ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್‌: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ತಡೆ ಹಿಡಿದ ಸರ್ಕಾರ

|
Google Oneindia Kannada News

ಬೆಂಗಳೂರು, ಮೇ 06: ಕೊರೊನಾ ವೈರಸ್ ನಿಂದಾಗಿ ಲಾಕ್‌ಡೌನ್‌ನಿಂದ ಸರ್ಕಾರದ ಆರ್ಥಿಕ ಸ್ಥಿತಿಯೂ ಹೇಳಿಕೊಳ್ಳುವಂತಿಲ್ಲ. ಸರ್ಕಾರಕ್ಕೆ ಹರಿದು ಬರುತ್ತಿದ್ದ ತೆರಿಗೆ ಕೂಡ ನಿಂತಿದೆ. ಹೀಗಾಗಿ ಆರ್ಥಿಕವಾಗಿ ಹಲವು ಕಠಿಣ ಕ್ರಮಗಳನ್ನು ರಾಜ್ಯಸರ್ಕಾರ ಕೈಗೊಳ್ಳುತ್ತಿದೆ. ಇದೇ ಹಾದಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಹಲವು ಸೌಲಭ್ಯಗಳಿಗೆ ತಡೆ ಹಾಕಿದೆ.

Recommended Video

ಕೊವಿಡ್ ಪರಿಹಾರದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ | Siddaramaiah | Oneindia Kannada

ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ತಡೆ ಹಿಡಿದಿದೆ.

State government Hold Dearness Allowance Of Employees Amid Coronavirus Pandemic

ಸರ್ಕಾರಿ ನೌಕರರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ, ತುಟ್ಟಿಭತ್ಯೆ ಲೆಕ್ಕಾಚಾರ ಹೇಗೆ?ಸರ್ಕಾರಿ ನೌಕರರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ, ತುಟ್ಟಿಭತ್ಯೆ ಲೆಕ್ಕಾಚಾರ ಹೇಗೆ?

ಕೇಂದ್ರ ಸರ್ಕಾರ ಜುಲೈ 2021 ರ ವರೆಗೆ ತನ್ನ ನೌಕರರ ತುಟ್ಟಿ ಭತ್ಯೆಯನ್ನು ತಡೆ ಹಿಡಿದಿದ್ದು ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ತನ್ನ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ತಡೆಹಿಡಿದಿದೆ. ನಿವೃತ್ತ ಪಿಂಚಣಿದಾರರು, ಅನುದಾನಿತ ಸಂಸ್ಥೆಗಳು, ನಿಗಮ ಮಂಡಳಿಗಳ ನೌಕರರು, ಸರ್ಕಾರಿ ಸ್ವಾಮ್ಯದ ಸ್ವಾಯತ್ತ ಸಂಸ್ಥೆಗಳು, ಯುಜಿಸಿ, ಐಸಿಎಆರ್ , ಎಐಸಿಟಿಇ ಹಾಗೂ ಎನ್‌ಜೆಪಿಸಿಗಳಲ್ಲಿ ಕೆಲಸ ಮಾಡುವರಿಗೆ ತುಟ್ಟಿಭತ್ಯೆ ತಡೆಹಿಡಿದಿರುವ ಆದೇಶ ಅನ್ವಯವಾಗಲಿದೆ.

English summary
In the wake of Corona virus, the state government, which has suffered financial hardship, has stopped the dearness allowance of government employees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X