ಕರ್ನಾಟಕಕ್ಕೆ ಭರ್ಜರಿ ಗುಡ್‌ನ್ಯೂಸ್: 2 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ, ಭೂಮಿಗೆ ಬಂಗಾರದ ಬೆಲೆ!
ಕರ್ನಾಟಕ ಸರ್ಕಾರವು ವಿಮಾನ ನಿಲ್ದಾಣದ ವಿಚಾರದಲ್ಲಿ ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಬೆಂಗಳೂರು ಅಂತಾ
ರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಭರ್ಜರಿ ಬೆಳವಣಿಗೆಗಳು ಆಗಿದ್ದು ಇದರೊಂದಿಗೆ ಹೊಸ ವಿಮಾನ ನಿಲ್ದಾಣಗಳ ಬಗ್ಗೆಯೂ ಸರ್ಕಾರದಿಂದ ಅಪ್ಡೇಟ್ ನೀಡಲಾಗಿದೆ. ಕರ್ನಾಟಕ ಸರ್ಕಾರವು ವಿಮಾನ ನಿಲ್ದಾಣಗಳ ವಿಚಾರದಲ್ಲಿ ವೇಗವಾಗಿ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಇದರೊಂದಿಗೆ ಭೂಮಿಗೂ ಬಂಗಾರದ ಬೆಲೆ ಬಂದಿದೆ. ಯಾವ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಹಾಗೂ ಭೂಮಿಗೆ ಒಳ್ಳೆಯ ಬೆಲೆ ಬಂದಿದೆ ಎನ್ನುವ ವಿವರ ಇಲ್ಲಿದೆ.
ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು. ಇದರೊಂದಿಗೆ ಭೂಮಿಗೂ ಬಂಗಾರದ ಬೆಲೆ ಬಂದಿದೆ. ಕರ್ನಾಟಕ ಸರ್ಕಾರವು ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ಭರ್ಜರಿ ಪ್ಲ್ಯಾನ್ ಹಾಕಿ
ಕೊಳ್ಳುತ್ತಿದೆ. ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಇದರೊಂದಿಗೆ ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿ ಹಾಗೂ ನಿರ್ಮಾನ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ.

ಕರ್ನಾಟಕದ 2 ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿರ್ಮಾಣ ಹಂತದಲ್ಲಿರುವ ಎರಡು ಪ್ರಮುಖ ವಿಮಾನ ನಿಲ್ದಾಣಗಳಾದ ವಿಜಯಪುರ ಹಾಗೂ ಹಾಸನ ವಿಮಾನ ನಿಲ್ದಾಣ ಕಾಮಗಾರಿಯು ವೇಗವಾಗಿ ಸಾಗುತ್ತಿದೆ.
ಕರ್ನಾಟಕ ಸರ್ಕಾರವು ವಿಜಯಪುರ ಹಾಗೂ ಹಾಸನ ವಿಮಾನ ನಿಲ್ದಾಣಗಳ ಅಭಿವೃದ್ಧಿಯನ್ನು ಏಕಕಾಲಕ್ಕೆ ಪ್ರಾರಂಭಿಸಿದೆ. ವಿಜಯಪುರದಲ್ಲಿ ಒಟ್ಟು 727 ಎಕರೆ ವಿಸ್ತೀರ್ಣದಲ್ಲಿ ರೂ. 347.92 ಕೋಟಿ ವೆಚ್ಚದಲ್ಲಿ ಹಾಗೂ ಹಾಸನ ಜಿಲ್ಲಾ ಕೇಂದ್ರದಿಂದ 6 ಕಿ.ಮೀ ದೂರದಲ್ಲಿರುವ ಬೂವನಹಳ್ಳಿಯಲ್ಲಿ 193.65 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಈ ವಿಮಾನ ನಿಲ್ದಾಣದ ಕಾಮಗಾರಿಯು 2026ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ಇನ್ನು ರಾಜ್ಯದ ವಿವಿಧ ಭಾಗದಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿಯಿಂದಾಗಿ ಭೂಮಿಗೆ ಬಂಗಾರದ ಬೆಲೆ ಬರುತ್ತಿದೆ. ರಾಜ್ಯದ ವಿವಿಧ ಭಾಗದಲ್ಲಿ ರಿಯಲ್ ಎಸ್ಟೇಟ್ ಚುರುಕುಪಡೆದುಕೊಂಡಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ರಿಯಲ್ ಎಸ್ಟೇಟ್ ಚಟುವಟಿಕೆ ಜೋರಾಗಿದೆ. ಭೂಮಿ ಮಾರಾಟ ಹಾಗೂ ಖರೀದಿ ಜೋರಾಗಿದೆ.
ಆದಾಯ ಹೆಚ್ಚಳ ನಿರೀಕ್ಷೆ: ಹೊಸ ವಿಮಾನ ನಿಲ್ದಾಣಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ಸರ್ಕಾರಕ್ಕೆ ಆದಾಯ ಹೆಚ್ಚಳವಾಗುವ ನಿರೀಕ್ಷೆ ಇದೆ. ಅಲ್ಲದೇ ಪ್ರವಾಸೋದ್ಯಮ, ಕೃಷಿ ಉತ್ಪನ್ನಗಳ ಸಾಗಾಟ ಹಾಗೂ ವಾಣಿಜ್ಯ ವಹಿವಾಟು ಹೆಚ್ಚಳವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಇದರೊಂದಿಗೆ ಸಹಜವಾಗಿಯೇ ರಿಯಲ್ ಎಸ್ಟೇಟ್‌ಗೆ ಬೂಸ್ಟ್ ಸಿಕ್ಕಂತಾಗಿದೆ.
ಈ ಬೆಳವಣಿಗೆಯಿಂದಾಗಿ ಭೂಮಿ ಮಾರಾಟ ಹಾಗೂ ಖರೀದಿ ಪ್ರಕ್ರಿಯೆಗಳು ಜೋರಾಗಿದೆ.












Click it and Unblock the Notifications