ಮೈಸೂರು ದಸರಾದಲ್ಲಿ ಅದ್ಧೂರಿ ಏರ್ ಶೋ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾಡಿದ ಮನವಿ ಏನು?
ಬೆಂಗಳೂರು, ಆಗಸ್ಟ್ 03: ಮುಂಬರುವ ಮೈಸೂರು ದಸರಾದಲ್ಲಿ ವೈಮಾನಿಕ ಪ್ರದರ್ಶನವನ್ನು ( ಏರ್ ಶೋ ) ಆಯೋಜಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಗುರುವಾರ ಮನವಿ ಮಾಡಿದರು.
ಸಿದ್ದರಾಮಯ್ಯ ಅವರು ರಾಜನಾಥ್ ಸಿಂಗ್ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾದರು. ಈ ವರ್ಷ ಅಕ್ಟೋಬರ್ 15 ರಿಂದ 24 ರ ವರೆಗೆ ಮೈಸೂರು ದಸರಾ ನಡೆಯಲಿದೆ.

ಮೈಸೂರಿನಲ್ಲಿ ನಡೆಯುವ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ನಡೆಸಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ. ಈ ಹಿಂದಿನಂತೆ 'ಏರ್‌ಶೋ' ಆಯೋಜಿಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ರಾಜನಾಥ್ ಸಿಂಗ್ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. ಈ ಕುರಿತಾಗಿ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
'ನಿಮ್ಮ ( ರಾಜನಾಥ್ ಸಿಂಗ್ ) ಸಮಯೋಚಿತ ಹಸ್ತಕ್ಷೇಪವು ದಸರಾ ಹಬ್ಬಕ್ಕೆ ಇನ್ನಷ್ಟು ರಂಗು ನೀಡಲಿದೆ' ಎಂಬ ಮಾತುಗಳನ್ನು ಸಿಎಂ ಆಡಿದ್ದಾರೆ.
ಕೇಂದ್ರ ಸಚಿವರ ಜತೆಗಿನ ಭೇಟಿಯ ಸಂದರ್ಭದ ಫೋಟೊಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

2023ರ ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಬೇಕೆಂಬ ಜನರ ಆಶಯವನ್ನು ರಾಜನಾಥ್ ಸಿಂಗ್ ಮುಂದೆ ಇಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
'2017 ಮತ್ತು 2019 ರಲ್ಲಿ ಮೈಸೂರಿನ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಅನ್ನು ಪ್ರದರ್ಶನ ಮಾಡಿತು. ಇದು ಲಕ್ಷಾಂತರ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ವರ್ಷ ಮೈಸೂರು ದಸರಾವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗುವುದು ಎಂದು ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ದಸರಾ ಸಾಂಪ್ರದಾಯಿಕ ಹಬ್ಬವಾಗಿದ್ದು, ಇದು ಜನರ ಹಬ್ಬವಾಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಂಬೂ ಸವಾರಿ, ದೀಪದ ಅಲಂಕಾರ, ದೈಹಿಕ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮೈಸೂರು ದಸರಾದ ಕೆಲವು ಪ್ರಮುಖ ಆಕರ್ಷಣೆಗಳಾಗಿವೆ. ಇದು ಪ್ರಪಂಚದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ.
ಸಿದ್ದರಾಮಯ್ಯ-ಮೋದಿ ಭೇಟಿ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಮೇ ತಿಂಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಬಾರಿಗೆ ಪ್ರಧಾನಿ ಮೋದಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಕಚೇರಿಯ ಪ್ರಕಾರ, ಸಿದ್ದರಾಮಯ್ಯ ಅವರು ಸಂಸತ್ ಭವನದಲ್ಲಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿದರು.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications