Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್: ಈ ದಿನ ನಿಮ್ಮ ಖಾತೆಗೆ ಜಮಾ ಆಗಲಿದೆ 2000 ರೂ. ಹಣ

ಬೆಂಗಳೂರು, ಏಪ್ರಿಲ್‌ 05: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಂಚ ಗ್ಯಾರಂಟಿಗಳನ್ನ ಘೋಷಿಸಿದ್ದ ಕಾಂಗರೆಸ್‌ ಸರ್ಕಾರವು ಹಂತ ಹಂತವಾಗಿ ಪಂಚ ಗ್ಯಾರಂಟಿಗಳನ್ನ ಘೋಷಿಸಿದೆ. ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಹಣ ಬಿಡುಗಡೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಕಳೆದ ಮೂರು ತಿಂಗಳ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾದ ಸಮಯಕ್ಕೆ ಬಿಡುಗಡೆಯಾಗಿಲ್ಲ ಎಂದು ವಿಪಕ್ಷಗಳು ಹಾಗೂ ರಾಜ್ಯದ ಮಹಿಳೆಯವರು ಆಗ್ರಹಿಸಿದ್ದರು.

ಇದೀಗ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಯಾವಾಗ ಎಂದು ಮಹಿಳಾ ಫಲಾನುಭವಿಗಳು ಕಾಯುತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಸಂತಸದ ಸುದ್ದಿಯೊಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾ ಲಕ್ಷ್ಮಿ ಹೆಬ್ಬಾಳ್ಕರ್‌ ನೀಡಿದ್ದಾರೆ. ಜನವರಿ ಹಾಗೂ ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಹಣ ಒಂದೇ ಸಲ ಜಮಾ ಆಗಲಿದೆ ಎನ್ನಲಾಗಿತ್ತು. ಆದರೆ, ಈಗಾಗಲೇ ಡಿಸೆಂಬರ್‌ ಹಾಗೂ ಜನವರಿ ಕಂತಿನ ಹಣವನ್ನ ಬಿಡುಗಡೆ ಮಾಡಿದ್ದು, ಫೆಬ್ರವರಿ ತಿಂಗಳ ಹಣ ಜಮಾದ ಕುರಿತು ಮಾಹಿತಿಯನ್ನ ನೀಡಿದ್ದಾರೆ.

Grihalakshmi money for Month Of February Will Be Released Soon Lakshmi Hebbalkar

ಎರಡು ತಿಂಗಳ ಗೃಹ ಲಕ್ಷ್ಮಿ ಹಣ ಒಂದೇ ಸಲ ಜಮಾ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದರು. ಈಗಾಗಲೇ ಜನವರಿ ತಿಂಗಳ ಹಣ ಮಹಿಳೆಯರ ಖಾತೆಗೆ ಜಮಾ ಆಗಿದ್ದು, ಫೆಬ್ರವರಿ ತಿಂಗಳ ಹಣವನ್ನ ಏಪ್ರಿಲ್‌ ತಿಂಗಳ ಎರಡನೇ ವಾರದಂದು ಮಹಿಳೆಯರ ಖಾತೆಗೆ ಸಮಾ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಭಾಳ್ಕರ್‌ ಅವರು ಹೇಳಿದ್ದಾರೆ. .

ಅಂಗನವಾಡಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ನಿಯಮಬಾಹಿರವಾಗಿ ಹಣ ಸಂಗ್ರಹದ ಆರೋಪದಡಿ ದೇವದುರ್ಗ ವಲಯದ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.

Take a Poll

ಕಮಲಾಕ್ಷಿ ಅವರ ವಿರುದ್ಧ ಆರೋಪಗಳ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆಪಾದಿತರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1958ರ ನಿಯಮ 58 ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿದ್ದು, ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದೇವದುರ್ಗ ವಲಯದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಮಸರಕಲ್-ಬಿ ವಲಯದ ಅಂಗನವಾಡಿ ಕಾರ್ಯಕರ್ತೆಯರಿಂದ ' ನಿಯಮಬಾಹಿರ ಮೊಟ್ಟೆ ಹಣ ಸಂಗ್ರಹ' ಎಂಬ ಶೀರ್ಷಿಕೆಯಡಿ ಕೆಲವು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಗಳಲ್ಲಿ ಸುದ್ದಿ ಹಾಗೂ ವಿಡಿಯೋ ತುಣುಕು ಪ್ರಸಾರವಾಗಿತ್ತು. ಈ ಕುರಿತು ಸ್ಪಷ್ಟೀಕರಣ ನೀಡುವಂತೆ ಮೇಲ್ವಿಚಾರಕಿ ಕಮಲಾಕ್ಷಿ ಅವರಿಗೆ ನೋಟಿಸ್ ನೀಡಲಾಗಿತ್ತು. ಮಾರ್ಗಸೂಚಿಯನ್ವಯ ಮೊಟ್ಟೆ ಹಣವು ಬಾಲವಿಕಾಸ ಸಲಹಾ ಸಮಿತಿಯ ಜಂಟಿ ಖಾತೆಗೆ ಜಮಾವಾಗಿರುತ್ತದೆ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೈಯಕ್ತಿಕ ಖಾತೆಗೆ ಜಮಾ ಆಗಿರುವುದಿಲ್ಲ ಎಂದು ತಿಳಿಸಿದ್ದರು.

ಆದರೆ, ಮೊಟ್ಟೆ ಹಣವನ್ನು ಕಾರ್ಯಕರ್ತೆಯರಿಂದ ಕೇಳಿರುವ ವಿಷಯದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ಸೂಕ್ತ ರೀತಿಯ ಉತ್ತರವನ್ನು ನೀಡಿರಲಿಲ್ಲ. ಅಲ್ಲದೆ ಇಲಾಖೆಗೆ ಮುಜುಗರವಾಗುವಂತೆ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ಕಮಲಾಕ್ಷಿ ವಿರುದ್ಧ ಆರೋಪಗಳ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+