ಕರ್ನಾಟಕ; ವಿವಿಧ ಗ್ರಾಮ ಪಂಚಾಯಿತಿಗಳಿಗೆ ಉಪ ಚುನಾವಣೆ ಘೋಷಣೆ
ಬೆಂಗಳೂರು, ಅಕ್ಟೋಬರ್ 25 : ಕರ್ನಾಟಕದ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ನವೆಂಬರ್ 12ರಂದು ಉಪ ಚುನಾವಣೆ ನಡೆಯಲಿದೆ.
ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿಸೂಚನೆ ಅನ್ವಯ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕೋಲಾರ ತಾಲೂಕಿನ ಉರಿಗಿಲಿ, ಅರಾಭಿಕೊತ್ತನೂರು ಬಂಗಾರಪೇಟೆ ತಾಲೂಕಿನ ಕಂಗಾಂಡ್ಲಹಳ್ಳಿ ಮತ್ತು ಪಾರಂಡಹಳ್ಳಿ ಗ್ರಾಮ ಪಂಚಾಯಿತಿಯ ಒಟ್ಟು 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಕ್ಟೋಬರ್ 28ರಂದು ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 31ರ ಗುರುವಾರದಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆ ದಿನ. ನವಂಬರ್ 2ರ ಶನಿವಾರದಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ನವಂಬರ್ 4 ರ ಸೋಮವಾರ ನಾಮಪತ್ರ ವಾಪಸ್ ಪಡೆಯಬಹುದಾಗಿದೆ. ಮತದಾನ ಅವಶ್ಯವಿದ್ದರೆ ನವಂಬರ್ 12 ರಂದು (ಬೆಳಗ್ಗೆ 7 ರಿಂದ ಸಂಜೆ 5 ಗಂಟೆ ತನಕ) ನಡೆಸಲಾಗುತ್ತದೆ. ನವಂಬರ್ 14ರ ಗುರುವಾರ ತಾಲೂಕು ಕೇಂದ್ರದಲ್ಲಿ ಮತಎಣಿಕೆ ನಡೆಯಲಿದೆ.
ಧಾರವಾಡ ಜಿಲ್ಲೆ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹಳ್ಯಾಳ, ಧಾರವಾಡ ತಾಲೂಕಿನ ಅಮ್ಮಿನಭಾವಿ, ಕುಂದಗೋಳ ತಾಲೂಕಿನ ಚಾಕಲಬ್ಬಿ, ನವಲಗುಂದ ತಾಲೂಕಿನ ಯಮನೂರ ಹಾಗೂ ಹಳ್ಳಿಕೇರಿ ಗ್ರಾಮ ಪಂಚಾಯತಿಗಳಲ್ಲಿಯೂ ಉಪ ಚುನಾವಣೆ ನಡೆಯಲಿದೆ.












Click it and Unblock the Notifications