Government Employees:'ಕರ್ನಾಟದಲ್ಲಿ ರಂಜಾನ್ ತಿಂಗಳಿನಲ್ಲಿ ಸರ್ಕಾರಿ ನೌಕರರಿಗೆ 2 ಗಂಟೆ ರಜೆ ಕೊಡಿ'
Government Employees: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರ ರಜೆ ವಿಚಾರವಾಗಿ ಚರ್ಚೆಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ. ಕ್ಷೇತ್ರವಾರು ರಜೆಗಳ ಬೇಡಿಕೆಯನ್ನು ಸರ್ಕಾರದ ಮುಂದೆ ಇಡುತ್ತಿದ್ದಾರೆ. ಇದೀಗ ತೆಲಂಗಾಣದಂತೆ ಕರ್ನಾಕದಲ್ಲೂ ಈ ತಿಂಗಳಲ್ಲಿ ಕೆಲಸದ ಅವಧಿ ಕಡಿಮೆ ಮಾಡಿ ಬೇಗ ಮನೆಗೆ ತೆರಳುವಂತೆ ಅವಕಾಶ ಮಾಡಿಕೊಂಡಿ ಎಂದು ಕೆಪಿಸಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ. ಹಾಗಾದರೆ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ತೆಲಂಗಾಣದಂತೆಯೇ ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ಸಮಯದಲ್ಲಿ ಸಂಜೆ 4 ಗಂಟೆಯ ನಂತರ ಎರಡು ಗಂಟೆ ಬೇಗ ಕರ್ತವ್ಯದಿಂದ ಮನೆಗೆ ತೆರಳಲು ಅವಕಾಶ ಕಲ್ಲಿಸಿ ಕೊಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಅವರು ಈ ಕುರಿತು ಔಪಚಾರಿಕ ಮನವಿ ಸಲ್ಲಿಸಿದ್ದಾರೆ. ಈ ಬೇಡಿಕೆ ಈಡೇರಿಕೆಗಾಗಿ ಮುಖಂಡರು ಶೀಘ್ರವೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದರು. ಆಂಧ್ರಪ್ರದೇಶ ಮತ್ತು ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ಸಂಮಯದಲ್ಲಿ 2 ಗಂಟೆ ಮುಂಚಿತವಾಗಿ ಕರ್ತವ್ಯದಿಂದ ತೆರಳಲು ಅವಕಾಶ ಕಲ್ಪಿಸುವಂತೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್ ಅಹ್ಮದ್ ಮತ್ತು ಎಆರ್‌ಎಂ ಹುಸೇನ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಬೇಡಿಕೆಗೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರಿಗೂ ಪತ್ರ ಬರೆದಿದ್ದಾರೆ. ಪವಿತ್ರ ರಂಜಾನ್ ತಿಂಗಳು ಸಮೀಪಿಸುತ್ತಿದೆ. ಆದ್ದರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಈಗಾಗಲೇ ಮುಸ್ಲಿಂ ನೌಕರರು ಒಂದು ಗಂಟೆ ಮುಂಚಿತವಾಗಿ ಕರ್ತವ್ಯದಿಂದ ತೆರಳಲು ಅವಕಾಶ ಮಾಡಿಕೊಟ್ಟಿವೆ. ಇದೇ ರೀತಿ ಅವಕಾಶವನ್ನು ಕರ್ನಾಟಕದಲ್ಲಿಯೂ ಕಲ್ಪಿಸಿಕೊಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಮಾರ್ಚ್ 3ರಿಂದ 31ರ ವರೆಗೆ ಆಚರಣೆ ಮಾಡಲಾಗುವ ರಂಜಾನ್ ತಿಂಗಳಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಮುಸ್ಲಿಂ ನೌಕರರು, ಶಿಕ್ಷಕರು, ಗುತ್ತಿಗೆ, ಹೊರಗುತ್ತಿಗೆ, ನಿಗಮ ಮಂಡಳಿಗಳು ಮತ್ತು ಸಾರ್ವಜನಿಕ ವಲಯದ ನೌಕರರು ಸಂಜೆ 4 ಗಂಟೆಗೆ ಮನೆಗೆ ತೆರಳಲು ತೆಲಂಗಾಣ ಸರ್ಕಾರ ಅವಕಾಶ ಕಲ್ಪಿಸಿದೆ. ತುರ್ತು ಸೇವೆಯಲ್ಲಿರುವವರಿಗೆ ಹಾಗೂ ಸರ್ಕಾರದ ಅಗತ್ಯ ಇರುವವರಿಗೆ ಇದು ಅನ್ವಯಿಸುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಈ ನಡುವೆಯೇ ತೆಲಂಗಾಣ ಸರ್ಕಾರದ ಈ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಸರ್ಕಾರ ಇಂತಹ ಸೌಲಭ್ಯಗಳನ್ನು ಹಿಂದೂಗಳಿಗೆ ನೀಡದಿರುವುದು ಆಘಾತಕಾರಿ. ಇದು ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಸಿಎಂ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ನೇತೃತ್ವದ ಆಂಧ್ರ ಪ್ರದೇಶ ಸರ್ಕಾರ ಸಹ ಮುಸ್ಲಿಂ ಉದ್ಯೋಗಿಗಳಿಗೆ ರಂಜಾನ್ ತಿಂಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಕರ್ತವ್ಯದಿಂದ ತೆರಳಲು ಅವಕಾಶ ನೀಡುವುದಾಗಿ ಘೋಷಣೆ ಮಾಡಿದೆ.












Click it and Unblock the Notifications