ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಬೆಂಗಳೂರು, ಜೂ. 24 : ವಿಧಾನ ಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮತದಾನ ಫಲಿತಾಂಶ ಇಂದು ಪ್ರಕಟವಾಗಲಿದೆ. ಸದ್ಯದ ಮಾಹಿತಿಯಂತೆ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮತ್ತೂರ ಗೆಲುವು ಸಾಧಿಸಿದ್ದಾರೆ.

ವಿಧಾನ ಪರಿಷತ್ತಿನ ಧಾರವಾಡದ ಪಶ್ಚಿಮ ಪದವೀಧರರ ಕ್ಷೇತ್ರ, ದಾವಣಗೆರೆಯ ಆಗ್ನೇಯ ಪದವೀಧರರ ಕ್ಷೇತ್ರ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೂ.20ರ ಶುಕ್ರವಾರ ಮತದಾನ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಳ್ಳುತ್ತಿದೆ.

Legislative Council

ಈಶಾನ್ಯ ಶಿಕ್ಷಕರ ಕ್ಷೇತ್ರ : ಈಶಾನ್ಯ ಶಿಕ್ಷಕರ ಕ್ಷೇತ್ರದ ಫಲಿತಾಂಶ ಹೊರಬಂದಿದ್ದು ಬಿಜೆಪಿಯ ಶಶೀಲ್ ನಮೋಶಿ ಸೋಲು ಅನುಭವಿಸಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮತ್ತೂರ ಮೂರು ಬಾರಿ ಗೆದ್ದಿದ್ದ ಶಶೀಲ್ ನಮೋಶಿ ಅವರ ವಿರುದ್ಧ ಜಯಗಳಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ : ಪರಿಷತ್ ಚುನಾವಣೆಗೆ ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಬೆಂಗಳೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆಯುತ್ತದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪುಟ್ಟಣ್ಣ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 16,590 ಮತಗಳು ಚಲಾವಣೆಯಾಗಿದ್ದವು. ಸದ್ಯದ ಮಾಹಿತಿಯಂತೆ ಜೆಡಿಎಸ ಅಭ್ಯರ್ಥಿ ಪುಟ್ಟಣ್ಣ ಅವರು 8,522 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಕ್ಷದ ಕಾರ್ಯರ್ತರು ಮತ ಎಣಿಕೆ ಕೇಂದ್ರ ಸಮೀಪ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+