ಗ್ರಾಮ ಪಂಚಾಯಿತಿ ಚುನಾವಣೆ; ನೀತಿ ಸಂಹಿತೆಯಲ್ಲಿ ಏನಿದೆ?
ಬೆಂಗಳೂರು, ಡಿಸೆಂಬರ್ 03: ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಡಿಸೆಂಬರ್ 31ರ ಸಂಜೆಯ ತನಕ ನೀತಿ ಸಂಹಿತೆ ಗ್ರಾಮೀಣ ಮಟ್ಟದಲ್ಲಿ ಜಾರಿಯಲ್ಲಿರುತ್ತದೆ.
5,762 ಗ್ರಾಮ ಪಂಚಾಯಿತಿಗಳಿಗೆ ಡಿಸೆಂಬರ್ 22 ಮತ್ತು 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಮೊದಲ ಹಂತದಲ್ಲಿ 2,930 ಮತ್ತು ಎರಡನೇ ಹಂತದಲ್ಲಿ 2,832 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
Breaking: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆ
ಬೀದರ್ ಜಿಲ್ಲೆಯಲ್ಲಿ ಮಾತ್ರ ಮತದಾನಕ್ಕೆ ಇವಿಎಂ ಬಳಕೆ ಮಾಡಲಾಗುತ್ತದೆ. ಉಳಿದ ಜಿಲ್ಲೆಗಳಲ್ಲಿ ಮತ ಪೆಟ್ಟಿಗೆಗಳ ಮೂಲಕ ಚುನಾವಣೆ ನಡೆಯಲಿದೆ. ಒಟ್ಟು 2.97 ಕೋಟಿ ಮತದಾರರು ಸ್ಥಳೀಯ ಮಟ್ಟದಲ್ಲಿ ಯಾರು ಆಡಳಿತ ನಡೆಸಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ.
ದಾವಣಗೆರೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಡಿಸಿ ಮಾಹಿತಿ
ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆಯನ್ನು ಬಿಡುಗಡೆ ಮಾಡಿದೆ. ಪಟ್ಟಣ ಪಂಚಾಯಿತಿ, ಪುರಸಭೆ, ನಗರ ಸಭೆ, ನಗರ ಪಾಲಿಕೆ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿ ಹೊರತುಪಡಿಸಿ ಚುನಾವಣೆ ನಡೆಯುವ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಬೆಳಗಾವಿ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಹೊಸ ಯೋಜನೆ ಘೋಷಣೆ ಇಲ್ಲ
ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳು ಸಾಮಾನ್ಯ ಸಭೆಯನ್ನು ನಡೆಸಬಹುದು. ಆದರೆ, ಸಭೆಯಲ್ಲಿ ಯಾವುದೇ ಹೊಸ ಯೋಜನೆಗಳ ಅನುಷ್ಠಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತಿಲ್ಲ. ಈಗಾಗಲೇ ಆಯವ್ಯಯ ಒದಗಿಸಿರುವ ಯೋಜನೆಗಳನ್ನು ಪ್ರಾರಂಭಿಸಲು ಅಥವಾ ಪ್ರಾರಂಭವಾಗಿದ್ದಲ್ಲಿ ಕೆಲಸ ಮುಂದುವರೆಸಲು ಅಡ್ಡಿ ಇಲ್ಲ.

ಕುಡಿಯುವ ನೀರಿನ ಯೋಜನೆ
ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಥವಾ ಈ ಯೋಜನೆಯಡಿ ಇತರ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸಲು ನೀತಿ ಸಂಹಿತೆಯ ಅಡ್ಡಿ ಮಾಡುವುದಿಲ್ಲ. ಆದರೆ ಇಂತಹ ಯೋಜನೆ ಅನುಷ್ಠಾನದ ಸಾರ್ವಜನಿಕ ಸಮಾರಂಭ ರಾಜಕೀಯ ನಾಯಕರುಗಳ ಉಪಸ್ಥಿತಿಯಲ್ಲಿ ನಡೆಸಬಾರದು. ನೆರೆ ಪೀಡಿತ ಹಾಗೂ ಪ್ರಕೃತಿ ವಿಕೋಪ ಪೀಡಿತ ಜನ ಸಮುದಾಯಕ್ಕೆ ನೀಡಲಾಗುವ ಯಾವುದೇ ಪರಿಹಾರ ಅಥವಾ ಸೌಲಭ್ಯಗಳಿಗೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ.

ರಾಜಕೀಯ ಪಕ್ಷಗಳು
ಗ್ರಾಮ ಪಂಚಾಯತಿ ಚುನಾವಣೆಗಳು ಪಕ್ಷರಹಿತವಾಗಿ ನಡೆಯುವುದರಿಂದ ರಾಜಕೀಯ ಪಕ್ಷಗಳ ಚಿಹ್ನೆಗಳು ಮತ್ತು ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಉಪಯೋಗಿಸಿ ಪ್ರಚಾರ ಮಾಡಬಾರದು. ಒಂದು ವೇಳೆ ಅಂತಹ ಪ್ರಚಾರ ನಡೆಸಿದಲ್ಲಿ ಅಭ್ಯರ್ಥಿಯು ಮುದ್ರಿಸಿರುವ ಕರಪತ್ರ ಇನ್ನಾವುದೇ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

ಸಭೆ ಸಮಾರಂಭಗಳು
ಯಾವುದೇ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಭೆ ಮತ್ತು ಸಮಾರಂಭಗಳನ್ನು ನಡೆಸಲು ನೀತಿ ಸಂಹಿತೆ ಅಡ್ಡಿ ಇಲ್ಲ. ಆದರೆ, ಇಂತಹ ಸಭೆ-ಸಮಾರಂಭಗಳಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಿ ನೀತಿ ಸಂಹಿತೆಗೆ ಬಾಧಕವಾಗುವ ರೀತಿಯಲ್ಲಿ ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ಘೋಷಣೆ, ಹೇಳಿಕೆ ಅಥವಾ ಆಶ್ವಾಸನೆ ನೀಡಬಾರದು.