ಪಿಡಿಒ, ಗ್ರಾಮ ಪಂಚಾಯತಿ ಕಾರ್ಯದರ್ಶಿ ನೇಮಕಾತಿ ಮುಂದೂಡಿಕೆ
ಬೆಂಗಳೂರು, ಜುಲೈ 14 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ ಗ್ರೇಡ್-1 ವೃ೦ದದ ಹುದ್ದೆಗಳ ನೇಮಕಾತಿಯನ್ನು ತಾ೦ತ್ರಿಕ ಕಾರಣಗಳಿಂದಾಗಿ ಮುಂದೂಡಿದೆ.[ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ, ಪಿಡಿಒ ನೇಮಕಾತಿ ವಿವರ]
ಪಂಚಾಯತ್ ರಾಜ್ ಇಲಾಖೆ 24 ಜಿಲ್ಲೆಗಳಲ್ಲಿ 638 ಪಿಡಿಒ ಮತ್ತು 638 ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳನ್ನು ಭರ್ತಿ ಮಾಡಲಿದೆ. ಪರೀಕ್ಷೆ ನಡೆಸಿ, ನೇಮಕಾತಿಗೊಳಿಸುವ ಅಧಿಕಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಲಾಗಿದೆ. [ಬೆಂಗಳೂರಿನಲ್ಲಿ ಜುಲೈ 15ರಂದು ಉದ್ಯೋಗ ಮೇಳ]

ಆದರೆ, ತಾಂತ್ರಿಕ ಕಾರಣಗಳಿಂದಾಗಿ ನೇಮಕಾತಿಯನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ.
ಒಟ್ಟು 1,276 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು ಇವುಗಳ ಪೈಕಿ, ಹೈದರಾಬಾದ್-ಕರ್ನಾಟಕದ ಜಿಲ್ಲೆಗಳಿಗೆ 177 ಪಿಡಿಒ, 171 ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹುದ್ದೆ ಸೇರಿ ಒಟ್ಟು 348 ಹುದ್ದೆಗಳನ್ನು ಮೀಸಲಾಗಿಡಲಾಗಿದೆ.
ಉದ್ಯೋಗವಕಾಶಗಳು
* ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountant) ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 11, 2016. [ವಿವರಗಳು]
* ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ಕಿರಿಯ ಸಹಾಯಕ ಗ್ರೇಡ್-2 ಮತ್ತು ಜವಾನರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಕೊನೆಯ ದಿನಾಂಕ 22 ಜುಲೈ 2016. [ವಿವರಗಳು ಇಲ್ಲಿವೆ]
* ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಅಂತಿಮ ದಿನಾಂಕ 2016ರ ಜುಲೈ 21. [ವಿವರಗಳಿಗೆ ಕ್ಲಿಕ್ ಮಾಡಿ]












Click it and Unblock the Notifications