ಗ್ರಾ.ಪಂ ಚುನಾವಣಾ ಮತ ಎಣಿಕೆ: ಡಿ.30 ರಂದು ಮದ್ಯ ಮಾರಾಟ ನಿಷೇಧ

ಬೆಂಗಳೂರು, ಡಿಸೆಂಬರ್ 29: ಗ್ರಾಮ ಪಂಚಾಯತಿ ಚುನಾವಣೆ ಸಂಬಂಧ ಮತ ಎಣಿಕೆ ಕಾರ್ಯವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಬಕಾರಿ ಕಾಯ್ದೆ 1965ರ ಕಲಂ 21(1)ರಡಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಎರಡು ಹಂತಗಳಲ್ಲಿ ನಡೆದಿರುವ ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30 ರಂದು ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರತ್ಯಾಯೋಜಿತವಾಗಿರುವ ಅಧಿಕಾರ ಚಲಾಯಿಸಿ ಎಲ್ಲ ಜಿಲ್ಲೆಯಾದ್ಯಂತ ಡಿಸೆಂಬರ್ 30 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ರೀತಿಯ ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Gram Panchayat Election Vote Count: Ban Of Liquor Sale On Dec 30

ಈ ಸಂಬಂಧ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+