ಕರ್ನಾಟಕದ ಈ ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್: ಆಸ್ತಿ ತೆರಿಗೆ ಮೇಲೆ ಭರ್ಜರಿ ಡಿಸ್ಕೌಂಟ್, ಇನ್ನೆಷ್ಟು ದಿನ ಇರಲಿದೆ ?
ಕರ್ನಾಟಕ ಸರ್ಕಾರವು ಆಸ್ತಿದಾರರಿಗೆ ಸಂಬಂಧಿಸಿದಂತೆ ಮತ್ತೊಂದು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ರಾಜ್ಯದಲ್ಲಿ ಈಗಾಗಲೇ ಬೆಂಗಳೂರು ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಿನಾಯಿತಿಯನ್ನು ಘೋಷಿಸಿದೆ. ಇದೀಗ ಗ್ರಾಮೀಣ ಭಾಗದ ಆಸ್ತಿದಾರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಕರ್ನಾಟಕದಲ್ಲಿ ಆಸ್ತಿದಾರರು ನಿರ್ದಿಷ್ಟ ಅವಧಿಯ ಒಳಗಾಗಿ ಆಸ್ತಿ ತೆರಿಗೆ ಪಾವತಿ ಮಾಡಿದರೆ, ಆಸ್ತಿ ತೆರಿಗೆ ವಿನಾಯಿತಿ ಸಿಗಲಿದೆ. ಆದರೆ ಈ ಅವಕಾಶವು ಇನ್ನು ಕೆಲವೇ ದಿನಗಳು ಇರಲಿವೆ. ಸರ್ಕಾರವು ಯಾವ ಆಸ್ತಿದಾರರಿಗೆ ಗುಡ್‌ನ್ಯೂಸ್ ನೀಡಿದೆ ಹಾಗೂ ಆಸ್ತಿ ತೆರಿಗೆ ರಿಯಾಯಿತಿಯು ಇನ್ನೆಷ್ಟು ದಿನಗಳ ಕಾಲ ಇರಲಿದೆ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.
ಹೌದು ಕರ್ನಾಟಕ ಸರ್ಕಾರವು ಗ್ರಾಮೀಣ ಭಾಗದ ಆಸ್ತಿದಾರರಿಗೆ ಆಸ್ತಿ ತೆರಿಗೆ ಪಾವತಿ ಮಾಡುವುದಕ್ಕೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿದಾರರಿಗೆ ಆಸ್ತಿ ತೆರಿಗೆ ಪಾವತಿಯಲ್ಲಿ ರಿಯಾಯಿತಿ ಸಿಗಲಿದೆ. ಇದರೊಂದು ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಗಳು ಸಹ ಆಸ್ತಿ ತೆರಿಗೆಯ ಮೇಲೆ ರಿಯಾಯತಿ ಘೋಷಿಸಿದ್ದವು.

ಇನ್ನು ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ರಿಯಾಯಿತಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ವಿಶೇಷ ಪ್ರಕಟಣೆಯನ್ನು ಹೊರಡಿಸಿದೆ. ಅದೇನು ಎನ್ನುವ ಸಂಪೂರ್ಣ ವಿವರ ನೋಡೋಣ.
ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿನ ಆಸ್ತಿದಾರರಿಗೆ ತಮ್ಮ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ 5% ರಷ್ಟು ರಿಯಾಯಿತಿಯನ್ನು ಘೋಷಿಸಲಾಗಿದೆ. ಇನ್ನು ಈ ರಿಯಾಯಿತಿಯ ಪಡೆಯಲು ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಪಾವತಿಸುವುದಕ್ಕೆ ಕೊನೆಯ ದಿನಾಂಕ 30ನೇ ಜೂನ್ ಆಗಿದೆ. ಈ ಅವಧಿಯ ಒಳಗಾಗಿ ನೀವು ಆಸ್ತಿ ತೆರಿಗೆ ಪಾವತಿ ಮಾಡಿದರೆ ನಿಮಗೆ ರಿಯಾಯಿತಿ ಸಿಗಲಿದೆ. ಇನ್ನು ಈ ರಿಯಾಯಿತಿ ಪಡೆದುಕೊಳ್ಳಲು ನೀವು 2025 - 2026ನೇ ಸಾಲಿನ ಪೂರ್ಣ ಪ್ರಮಾಣದ ಆಸ್ತಿ ತೆರಿಗೆಯನ್ನು ಪಾವತಿ ಮಾಡಬೇಕಾಗುತ್ತದೆ.
ಆಸ್ತಿ ತೆರಿಗೆ ಪಾವತಿ ಮಾಡುವುದು ಹೇಗೆ ?
ನೀವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿಯನ್ನು ಹೊಂದಿದ್ದಾರೆ. ಆಸ್ತಿ ತೆರಿಗೆ ಪಾವತಿ ಮಾಡುವುದಕ್ಕೆ ಈ ಸರಳ ವಿಧಾನಗಳನ್ನು ಅನುಸರಿಸಬಹುದಾಗಿದೆ.
ನಿಮ್ಮ ಮೊಬೈಲ್ ಯುಪಿಐ ಮೂಲಕ ಅಥವಾ bsk.karnatak.gov.in ಮೂಲಕ ಆಸ್ತಿ ತೆರಿಗೆ ಪಾವತಿಸಬಹುದು. ಯಾವುದೇ ಮಾಹಿತಿ, ಅಥವಾ ಕುಂದುಕೊರತೆಗಳಿಗಾಗಿ ಪಂಚಮಿತ್ರ ಸಹಾಯವಾಣಿ 8277506000 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇನ್ನು 10 ದಿನ ಮಾತ್ರ ಬಾಕಿ: ಇನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿದಾರರು ಆಸ್ತಿ ತೆರಿಗೆಯ ಮೇಲೆ ರಿಯಾಯಿತಿ ಪಡೆದುಕೊಳ್ಳಬೇಕೆಂದರೆ ಇನ್ನು ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿದೆ. ಈ 10 ದಿನಗಳಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಿದರೆ ಮಾತ್ರ ರಿಯಾಯಿತಿ ಸಿಗಲಿದೆ.












Click it and Unblock the Notifications