ಕೋಳಿ ಸಾಕಾಣೆಗೆ ತೆರಿಗೆ ವಿಧಿಸಲು ಗ್ರಾ.ಪಂ.ಗೆ ಅಧಿಕಾರವಿಲ್ಲ: ಹೈಕೋರ್ಟ್

ಬೆಂಗಳೂರು. ಸೆ.23.: ಕೋಳಿ ಸಾಕಾಣಿಕೆ ಪೌಲ್ಟ್ರಿ ಫಾರಂ ಮಾಡುವುದು ಕೃಷಿ ಚಟುವಟಿಕೆ, ಅದನ್ನು ವಾಣಿಜ್ಯ ಚಟುವಟಿಕೆಯೆಂದು ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್ ಕಾಯಿದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯತ್ ಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ತನ್ನ ಕೋಳಿ ಸಾಗಾಣೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾಮ ಪಂಚಾಯತ್ ಕ್ರಮ ಪ್ರಶ್ನಿಸಿ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪ ಗ್ರಾಮಪಂಚಾಯತ್ ವ್ಯಾಪ್ತಿಯ ಕೆ ನರಸಿಂಹಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

Gram Panchayat Has No Authority To Put Tax On Poultry Farming: Karnataka High Court Ruling

ಹೈಕೋರ್ಟ್ ಆದೇಶವೇನು? ಜತೆಗೆ, ಇ. ಭಾಸ್ಕರ್ ರಾವ್ ಪ್ರಕರಣದಲ್ಲಿ ಕೋಳಿ ಸಾಗಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದಕ್ಕಾಗಿ ಕಟ್ಟಡ ನಿರ್ಮಾಣ ಸಲುವಾಗಿ ಕೃಷಿ ಭೂಮಿಯನ್ನು ವಾಣಿಜ್ಯ ಭೂಮಿಯನ್ನಾಗಿ ಪರಿವರ್ತನೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಅಲ್ಲದೆ, ಕೋಳಿ ಸಾಗಾಣಿಕೆ ಕೇಂದ್ರಕ್ಕಾಗಿ ನಿರ್ಮಾಣ ಮಾಡುವ ಕಟ್ಟಡವನ್ನು ಕನಾರ್ಟಕ ಗ್ರಾಮ ಸ್ವರಾಜ್ ಕಾಯಿದೆ ಷಡ್ಯೂಲ್ಡ್ 4 ರ (ಎ)(2) ಅಡಿಯಲ್ಲಿ ವಾಣಿಜ್ಯ ಕಟ್ಟಡವನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಅವಕಾಶವಿಲ್ಲ. ಹಾಗೂ ಕೋಳಿ ಸಾಗಾಣೆ ಕೇಂದ್ರವಿರುವ ಭೂಮಿ ಕೃಷಿ ಭೂಮಿಯಾಗಿಯೇ ಮುಂದುವರೆಯಲಿದ್ದು, ಅದನ್ನು ವಾಣಿಜ್ಯ ಭೂಮಿಯನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಜತೆಗೆ, ಅರ್ಜಿದಾರರಿಂದ ತೆರಿಗೆ ರೂಪದಲ್ಲಿ ಈಗಾಗಲೇ ಸಂಗ್ರಹಿಸಿರುವ 59,551 ರು.ಗಳನ್ನು ಹಿಂದಿರುಗಿಸಬೇಕು ಎಂದು ನಿರ್ದೇಶನ ನೀಡಿದೆ. ಅಲ್ಲದೆ, ಗ್ರಾಮ ಪಂಚಾಯತ್ ಜಾರಿ ಮಾಡಿದ್ದ ನೋಟಿಸ್ ಅನ್ನು ರದ್ದುಪಡಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ
ಅರ್ಜಿದಾರರ ಕೆ.ನರಸಿಂಹಮೂರ್ತಿ ಸೊಂಡೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗಸಂದ್ರ ಎಂಬ ಗ್ರಾಮದಲ್ಲಿ ನಾಲ್ಕು ಎಕರೆ ಜಮೀನನ್ನು ಹೊಂದಿದ್ದು, ಈ ಭಾಗದಲ್ಲಿ ಕೋಳಿ ಸಾಗಾಣೆ ಮಾಡುವ ಸಲುವಾಗಿ ಕಟ್ಟಡ ನಿರ್ಮಾಣ ಮಾಡುವುದು ಹಾಗೂ ವಿದ್ಯುತ್ ಸಂಪರ್ಕ ಪಡೆಯುವುದಕ್ಕಾಗಿ ನಿರಾಕ್ಷೇಪಣಾ ಪತ್ರಕ್ಕಾಗಿ ಗ್ರಾಮ ಪಂಚಾಯತ್ಗೆ ಮನವಿ ಸಲ್ಲಿಸಿದ್ದರು.

ಮನವಿ ಪರಿಗಣಿಸಿದ್ದ ಪಂಚಾಯತ್ ಅಧಿಕಾರಿಗಳು, ಕೋಳಿ ಸಾಗಾಣಿಕೆ ಕೇಂದ್ರವು ಕೈಗಾರಿಕೆಗಳ ಅಡಿಯಲ್ಲಿ ಬರಲಿದ್ದು, ಅದನ್ನ ನಿರಾಕ್ಷೇಪಣಾ ಪತ್ರ ವಿತರಣೆ ಮಾಡಲು 1.3 ಲಕ್ಷ ರೂ. ತೆರಿಗೆ ಪಾವತಿ ಮಾಡಲೇ ಬೇಕು ಎಂದು ಸೂಚನೆ ನೀಡಿ ನೋಟಿಸ್ ನೀಡಿದ್ದರು. ಇದರಿಂದ ಅರ್ಜಿದಾರ 59,551 ಪಾವತಿ ಮಾಡಿದ್ದರು.

ಹೈನುಗಾರಿಕೆ ಮತ್ತು ಕೋಳಿ ಸಾಗಾಣಿಕೆ

ನಂತರ ಹೈನುಗಾರಿಕೆ ಮತ್ತು ಕೋಳಿ ಸಾಗಾಣಿಕೆಗೆ ಕೃಷಿ ಚಟುವಟಿಕೆಗಳಾಗಿದ್ದು, ಇದಕ್ಕಾಗಿ ನಿರಾಕ್ಷೇಪಣಾ ಮತ್ರ ಪಡೆಯುವುದು ಹಾಗೂ ತೆರಿಗೆ ಪಾವತಿ ಮಾಡುವ ಅಗತ್ಯವಿಲ್ಲ. ಈ ರೀತಿ ತೆರಿಗೆ ವಿಧಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಅಂಶ ಮನಗಂಡು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು, ಕೋಳಿ ಸಾಗಾಣಿಕೆ ಮಾಡುವುದು ವಾಣಿಜ್ಯ ಚಟುವಟಿಕೆಯಾಗಿದ್ದು, ಕೋಳಿ ಸಾಗಾಣಿಕೆ ಕೇಂದ್ರದ ಕಟ್ಟಡಕ್ಕೆ ವಾಣಿಜ್ಯ ತೆರಿಗೆ ವಿಧಿಸಬಹುದಾಗಿದೆ ಎಂದು ವಾದ ಮಂಡಿಸಿದ್ದರು. ಈ ವಾದವನ್ನು ತಳ್ಳಿ ಹಾಕಿರುವ ಹೈಕೋರ್ಟ್, ಗ್ರಾಮ ಪಂಚಾಯತ್ ನೋಟಿಸ್ ರದ್ದು ಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+