ಬಿಜೆಪಿಯವರು ಪ್ರಚೋದನಾಕಾರಿ ಭಾಷಣ ಮಾಡಿದರೆ ಸರ್ಕಾರ ಏನು ಮಾಡಬೇಕು: ಸಿ.ಎಂ ಸಿದ್ದರಾಮಯ್ಯ
ಬಿಜೆಪಿಯವರು ಪ್ರಚೋದನಾಕಾರಿಯಾದ ಭಾಷಣ ಮಾಡಿದರೆ ಸರ್ಕಾರ ಏನು ಮಾಡಬೇಕು? ಕೈಕಟ್ಟಿ ಕೂರಲು ಆಗುತ್ತದೆಯಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನಾಯಕರ ಮೇಲೆ ಸರಣಿ ಎಫ್‌ಐಆರ್ ದಾಖಲಾಗುತ್ತಿರುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಿಯಾಕ್ಟ್ ಮಾಡಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಲಭೆ ಆರಂಭವಾಗಿ ಮೂರು ವರ್ಷಗಳ ನಂತರ ಪ್ರಧಾನಮಂತ್ರಿ Narendra Modi ಅವರು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಮಣಿಪುರದಲ್ಲಿ ಗಲಭೆ ನಡೆಯುವ ಸಂದರ್ಭದಲ್ಲಿ ಪ್ರಧಾನಿಗಳು ಭೇಟಿನೀಡಿ, ಜನರ ಕಷ್ಟ ಆಲಿಸಬೇಕಿತ್ತು. ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ವಿರೋಧಪಕ್ಷದವರ ಒತ್ತಡದಿಂದ ಈಗ ಮಣಿಪುರಕ್ಕೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಬಿಜೆಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಾಗಿರುವ ಬಗ್ಗೆ ರಿಯಾಕ್ಟ್ ಮಾಡಿರುವ ಅವರು, ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರು ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ ಕಾರಣಕ್ಕಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಜೆಪಿಯವರು ಪ್ರಚೋದನಾಕಾರಿಯಾದ ಭಾಷಣ ಮಾಡಿದರೆ ಸರ್ಕಾರ ಏನು ಮಾಡಬೇಕು, ಕೈಕಟ್ಟಿ ಕೂರಲು ಆಗುತ್ತದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.
ಸಮಾಜದ ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ. ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ, ಮಾಡುವುದು ಇಲ್ಲ. ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದಿದ್ದಾರೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಹಿಂದೂ ಪರ ದನಿ ಎತ್ತುತ್ತಿರುವವರ ಸೋಲ್ಲಡಗಿಸಬೇಕೆಂಬ ನಿರ್ಧಾರಕ್ಕೆ ಬಂದಂತಿರುವ ಕಾಂಗ್ರೆಸ್ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ಬಳಸಿಕೊಂಡು ಎಫ್ಐಆರ್ ದಾಖಲಿಸುವುದು, ಹೋರಾಟಗಾರರನ್ನು ಬಂಧಿಸುವುದನ್ನು ಮುಂದುವರೆಸಿದೆ. ರಾಷ್ಟ್ರವಾದಿ ಯುವ ಪತ್ರಕರ್ತ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಬಂಧಿಸಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆ ಸರ್ವಾಧಿಕಾರಿ ಧೋರಣೆಯನ್ನು ಪ್ರತಿಬಿಂಬಿಸಿದೆ.
ಧರ್ಮಸ್ಥಳಕ್ಕೆ ಬುಲ್ಡೋಜರ್ ನುಗ್ಗಿಸುತ್ತೇವೆ ಎನ್ನುವವರು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ, ಗಣಪನ ಮೆರವಣಿಗೆಯ ಮೇಲೆ ಅಟ್ಟಹಾಸ ಮೆರೆದವರ ವಿರುದ್ಧ ಮಾತನಾಡಿದ ಮಹೇಶ್ ವಿಕ್ರಮ್ ಹೆಗಡೆ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಇದು ಯಾವ ನ್ಯಾಯ? ನಾವು ಯಾವ ನೆಲದಲ್ಲಿದ್ದೇವೆ? ಎಂಬ ಆತಂಕ ಹಿಂದೂ ಸಮುದಾಯವನ್ನು ಕಾಡುತ್ತಿದೆ, ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುತ್ತಿದೆ. ಮಹೇಶ್ ವಿಕ್ರಂ ಹೆಗಡೆ ಅವರ ಬಂಧನವನ್ನು ಬಿಜೆಪಿ ಕರ್ನಾಟಕ ಖಂಡಿಸುತ್ತದೆ. ಹಿಂದೂ ಪರ ಹೋರಾಟಗಾರರ ನೆರವಿಗೆ ಧಾವಿಸುತ್ತದೆ ಎಂದಿದ್ದಾರೆ.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications