Winter Session: ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ವೇತನ ಪಾವತಿ ಬಗ್ಗೆ ಸರ್ಕಾರ ಮಾಹಿತಿ
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ವೇತನ ಪಾವತಿ ಬಗ್ಗೆ ಮಹತ್ವದ ಚರ್ಚೆಯಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರ ನೀಡುವಾಗ ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿ ವಿಳಂಬಕ್ಕೆ ಕಾರಣ ಕೂಡ ತಿಳಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ತಿಂಗಳಲ್ಲಿ ನಿರ್ದೇಶನ ನೀಡಲಾಗಿದೆ. ಅದರಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ಬೇಡಿಕೆ ಕಡಿಮೆ ಇರುವುದರಿಂದ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಕೊರತೆ ಇದೆ. ಹೀಗಾಗಿ ಅಂತಹ ಜಿಲ್ಲೆಗಳಲ್ಲಿ ಬಾಕಿ ವೇತನವನ್ನು ಪಾವತಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಗೆ ಸಂಬಂಧಿಸಿದಂತೆ 2025-26ನೇ ಸಾಲಿನಲ್ಲಿ ಮಾರ್ಚ್ 2025ರಿಂದ ನವೆಂಬರ್ 2025ರವರೆಗೆ 3 ತ್ರೈಮಾಸಿಕ ಕಂತುಗಳಲ್ಲಿ ಒಟ್ಟು 60,49,75,549 ರೂಪಾಯಿಗಳ ಗೌರವ ಧನವನ್ನು ನೇರವಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ. 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಎಸ್ಎಫ್ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳು ಉತ್ತಮವಾಗಿ ತೆರಿಗೆ ಸಂಗ್ರಹಿಸಿ, ಆತ್ಮ ನಿರ್ಭರವಾಗಬೇಕು. ಆರ್ಥಿಕವಾಗಿ ಸಬಲತೆಯನ್ನು ಸಾಧಿಸಬೇಕು ಎಂಬ ಉದ್ದೇಶದಿಂದ ಸರ್ಕಾರದಿಂದ ಶೇ 40ರಷ್ಟು ಹಾಗೂ ಶೇ 60ರಷ್ಟು ನಗರ ಸ್ಥಳೀಯ ಸಂಸ್ಥೆಗಳೇ ತಮ್ಮ ಆದಾಯದ ಅನುದಾನದಿಂದ ಪಾವತಿಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ 350ರಿಂದ 400 ಸ್ಥಳೀಯ ಸಂಸ್ಥೆಗಳಿದ್ದು, ಇವುಗಳಲ್ಲಿ ನಿರ್ಮಿಸಿದ ಒಳಚರಂಡಿ ವ್ಯವಸ್ಥೆಗೆ ನಿರ್ವಹಣೆ 800 ಕೋಟಿ ರೂಪಾಯಿ ಅನುದಾನ ಒದಗಿಸಬೇಕಾಗುತ್ತಿದೆ. ಇದಕ್ಕೆ ಆರ್ಥಿಕ ಇಲಾಖೆ ಒಪ್ಪುವುದಿಲ್ಲ. ಸ್ಥಳೀಯ ಸಂಸ್ಥೆಗಳು ತಮ್ಮ ಆದಾಯ ಮೂಲಗಳಿಂದಲೇ ನಿರ್ವಹಣೆ ವೆಚ್ಚ ಭರಿಸಬೇಕು. ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೆಲವು ಪ್ರದೇಶಗಳನ್ನು ಕೈಬಿಡುವಂತೆ ಕೋರಿ ಹಲವು ಮನವಿಗಳು ಸ್ವೀಕೃತವಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಲವು ಪ್ರದೇಶಗಳನ್ನು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಿಂದ ಕೈಬಿಡುವ ಸಮರ್ಪಕತೆಯನ್ನು ಪರಿಶೀಲಿಸಲು ಮಾಹಿತಿ ಕೋರಲಾಗಿದೆ. ಮಾಹಿತಿ ದೊರೆತ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಹೇಳಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications