಸಲಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಶ್ರಮಿಕ್ ರೈಲಿನ ಶೇ 15ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರಗಳೇ ಭರಿಸಬೇಕು. ಆದ್ದರಿಂದ, ಕರ್ನಾಟಕ ಸರ್ಕಾರ ವೆಚ್ಚ ಭರಿಸುವುದಾಗಿ ಘೋಷಣೆ ಮಾಡಿದೆ.