Greater Bengaluru: ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಎಂದ ಎಚ್.ಡಿ ಕುಮಾರಸ್ವಾಮಿ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಏಳು ಪಾಲಿಕೆಗಳನ್ನಾಗಿ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಮಸೂದೆಯನ್ನು ಮಂಡನೆ ಮಾಡಿದ್ದು. ಅದರ ಅಂಗೀಕರ ಸಹ ಪೂರ್ಣಗೊಂಡಿದೆ. ಇದರ ನಡುವೆ ಹಲವರು ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ರಚನೆ ಮಾಡುವ ಬಗ್ಗೆ ಪರ - ವಿರೋಧ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರಮುಖ ಆದಾಯ ಮೂಲ ಬರುವ ಹಾಗೂ ರಾಜ್ಯದಲ್ಲಿ ಹೆಚ್ಚು ಜನ ಇರುವ ಪ್ರದೇಶ ಬೆಂಗಳೂರು. ಇದೀಗ ಬೆಂಗಳೂರಿನಲ್ಲಿ 1 ಕೋಟಿಗೂ ಹೆಚ್ಚು ಜನಸಂಖ್ಯೆ ಇದ್ದು. ಈಗ ಇಷ್ಟು ಜನರಿಗೆ ಒಂದೇ ಪಾಲಿಕೆ ಇದೆ.
ಇಷ್ಟು ಜನ ಹಾಗೂ ಹೆಚ್ಚುತ್ತಿರುವ ಒತ್ತಡವನ್ನು ನಿಭಾಯಿಸುವುದಕ್ಕೆ ಈಗ ಇರುವ ಒಂದೇ ಪಾಲಿಕೆ ಸಾಲುವುದಿಲ್ಲ. ಆಡಳಿತ ವಿಕೇಂದ್ರೀಕರಣ ಹಾಗೂ ಜನರಿಗೆ ಉತ್ತಮ ಸೇವೆಯನ್ನು ನೀಡುವ ಉದ್ದೇಶದಿಂದ ಬೆಂಗಳೂರಿಗೆ ಮೂರು ಹಂತದ ಆಡಳಿತ ನೀಡುವುದಕ್ಕೆ ನಿರ್ಧರಿಸಲಾಗಿದ್ದು. ಈ ಸಂಬಂಧ ಗ್ರೇಟರ್ ಬೆಂಗಳೂರು ಪರಿಕಲ್ಪನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಚಯಿಸಿದೆ. ಆದರೆ ಇದು ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ರಿಯಾಕ್ಟ್ ಮಾಡಿದ್ದಾರೆ.

ಗ್ರೇಟರ್ ಬೆಂಗಳೂರು ಪರಿಕಲ್ಪನೆಯ ಅಡಿ ಏಳು ಪಾಲಿಕೆಗಳನ್ನು ರಚಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಅವರು ಟೀಕಿಸಿದ್ದಾರೆ. ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ!! 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ.
ಕಾಂಗ್ರೆಸ್ ನೀತಿಯೇ Divide and Rule ಎಂದು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಅಂದು: ಅಖಂಡ ಭಾರತವನ್ನು ಹೋಳು ಮಾಡಿತು! ಇಂದು: ಕಾಂಗ್ರೆಸ್ ಅಂದು: ಅಖಂಡ ಭಾರತವನ್ನು ಹೋಳು ಮಾಡಿತು ಇಂದು: ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ. ದುರುದ್ದೇಶವಿಷ್ಟೇ; ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು. ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ. ಲೂಟರ್ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ.. ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ. ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ. #ಏಳುಪಾಲಿಕೆ_ಹಾಳುಪಾಲಿಕೆ, ಆಡಳಿತ ವಿಕೇಂದ್ರೀಕರಣ ಅಲ್ಲ #ಲೂಟಿವಿಕೇಂದ್ರೀಕರಣ ಎಂದಿದ್ದಾರೆ.
ಡಿ.ಕೆ ಶಿವಕುಮಾರ್ ಟಾರ್ಗೆಟ್ ಮಾಡಿ ಟ್ವೀಟ್ ?
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಿ ಟ್ವೀಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಒಕ್ಕಲಿಗ ನಾಯಕನ ವಿಚಾರಕ್ಕೆ ಎಚ್.ಡಿ ಕುಮಾರಸ್ವಾಮಿ ಹಾಗೂ ಡಿ.ಕೆ ಶಿವಕುಮಾರ್ ನಡುವೆ ವಾಕ್ಸಮರ ನಡೆದಿತ್ತು.












Click it and Unblock the Notifications