Gram Panchayat: ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ಜವಾಬ್ದಾರಿಗಳು, ಮಾರ್ಗಸೂಚಿ ಬಿಡುಗಡೆ
ಬೆಂಗಳೂರು, ಡಿಸೆಂಬರ್ 12: ಕರ್ನಾಟಕ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಕಛೇರಿ ಕಾರ್ಯವಿಧಾನ ಕೈಪಿಡಿ) ನಿಯಮಗಳು, 2024ರ ಕರಡು ಬಿಡುಗಡೆ ಮಾಡಿದೆ. ಗ್ರಾಮ ಪಂಚಾಯಿತಿಗಳ ವಿವಿಧ ಹುದ್ದೆಗಳ ಅಧಿಕಾರಿ/ ನೌಕರರ ಜವಾಬ್ದಾರಿ ಕರ್ತವ್ಯಗಳ ಕುರಿತು ಮಾಹಿತಿ ನೀಡಿದೆ. ಈ ನಿಯಮಗಳು ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 311ರ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಕಛೇರಿ ಕಾರ್ಯವಿಧಾನ ಕೈಪಿಡಿ) ನಿಯಮಗಳು, 2024ರ ಕರಡನ್ನು ಪ್ರಕಟಿಸಿದೆ. ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಿ, ಸದರಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಅವುಗಳನ್ನು ಪರಿಹರಿಸಿದ ಬಳಿಕ ಅಂತಿಮ ರಾಜ್ಯಪತ್ರದಲ್ಲಿ ಪ್ರಕಟಿಸಲಾಗುತ್ತದೆ.

ಈ ಕರಡಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ ಕಟ್ಟಡ, 3ನೇ ಹಂತ, 3ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು-01 ಇವರಿಗೆ ಕಳುಹಿಸಬಹುದು. ಈ ಕರಡು ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಕಛೇರಿ ಕಾರ್ಯವಿಧಾನ ಕೈಪಿಡಿ) ನಿಯಮಗಳು, 2024 ಎಂದು ಕರೆಯಬೇಕು.
ಅಧ್ಯಕ್ಷರು/ ಅಧಿಕಾರಿ/ ಸಿಬ್ಬಂದಿಗಳ ಜವಾಬ್ದಾರಿಗಳು. ಗ್ರಾಮ ಪಂಚಾಯಿತಿಯ ಕಾರ್ಯನಿರ್ವಾಹಕ ಮುಖ್ಯಸ್ಥರು-ಅಧ್ಯಕ್ಷರು
* ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಲ್ಲಿ ನೀಡಲಾಗಿರುವ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸುವುದು.
* ಅಧ್ಯಕ್ಷರು ಗ್ರಾಮ ಪಂಚಾಯತಿಯ ಕಾರ್ಯನಿರ್ವಾಹಕ ಮುಖ್ಯಸ್ಥರಾಗಿ ತಮಗೆ ಸಲ್ಲಿಕೆಯಾಗುವ ಎಲ್ಲಾ ಕಡತಗಳನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವುದು.
* ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರನ್ನು ಒಳಗೊಂಡಂತೆ ಗ್ರಾಮ ಪಂಚಾಯತಿ ನೌಕರರ ಕಾರ್ಯಗಳ ಮೇಲೆ ಮೇಲ್ವಿಚಾರಣೆ ನಡೆಸತಕ್ಕದ್ದು ಮತ್ತು ನಿಯಂತ್ರಣವನ್ನು ಹೊಂದಿರತಕ್ಕದ್ದು.
ಕಚೇರಿ ಮುಖ್ಯಾಧಿಕಾರಿ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಅಧ್ಯಕ್ಷರ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು)
* ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಮತ್ತು ಅದರಡಿಯಲ್ಲಿ ರಚಿತವಾಗಿರುವಂತಹ ನಿಯಮಗಳು, ಆದೇಶಗಳು ಹಾಗೂ ಸುತ್ತೋಲೆಗಳಲ್ಲಿ ನೀಡಲಾಗಿರುವ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸುವುದು. ಗ್ರಾಮ ಪಂಚಾಯಿತಿಗೆ ಸ್ವೀಕೃತಗೊಳ್ಳುವ ಎಲ್ಲಾ ಪತ್ರ/ ಮನವಿ/ ಅರ್ಜಿಗಳ ಮೇಲೆ ನಿಯಮಾನುಸಾರ ಕಾಲ ಮಿತಿಯಲ್ಲಿ ಸೂಕ್ತ ಕ್ರಮ ಜರುಗಿಸಿ ರವಾನಿಸಿರುವ ಬಗ್ಗೆ ಖಾತರಿಪಡಿಸಿಕೊಳ್ಳುವುದು.
