ಪಂಚಾಯಿತಿ ಚುನಾವಣೆ; ರಾಜಕೀಯ ಪಕ್ಷಗಳಿಗೆ ಸೂಚನೆ

ಬೆಂಗಳೂರು, ಡಿಸೆಂಬರ್ 14: ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ಡಿಸೆಂಬರ್ 22 ಮತ್ತು 27ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಗ್ರಾಮ ಪಂಚಾಯತಿ ಚುನಾವಣೆ ಪಕ್ಷದ ಆಧಾರ ರಹಿತವಾಗಿ ನಡೆಯಲಿದೆ. ಆದ್ದರಿಂದ, ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಆದ್ದರಿಂದ, ರಾಜಕೀಯ ಪಕ್ಷಗಳಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.

ಎಲ್ಲಾ ರಾಜಕೀಯ ಪಕ್ಷದ ಮುಖಂಡರಿಗೆ ಹಾಗೂ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳು ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ರಾಜ್ಯ ಚುನಾವಣಾ ಆಯೋಗದ ಜೊತೆ ಸಹಕಾರ ನೀಡಬೇಕಿದೆ. ಅಭ್ಯರ್ಥಿಗಳು ಅಗತ್ಯ ಮಾಹಿತಿಯನ್ನು ತಿಳಿಯಬೇಕಿದೆ.

ನಿಮ್ಮ ಗ್ರಾಮದ ಅಭಿವೃದ್ಧಿಗಾಗಿ ಯೋಗ್ಯ ಅಭ್ಯರ್ಥಿಗೆ ಮತ ಚಲಾವಣೆ ಮಾಡಿ. ಗ್ರಾಮ ಪಂಚಾಯಿತಿ ಪ್ರಜಾಪ್ರಭುತ್ವದ ಬುನಾದಿಯಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷ ರಹಿತ ಚುನಾವಣೆ ಎಂದು ಚುನಾವಣಾ ಆಯೋಗ ಹೇಳಿದೆ.

ಬಾವುಟ, ಬ್ಯಾನರ್ ಬಳಕೆ ಇಲ್ಲ

ಬಾವುಟ, ಬ್ಯಾನರ್ ಬಳಕೆ ಇಲ್ಲ

ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರಿಗೆ ಮನವಿ ಮಾಡುವಂತಿಲ್ಲ.

ರಾಜಕೀಯ ಮುಖಂಡರ ಭಾವಚಿತ್ರ

ರಾಜಕೀಯ ಮುಖಂಡರ ಭಾವಚಿತ್ರ

ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ರಾಜಕೀಯ ಮುಖಂಡರ ಭಾವಚಿತ್ರ/ ಪಕ್ಷದ
ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ ಹಂಚುವುದು ಮಾಡುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್ ಮತ್ತು ಬಂಟಿಂಗ್‌ಗಳ ಮೂಲಕ ಪ್ರಚಾರ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ಜಾಹೀರಾತು ಕೊಡಬಾರದು

ಜಾಹೀರಾತು ಕೊಡಬಾರದು

ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿವಿ ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಕಾನೂನು ಕ್ರಮದ ಎಚ್ಚರಿಕೆ

ಕಾನೂನು ಕ್ರಮದ ಎಚ್ಚರಿಕೆ

ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಮೇಲೆ ತಿಳಿಸಿರುವಂತಹ ಪ್ರಕರಣಗಳು ವರದಿಯಾದರೆ, ನಿಯಮಗಳು ಉಲ್ಲಂಘನೆಯಾದರೆ ಅಂತಹ ಚುನಾವಣೆ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+