ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್-19 ಚಿಕಿತ್ಸೆಗೆ ಇನ್ನೂ ದರ ನಿಗದಿ ಮಾಡಿಲ್ಲ: ಶ್ರೀರಾಮುಲು

|
Google Oneindia Kannada News

ಬೆಂಗಳೂರು, ಜೂ. 19: ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್-19 ಚಿಕಿತ್ಸೆಗೆ ದರ ನಿಗದಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹದ ಸುದ್ದಿಗಳು ಹರಿದಾಡುತ್ತಿವೆ. ಅವು ನಿಜವಲ್ಲ. ಕೊರೊನಾ ವೈರಸ್ ಸೋಂಕಿತರಿಗೆ ವೆಂಟಿಲೇಟರ್, ಐಸಿಯು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸರ್ಕಾರ ಇನ್ನೂ ದರ ನಿಗದಿ ಮಾಡಿಲ್ಲ ಎಂದು ಆರೋಗ್ಯ ಸಚಿವ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

Recommended Video

Boycott Chinaದಿಂದ ಚೀನಾಕ್ಕಿಂತ ಭಾರತಕ್ಕೆ ದೊಡ್ಡ ಹೊಡೆತ | Oneindia Kannada

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ದರ ನಿಗದಿ ವಿಚಾರ ನಿನ್ನೆಯ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆ ಆಗಿದೆ. ಈ ವೇಳೆ ಬೇರೆ ರಾಜ್ಯಗಳ ಖಾಸಗಿ ಆಸ್ಪತ್ರೆಗಳಲ್ಲಿ ಇರುವ ದರಗಳ ಬಗ್ಗೆ ಕೂಡಾ ಪರಿಶೀಲಿಸಿದ್ದೇವೆ. ಈ ಬಗ್ಗೆ ಸಿಎಂ ಗಮನಕ್ಕೆ ಕೂಡಾ ತಂದಿದ್ದೇವೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ‌ ಮಾಡೋಣ ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ ಎಂದಿದ್ದಾರೆ.

Govt Will Decide Cost for COVID-19 Treatment at Private Hospital During Cabinet Meeting: Minister Sriramulu

ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀರ್ಮಾನ ತೆಗೆದುಕೊಳ್ಳುವವರೆಗೆ ದರ ನಿಗದಿ ಅಧಿಕೃತ ನಿರ್ಧಾರ ಆಗುವುದಿಲ್ಲ. ಖಾಸಗಿ ಆಸ್ಪತ್ರೆಗಳು ಹೇಳಿರುವ ದರ ಅವರು ಹೇಳಿದ್ದು, ಅದು ಅವರ ಬೇಡಿಕೆ ಆಗಿದೆ ಅಷ್ಟೇ. ರಾಜ್ಯ ಸರ್ಕಾರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಎಷ್ಟು ದರ ನಿಗದಿ ಮಾಡಬೇಕು ಅಂತಾ ಸಿಎಂ ಮತ್ತು ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳುತ್ತದೆ. ಜೊತೆಗೆ ಯಾವುದೇ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಬೇಕಾಬಿಟ್ಟಿ ದರ ವಸೂಲಿ ಮಾಡುವಂತಿಲ್ಲ ಎಂದು ಶ್ರೀರಾಮುಲು ಎಚ್ಚರಿಕೆ ಕೊಟ್ಟಿದ್ದಾರೆ.

English summary
The Health Minister Sriramulu said that the Government will Decide the Cost for COVID-19 Treatment at Private Hospital During the Cabinet Meeting,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X