Gram Panchayat; ಪಿಡಿಓಗಳ ಬೇಡಿಕೆಗೆ ಒಪ್ಪಿದ ಸರ್ಕಾರ

ಬೆಂಗಳೂರು, ಜನವರಿ 22: ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ)ಗಳ ಬೇಡಿಕೆಗೆ ಒಪ್ಪಿದೆ. ಕೆಲವು ದಿನಗಳಿಂದ ಬಡ್ತಿ, ವರ್ಗಾವಣೆ ವಿಚಾರದಲ್ಲಿ ಪಿಡಿಓಗಳು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತು ಮಾಹಿತಿ ನೀಡಿದ್ದು, "ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ನೌಕರರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕವೇ ಮಾಡಲು ಸೇವಾ ನಿಯಮ ರೂಪಿಸಲಾಗುತ್ತಿದೆ, ಈ ಮೂಲಕ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲಾಗುತ್ತದೆ" ಎಂದರು.

Gram Panchayat PDO Transfer Though Counseling

ಇಲಾಖೆಯ ಅಧಿಕಾರಿಗಳ ಜೊತೆ ಶನಿವಾರ ಸಚಿವರು ವರ್ಗಾವಣೆ ನಿಯಮ ರೂಪಿಸುವ ಕುರಿತು ಸಭೆಯನ್ನು ನಡೆಸಿದ್ದಾರೆ. ಹಲವು ಸೂಚನೆಗಳನ್ನು ಸಹ ನೀಡಿದ್ದಾರೆ. ಈ ನಡುವೆಯೇ ಜನವರಿ 19ರಂದು ಹಲವು ಪಿಡಿಓಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿದೆ.

ಪ್ರಿಯಾಂಕ್ ಖರ್ಗೆ ಖಾತೆಯ ಜವಾಬ್ದಾರಿ ವಹಿಸಿಕೊಂಡ ಆರಂಭದಲ್ಲಿಯೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯಿತಿ ಕಾರ್ಯದರ್ಶಿಗಳ ವರ್ಗಾವಣೆಯಲ್ಲಿ ಪಾರದರ್ಶಕತೆ ತರುವ ಸಲುವಾಗಿ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವುದಾಗಿ ಹೇಳಿದ್ದರು. 2024-25ನೇ ಸಾಲಿನ ವರ್ಗಾವಣೆಗಳನ್ನು ಮಾಡಲು ಸೂಚನೆ ನೀಡಲಾಗಿದೆ.

ಕೆಲವು ತಿಂಗಳುಗಳ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇಲಾಖೆಯ ಉನ್ನತ ಅಧಿಕಾರಿಗಳು, ಪಿಡಿಒಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಯತ್ನಿಸುವೆ. ಗ್ರಾಮೀಣ ಪ್ರದೇಶದ ಜನರ ಕ್ಷೇಮಾಭ್ಯುದಯಕ್ಕೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕೆಲಸ ಮಾಡಿದರೆ ಸರ್ಕಾರವು ಹೆಚ್ಚು ಮುತುವರ್ಜಿವಹಿಸಲಿದೆ ಎಂದು ಹೇಳಿದ್ದರು.

ಹಲವು ಬೇಡಿಕೆಗಳು; ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳು ವರ್ಗಾವಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದರು. ಸರ್ಕಾರ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದರು. ಸರ್ಕಾರದ ಭರವಸೆ ಬಳಿಕ ಪ್ರತಿಭಟನೆ ವಾಪಸ್ ಪಡೆದಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 2024ರಲ್ಲಿ ಹಲವು ಹುದ್ದೆಗಳನ್ನು ಭರ್ತಿ ಮಾಡಲಿದೆ. ಈ ಕುರಿತು ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಆರ್ಥಿಕ ಇಲಾಖೆ ಒಪ್ಪಿಗೆ ಸಿಕ್ಕ ತಕ್ಷಣ ನೇಮಕಾತಿಯನ್ನು ಆರಂಭಿಸಲಾಗುತ್ತದೆ.

ಈ ಹುದ್ದೆಗಳಲ್ಲಿ 150 ಪಿಡಿಓ ಹುದ್ದೆಗಳು ಸೇರಿವೆ. ಈಗ ಪಿಡಿಓಗಳ ಕೊರತೆ ಕಾರಣ ಒಬ್ಬ ಪಿಡಿಓ 2-3 ಗ್ರಾಮ ಪಂಚಾಯಿತಿಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಹೊಸದಾಗಿ ನೇಮಕಾತಿ ಆಗದ ಕಾರಣ ಅಭ್ಯರ್ಥಿಗಳ ವಯೋಮಿತಿಯೂ ಮೀರುತ್ತಿದ್ದು, ನೇಮಕಾತಿ ಆರಂಭವಾದರೆ ಅಭ್ಯರ್ಥಿಗಳಿಗೂ ಅನುಕೂಲವಾಗಲಿದೆ.

ಕರ್ನಾಟಕ ಸರ್ಕಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿ 660 ಪಿಡಿಓ, ಕಾರ್ಯದರ್ಶಿ ಗ್ರೇಡ್-1 350, ಕಾರ್ಯದರ್ಶಿ ಗ್ರೇಡ್-2 415 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 150 ಪಿಡಿಓ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ.

ಕೆಲವು ದಿನಗಳ ಹಿಂದೆ ಸರ್ಕಾರ ಆದೇಶವೊಂದನ್ನು ಹೊರಡಿಸಿ ಪಿಡಿಓಗಳ ನೇಮಕಾತಿಯಲ್ಲಿ ಬದಲಾವಣೆಯೊಂದನ್ನು ಮಾಡಿತ್ತು. ಇನ್ನು ಮುಂದೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ನೇರ ನೇಮಕಾತಿ ಕೋಟಾದ ಖಾಲಿ ಹುದ್ದೆಗಳನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ ಭರ್ತಿ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+