Get Updates
Get notified of breaking news, exclusive insights, and must-see stories!

Gram Panchayat: ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಹೊಸ ಜವಾಬ್ದಾರಿ

ಬೆಂಗಳೂರು, ಜೂನ್ 25: ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳಿಗೆ ಹೊಸ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಇನ್ನು ಮುಂದೆ ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಬೇಕಿದೆ.

ಈ ಕುರಿತು ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಛೇರಿ, ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಜನನ ಮತ್ತು ಮರಣ ಉಪನೋಂದಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವ ಬಗ್ಗೆ ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ.

Gram Panchayat Secretary To Register Birth And Deaths

ದೇಶಾದ್ಯಂತ ಜನನ, ಮರಣ ನೋಂದಣಿ ಅಧಿನಿಯಮ, 1969 ಜಾರಿಯಲ್ಲಿರುತ್ತದೆ. ಕರ್ನಾಟಕ ಜನನ, ಮರಣಗಳ ನೋಂದಣಿ ನಿಯಮಗಳು, 1999ರ ಮೂಲಕ ಪುನರ್ ರಚಿತ ನಾಗರಿಕ ನೋಂದಣಿ ಪದ್ಧತಿಯನ್ನು ದಿನಾಂಕ 01/01/2000ರಿಂದ ರಾಜ್ಯಾದ್ಯಂತ ಏಕೀಕರಿಸಿ ಜನನ, ಮರಣ ನೋಂದಣಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೋಂದಣಿ ಅಧಿನಿಯಮ 1969ರ ಪ್ರಕರಣ 7(5) ರನ್ವಯ ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ ಮರಣ ನೋಂದಣಾಧಿಕಾರಿಗಳನ್ನಾಗಿ ಮಾಡಿ ಸರ್ಕಾರ ಆದೇಶಿದೆ.

ಪ್ರಕರಣ 7(1) ರನ್ವಯ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳ ನಂತರದ ವಿಳಂಬ ನೋಂದಣಿಯನ್ನು ನೋಂದಾಯಿಸಲು ಗ್ರಾಮ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಸರ್ಕಾರ ಆದೇಶವನ್ನು ಹೊರಡಿಸಲಾಗಿದೆ. ಆದೇಶದನ್ವಯ ಜನನ, ಮರಣ ನೋಂದಣಿಗೆ ಸಂಬಂಧಿಸಿದಂತೆ, ನೋಂದಣಾಧಿಕಾರಿಗಳು ಮತ್ತು ಉಪ ನೋಂದಣಾಧಿಕಾರಿಗಳ ವಾತ್ರ ಜವಾಬ್ದಾರಿ ಹಾಗೂ ನಿರ್ವಹಿಸಬೇಕಾದ ಕಾರ್ಯಗಳ ಕುರಿತ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

ಮಾರ್ಗಸೂಚಿಗಳು: ದಿನಾಂಕ 01/07/2024ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶವನ್ನು ಗ್ರಾಮೀಣ ಪ್ರದೇಶಕ್ಕೆ ಅನ್ವಯವಾಗುವಂತೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕೆಳಕಂಡ ಅಂಶಗಳನ್ನು ಪಾಲಿಸಲು ತಿಳಿಸಲಾಗಿದೆ.

* ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳೊಳಗೆ ಜನನ, ಮರಣ ಉಪ ನೋಂದಣಾಧಿಕಾರಿಗಳಾದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ನಿಯಮಾನುಸಾರ ನೋಂದಣಿ ಮಾಡತಕ್ಕದ್ದು.

* ಘಟನೆ ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿ ಉಚಿತವಾಗಿ ಒಂದು ಪ್ರಮಾಣ ಪತ್ರವನ್ನು ವಿತರಿಸುವುದು.

* ಕರ್ನಾಟಕ ಜನನ, ಮರಣ ನೋಂದಣಿ ನಿಯಮ 5ರಲ್ಲಿ ನಿಗದಿಪಡಿಸಿದ 21 ದಿನಗಳ ತರುವಾಯ ಮತ್ತು 30 ದಿನಗಳೊಳಗಾಗಿ ವರದಿಯಾಗುವ ಘಟನೆಗಳನ್ನು ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ 9(1) ರ ಪ್ರಕಾರ ರೂ. 2ತಡೆ ಶುಲ್ಕ ಪಡೆದು ನೋಂದಾಯಿಸುವುದು.

* ಘಟನೆ ಸಂಭವಿಸಿದ 30 ದಿನಗಳ ತರುವಾಯ ವರದಿಯಾಗುವ ಘಟನೆಗಳ ನೋಂದಣಿಯನ್ನು ಮಾಡತಕ್ಕದ್ದಲ್ಲ. ಸದರಿ ಘಟನೆಗಳ ನೋಂದಣಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಬೇಕಾಗಿರುವ ಹಿನ್ನೆಲೆಯಲ್ಲಿ ಈ ಕುರಿತಂತೆ ಸಾರ್ವಜನಿಕರಿಗೆ/ ಅರ್ಜಿದಾರರಿಗೆ ಮಾಹಿತಿಯನ್ನು ನೀಡುವುದು.

* ಜನನ, ಮರಣ ಘಟನೆ ಸಂಭವಿಸಿದ 30 ದಿನಗಳ ನಂತರ ವರದಿಯಾಗುವ ಘಟನೆಗಳನ್ನು ಜನನ, ಮರಣ ನೋಂದಣಾಧಿಕಾರಿಗಳಾದ ಗ್ರಾಮ ಆಡಳಿತ ಅಧಿಕಾರಿಗಳು ನಿಯಮಾನುಸಾರ ನೋಂದಣಿ ಮಾಡತಕ್ಕದ್ದು.

* ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ ನಿಯಮ 9(2) ರ ಪ್ರಕಾರ 30 ದಿನಗಳ ತರುವಾಯ ಒಂದು ವರ್ಷದ ಒಳಗೆ ವರದಿಯಾಗುವ ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ತಹಶೀಲ್ದಾರ್ ಲಿಖಿತ ಅನುಮತಿಯೊಂದಿಗೆ ರೂ. 5 ತಡೆ ಶುಲ್ಕ ಪಡೆದು ನೋಂದಾಯಿಸುವುದು.

* ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ ನಿಯಮ 9(3) ರ ಪ್ರಕಾರ ಒಂದು ವರ್ಷದ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾ ಪ್ರಾಂತ ದಂಡಾಧಿಕಾರಿ (Presidency Magistrate) ರವರ ಆದೇಶದೊಂದಿಗೆ ರೂ.10 ತಡೆ ಶುಲ್ಕ ಪಡೆದು ನೋಂದಾಯಿಸುವುದು.

* ಜನನ, ಮರಣ ನೋಂದಣಿ ಸಂಬಂಧ ಯಾವುದಾದರೂ ಸಂದೇಹ/ ಸ್ಪಷ್ಟೀಕರಣ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು.

* ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಮಾಡುವ ಸಂದರ್ಭದಲ್ಲಿ ಇ-ಜನ್ಮ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿ ಅಥವಾ ಇ-ಜನ್ಮ ಸಹಾಯವಾಣಿ ಹಾಗೂ ಇ-ಮೇಲ್ [email protected] / [email protected] ಮತ್ತು ದೂರವಾಣಿ 1800-425-6578ಕ್ಕೆ ಸಂಪರ್ಕಿಸುವುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+