ಎತ್ತಿನಹೊಳೆ ಯೋಜನೆಗೆ ಮಧ್ಯಂತರ ತಡೆಯಾಜ್ಞೆ

ಮಂಗಳೂರು, ನವೆಂಬರ್ 19 : ಕರಾವಳಿ ಭಾಗದ ಜನರ ವಿರೋಧಕ್ಕೆ ಕಾರಣವಾಗಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಚೆನ್ನೈ ಪೀಠ ತಡೆಯಾಜ್ಞೆ ನೀಡಿದೆ. 2015ರ ಡಿಸೆಂಬರ್ 7ರ ತನಕ ಯಾವುದೇ ಕಾಮಗಾರಿಗಳನ್ನು ನಡೆಸದಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಪುರುಷೋತ್ತಮ ಚಿತ್ತಾಪುರ, ವಿಜಯ್ ಕುಮಾರ್ ಶೆಟ್ಟಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಈ ಯೋಜನೆಯಿಂದ ಪಶ್ಚಿಮಘಟ್ಟದಲ್ಲಿನ ಜೀವವೈವಿಧ್ಯಕ್ಕೆ ಧಕ್ಕೆಯಾಗಲಿದೆ ಎಂದು ವಾದ ಮಂಡಿಸಲಾಗಿತ್ತು. [ಎತ್ತಿನಹೊಳೆ ಯೋಜನೆಗೆ ಕರಾವಳಿ ಜನರ ವಿರೋಧವೇಕೆ?]

ಹಸಿರು ನ್ಯಾಯಾಧೀಕರಣದ ಚೆನ್ನೈ ಪೀಠದ ನ್ಯಾಯಮೂರ್ತಿ ಜ್ಯೋತಿರ್ಮಣಿ ಹಾಗೂ ಎಸ್.ಆರ್.ರಾವ್ ಅವರಿದ್ದ ಪೀಠ ಡಿಸೆಂಬರ್ 7ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಕರ್ನಾಟಕ ಸರ್ಕಾರದ ಪರವಾಗಿ ನವೀನ್ ನಾಥ್ ವಾದ ಮಂಡನೆ ಮಾಡಿದ್ದರು. [ಎತ್ತಿನಹೊಳೆ ಯೋಜನೆ : ಸರ್ಕಾರದ ಸ್ಪಷ್ಟನೆಗಳು]

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಂತೆ ರಾಜ್ಯದ 7 ಜಿಲ್ಲೆಗಳ 28 ತಾಲ್ಲೂಕುಗಳ 68.5 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮದ ಮೂಲಕ ಅನುಷ್ಟಾನಗೊಳಿಸುತ್ತಿದೆ. ಚಿತ್ರಗಳಲ್ಲಿ ಎತ್ತಿನಹೊಳೆ ಯೋಜನೆ ವಿವರಗಳು....

ಹಸಿರು ಪೀಠದಿಂದ ಯೋಜನೆಗೆ ತಡೆಯಾಜ್ಞೆ

ಹಸಿರು ಪೀಠದಿಂದ ಯೋಜನೆಗೆ ತಡೆಯಾಜ್ಞೆ

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಚೆನ್ನೈ ಪೀಠ ತಡೆಯಾಜ್ಞೆ ನೀಡಿದೆ. 2015ರ ಡಿಸೆಂಬರ್ 7ರ ತನಕ ಯಾವುದೇ ಕಾಮಗಾರಿಗಳನ್ನು ನಡೆಸದಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

ಏನಿದು ಎತ್ತಿನಹೊಳೆ ಯೋಜನೆ?

ಏನಿದು ಎತ್ತಿನಹೊಳೆ ಯೋಜನೆ?

ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಂತೆ ರಾಜ್ಯದ 7 ಜಿಲ್ಲೆಗಳ 28 ತಾಲ್ಲೂಕುಗಳ 68.5 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ 24.01 ಟಿಎಂಸಿ ನೀರಿನ ಬಳಕೆಯ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಕರ್ನಾಟಕ ನೀರಾವರಿ ನಿಗಮದ ಮೂಲಕ ರಾಜ್ಯ ಸರ್ಕಾರ ಚಾಲನೆ ನೀಡಿದೆ.

ಶಂಕುಸ್ಥಾಪನೆ ಮಾಡಲಾಗಿದೆ

ಶಂಕುಸ್ಥಾಪನೆ ಮಾಡಲಾಗಿದೆ

ಕರ್ನಾಟಕ ಸರ್ಕಾರ ಚಿಕ್ಕಬಳ್ಳಾಪುರದಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆಗೆ 2014ರ ಮಾರ್ಚ್ 3ರಂದು ಈ ಶಂಕುಸ್ಥಾಪನೆ ಮಾಡಿದೆ, ಕಾಮಗಾರಿ ನಡೆಯುತ್ತಿದೆ. ಆದರೆ, ಈಗ ಹಸಿರು ನ್ಯಾಯಾಧೀಕರಣದ ಪೀಠ ಕಾಮಗಾರಿಗೆ ತಡೆಯಾಜ್ಞೆ ನೀಡಿದೆ.

ನೀರಿನ ಲಭ್ಯತೆ ಬಗ್ಗೆ ಆತಂಕ ಬೇಡ

ನೀರಿನ ಲಭ್ಯತೆ ಬಗ್ಗೆ ಆತಂಕ ಬೇಡ

ಎತ್ತಿನಹೊಳೆ ಯೋಜನೆಯಿಂದ ಸಾಕಷ್ಟು ನೀರು ಲಭ್ಯವಾಗುವುದಿಲ್ಲ ಎಂಬ ದೂರುಗಳು ಇವೆ. ಕರ್ನಾಟಕ ನೀರಾವರಿ ನಿಗಮ ಈ ಕುರಿತು ಸ್ಪಷ್ಟನೆ ನೀಡಿದ್ದು, ಈ ಯೋಜನೆಯಿಂದ 24.01 ಟಿಎಂಸಿ ನೀರು ದೊರೆಯಲಿದೆ. ನೀರಿನ ಲಭ್ಯತೆಯ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ವಿವಿಧ ಮೂಲಗಳಿಂದ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿಸಿ ಸರ್ಕಾರ ನೀರಿನ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡಿದೆ ಎಂದು ಹೇಳಿದೆ.

ಕರಾವಳಿ ಭಾಗದ ಜನರ ವಿರೋಧವೇಕೆ?

ಕರಾವಳಿ ಭಾಗದ ಜನರ ವಿರೋಧವೇಕೆ?

ನೇತ್ರಾವತಿ ನದಿಯ ಉಪ ನದಿಯಾದ ಎತ್ತಿನಹೊಳೆಯ ನೀರನ್ನು ಈ ಯೋಜನೆ ಮೂಲಕ ಬರ ಪೀಡಿತ ಜಿಲ್ಲೆಗಳಲ್ಲಿ ಒದಗಿಸಲಾಗುತ್ತದೆ. ಈ ಯೋಜನೆ ಜಾರಿಯಾದರೆ ನೇತ್ರಾವತಿ ನದಿ ಬತ್ತಿಹೋಗುತ್ತದೆ. ಆದ್ದರಿಂದ ಯೋಜನೆ ಕೈಬಿಡಬೇಕು ಎಂದು ಕರಾವಳಿ ಭಾಗದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+