* ಗ್ರಾಮ ಪಂಚಾಯಿತಿ ಕಛೇರಿಯಲ್ಲಿರುವ ಅಧೀನ ಅಧಿಕಾರಿ/ ಸಿಬ್ಬಂದಿಗಳು ಅವರುಗಳ ಕರ್ತವ್ಯವನ್ನು ಸಕಾಲಿಕವಾಗಿ ನಿರ್ವಹಿಸುತ್ತಿರುವುದನ್ನು ಖಾತರಿಪಡಿಸಿಕೊಳ್ಳುವುದು. ಕಾಗದ ಪತ್ರಗಳ ಜೋಡಣೆ ಸಮರ್ಪಕವಾಗಿರುವ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವುದು. ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿಸಮಿತಿಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುವುದು.
* ಇತರೆ ಸ್ಥಾಯಿ ಸಮಿತಿಯ ಕಾರ್ಯಸೂಚಿಯ ಕುರಿತಂತೆ ಅಧ್ಯಕ್ಷರೊಂದಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿರವರು ಚರ್ಚಿಸಿ ಅಂತಿಮಗೊಳಿಸುವುದು ಮತ್ತು ಇತರೆ ಸ್ಥಾಯಿ ಸಮಿತಿಗಳಲ್ಲಿ ಭಾಗವಹಿಸುವ ಅಧಿಕಾರವನ್ನು ಹೊಂದಿರುತ್ತಾರೆ. ಎಲ್ಲಾ ಸ್ಥಾಯಿ ಸಮಿತಿಗಳ ಕಾರ್ಯಸೂಚಿಗಳನ್ನು ಸಂಬಂಧಪಟ್ಟ ಅಧ್ಯಕ್ಷರೊಂದಿಗೆ ಚರ್ಚಿಸಿ ಅನುಮೋದನೆ ಪಡೆದು ಅಂತಿಮಗೊಳಿಸಬೇಕು.
* ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸುವ ಕೆಲಸಗಳನ್ನು ನಿರ್ವಹಿಸುವುದು. ಅಧೀನ ಸಿಬ್ಬಂದಿಗಳಿಗೆ ಕೆಲಸ ಕಾರ್ಯಗಳ ಕಾರ್ಯಹಂಚಿಕೆಯನ್ನು ಮಾಡುವುದು. ಸರ್ಕಾರವು ಕಾಲಕಾಲಕ್ಕೆ ಗ್ರಾಮ ಪಂಚಾಯತಿಗೆ ವಹಿಸುವ ಕಾರ್ಯಹಂಚಿಕೆ ಜವಾಬ್ದಾರಿಗಳನ್ನು ಅಧೀನ ಸಿಬ್ಬಂದಿಗಳ ಲಭ್ಯತೆ ಮೇರೆಗೆ ಸ್ಥಳೀಯ ಅಗತ್ಯತೆಗನುಗುಣವಾಗಿ ಕಛೇರಿ ಆದೇಶದ ಮೂಲಕ ನಿರ್ದಿಷ್ಟಪಡಿಸುವುದು.
* ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ರೀತಿಯ ಕಾಮಗಾರಿಗಳನ್ನು ಸ್ಥಳ ಪರಿಶೀಲಿಸಿ ಮೇಲ್ವಿಚಾರಣೆ ಮಾಡುವುದು. ಗ್ರಾಮ ಪಂಚಾಯತಿಯಲ್ಲಿ ಮೇಲೆ ತಿಳಿಸಿರುವ ಶಾಖೆಗಳನ್ನು ತನ್ನ ಅಧೀನ ಸಿಬ್ಬಂದಿಗಳಿಗೆ ಕಾರ್ಯಹಂಚಿಕೆ ಮಾಡುವುದು. ಸರ್ಕಾರ/ ಇಲಾಖೆಯು ಕಾಲಕಾಲಕ್ಕೆ ಸೂಚಿಸುವಂತೆ ಮಾಹಿತಿ/ ದಾಖಲೆಗಳನ್ನು ಪಂಚತಂತ್ರ 2.0 ತಂತ್ರಾಂಶದಲ್ಲಿ ನಮೂದಿಸುವುದು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications