ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಲೇಜು ಆರಂಭದ ಕುರಿತು ಡಿಸಿಎಂ ಡಾ. ಅಶ್ವಥ್ ನಾರಾಯಣ ಸ್ಪಷ್ಟನೆ!

|
Google Oneindia Kannada News

ಬೆಂಗಳೂರು, ಅ. 01: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿಯನ್ನು ಸರಕಾರ ನೀಡಲಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಡಿಸಿಎಂ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೇ ಮಾರ್ಗಸೂಚಿಯನ್ನು ನೀಡಿದೆ. ಅದರಂತೆ ಸರಕಾರ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ ಸುರೇಶ್‌ ಕುಮಾರ್‌ ಅವರ ಜತೆಗೂ ಚರ್ಚೆ ನಡೆಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದರು.

govt will soon have clear information about starting school-colleges in state: dr ashwath narayana

ಅನ್‌ಲಾಕ್ 5: ಶಾಲೆಗಳ ಪುನರಾರಂಭ ಯಾವಾಗ? ಹೇಗೆ?ಅನ್‌ಲಾಕ್ 5: ಶಾಲೆಗಳ ಪುನರಾರಂಭ ಯಾವಾಗ? ಹೇಗೆ?

ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಅದರ ಮುಂದುವರೆದ ಭಾಗವಾಗಿ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಎಂದಿನಿಂದ ಹಾಜರಾಗಬೇಕು ಎಂಬ ಬಗ್ಗೆ ಸಂಬಂಧಿತರ ಜತೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

govt will soon have clear information about starting school-colleges in state: dr ashwath narayana

ಕೋವಿಡ್ ಮಾರ್ಗಸೂಚಿಯ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವೆಲ್ಲವುಗಳ ಸಾಧಕ- ಬಾಧಕಗಳನ್ನು ನೋಡಿಕೊಂಡೇ ತರಗತಿಗಳನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದರು.

Recommended Video

ಅವತ್ತು ಆಗಿದ್ದು ಇವತ್ತು ಆಗ್ತಿರೋದು ಎಲ್ಲಾ ಒಂದೇ | Oneindia Kanada

English summary
Higher Education Minister Dr C.N. Ashwattanarayana said that the government will soon have clear information about starting school-colleges in the state
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X