Breaking; ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವ ಧನ ಹೆಚ್ಚಳ

ಬೆಂಗಳೂರು, ಡಿಸೆಂಬರ್ 18; ಕರ್ನಾಟಕ ಸರ್ಕಾರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಗ್ರಾಮ ಪಂಚಾಯಿತಿಗಳಿಗೆ ಸಿಹಿಸುದ್ದಿ ನೀಡಿದೆ. ಗೌರವಧನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಭಾನುವಾರ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಜಂಟಿ ಕಾರ್ಯದರ್ಶಿ (ಪಂ. ರಾಜ್) ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಇಲಾಖೆ ಎಂ. ಎನ್. ಬಾನೊಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

Gram Panchayat President Vice President Honorarium Hiked

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳಿಗೆ ರೂ. 3000, ಉಪಾಧ್ಯಕ್ಷರುಗಳಿಗೆ ರೂ. 2000 ಹಾಗೂ ಸದಸ್ಯರುಗಳಿಗೆ ರೂ. 1000ಗಳ ಮಾಸಿಕ ಗೌರವಧನವನ್ನು ನಿಗದಿಪಡಿಸಲಾಗಿತ್ತು.

ಪ್ರಸ್ತುತ ಗೌರವಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳಿಗೆ ರೂ. 6,000, ಉಪಾಧ್ಯಕ್ಷರುಗಳಿಗೆ ರೂ. 4,000 ಹಾಗೂ ಸದಸ್ಯರುಗಳಿಗೆ ರೂ. 2,000ಗಳ ಮಾಸಿಕ ಗೌರವಧನವನ್ನು ನಿಗದಿಗೊಳಿಸಲು ತೀರ್ಮಾನಿಸಿದೆ.

Gram Panchayat President Vice President Honorarium Hiked

ಅದರಂತೆ ಈ ಕೆಳಕಂಡ ಆದೇಶವನ್ನು ಹೊರಡಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳಿಗೆ ಮಾಸಿಕ ರೂ. 6,000, ಉಪಾಧ್ಯಕ್ಷರುಗಳಿಗೆ ಮಾಸಿಕ ರೂ. 4,000 ಹಾಗೂ ಸದಸ್ಯರುಗಳಿಗೆ ಮಾಸಿಕ ರೂ. 2,000ಗಳ ಗೌರವಧನವನ್ನು ಪರಿಷ್ಕರಿಸಿ ನಿಗದಿಗೊಳಿಸಿ ಆದೇಶಿಸಿದೆ.

ಸದನದಲ್ಲಿ ಭರವಸೆ ನೀಡಲಾಗಿತ್ತು; ಕಳೆದ ಬಾರಿಯ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್‌ನ ಸದಸ್ಯ ಸುನೀಲ್ ಗೌಡ ಪಾಟೀಲ ವಿಧಾನ ಪರಿಷತ್‌ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವ ಧನ ಹೆಚ್ಚಳ ಮಾಡುವ ಕುರಿತು ವಿಷಯ ಪ್ರಸ್ತಾಪಿಸಿದ್ದರು.

ಗ್ರಾಮ ಪಂಚಾಯಿತಿ ಸದಸ್ಯರಿಗೆ ಕನಿಷ್ಠ ಕೂಲಿಗಿಂತ ಕಡಿಮೆ ಗೌರವಧನವಿದೆ. ಆದ್ದರಿಂದ ಅದನ್ನು ಏರಿಕೆ ಮಾಡಬೇಕು ಎಂದು ಆಗ್ರಹಿಸಿದ್ದರು. ಅಲ್ಲದೇ ಅವರಿಗೆ ಉಚಿತ ಬಸ್ ಪಾಸ ನೀಡಬೇಕು ಎಂದು ಆಗ್ರಹಿಸಲಾಗಿತ್ತು.

ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವಧನ ಹೆಚ್ಚಳ ಮಾಡುವ ಸಂಬಂಧ ಶೀಘ್ರವೇ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸದಸನಕ್ಕೆ ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+