Gruha Jyothi Scheme: ಗೃಹಜ್ಯೋತಿ ಸೌಲಭ್ಯ ಮನೆ ಬದಲಾಯಿಸಿದರೆ ಕೈತಪ್ಪುವ ಭಯವೇ? ಹೀಗೆ ಮಾಡಿ..

ಬೆಂಗಳೂರು ಆಗಸ್ಟ್ 7: ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿಗಳಲ್ಲಿ ಗೃಹಜ್ಯೋತಿ ಕೂಡ ಒಂದು. ಈಗಾಗಲೇ ರಾಜ್ಯದ ಜನ ಗೃಹಜ್ಯೋತಿ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಮನೆಗಳಿಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ. ಈ ಯೋಜನೆಗೆ ನೋಂದಾಯಿಸಿಕೊಳ್ಳುವ ಜನರಿಗೆ ಉಚಿತವಾಗಿ ವಿದ್ಯುತ್ ಒದಗಿಸಲಾಗುತ್ತದೆ. ಈಗ ಬಾಡಿಗೆ ಮನೆಯಲ್ಲಿ ವಾಸಿಸುವ ಜನ ಮನೆ ಖಾಲಿ ಮಾಡಿ ಮತ್ತೊಂದು ಮನೆಗೆ ಹೋದಾಗ ಈ ಯೋಜನೆಯನ್ನು ಪುನ: ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ಹೌದು... ಮನೆ ಖಾಲಿ ಮಾಡಿ ಬೇರೊಂದು ಮನೆಗೆ ಹೋದಾಗ ಗೃಹಜ್ಯೋತಿ ಯೋಜನೆ ಪ್ರಯೋಜನ ಪಡೆಯುವುದು ಜನರಿಗೆ ಬಹು ದೊಡ್ಡ ಸಮಸ್ಯೆಯಾಗಿತ್ತು. ಆದರೀಗ ಬೆಸ್ಕಾಂ ಇದಕ್ಕೆ ಹೊಸ ದಾರಿಯನ್ನು ಕಂಡುಕೊಂಡಿದೆ. ಹಾಗಾದರೆ ಬೇರೆ ಮನೆ ಬಾಡಿಗೆ ಹೋದಾಗ ಗೃಹಜ್ಯೋತಿ ಸೌಲಭ್ಯ ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ...

Gruha Jyothi Scheme D-link to avail Gruha Jyothi facility if you change house

ಈಗಾಗಲೇ ಗೃಹಜ್ಯೋತಿ ಸೌಲಭ್ಯ ಪಡೆದು ಬೇರೆಯೊಂದು ಮನೆಗೆ ಶಿಫ್ಟ್ ಆದವರು ಪುನ: ಈ ಸೌಲಭ್ಯವನ್ನು ಪಡೆಯಲು ಹಳೆಯ ಮನೆಯ ಆರ್.ಆರ್‌.ಸಂಖ್ಯೆಯನ್ನು ಡಿ-ಲಿಂಕ್ ಮಾಡಬೇಕಾಗುತ್ತದೆ. ಆಗ ಗೃಹಜ್ಯೋತಿ ಸೌಲಭ್ಯವನ್ನು ಮತ್ತೆ ಪಡೆಯಬಹುದಾಗಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಾಯಿಸುವವರು ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಗ್ ಮಾಡಿ, ಮತ್ತೊಂದು ಮನೆಯ ಆರ್.ಆರ್‌.ಸಂಖ್ಯೆಯೊಂದಿಗೆ ನೋಂದಣಿಯಾಗಬೇಕು. ಹೀಗೆ ಮಾಡುವ ಮೂಲಕ ಗೃಹಜ್ಯೋತಿ ಸೌಲಭ್ಯವನ್ನು ಮತ್ತೆ ಪಡೆಯಬಹುದಾಗಿದೆ.

ಅಂದಹಾಗೆ ಗೃಹಜ್ಯೋತಿಗೆ ಒಂದು ವರ್ಷ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಹಾಗಾದಾರೆ ಡಿ-ಲಿಂಕ್ ಮಾಡುವುದು ಹೇಗೆ? https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ಗ್ರಾಹಕರು ನೋಂದಾಯಿಸಿಕೊಳ್ಳಬಹುದಾಗಿದೆ. ಒಂದು ವೆಳೆ ಗೃಹಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ರಾಜ್ಯದಲ್ಲಿ 1.56 ಕೋಟಿ ಜನರು ಗೃಹಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಈ ಯೋಜನೆ ಸಾಕಷ್ಟು ಅನುಕೂಲವಾಗಿದ್ದು, ವಿದ್ಯುತ್ ಬಿಲ್‌ನ ಹಣವನ್ನು ತರಕಾರಿ, ತಿಂಗಳ ದಿನಸಿ ಹಾಗೂ ಹಿರಿಯರ ಔಷಧೋಪಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ.

Gruha Jyothi Scheme D-link to avail Gruha Jyothi facility if you change house

2024ರ ಜೂನ್‌ವರೆಗೆ ಒಟ್ಟು ನೋಂದಣಿ- 1.67 ಕೋಟಿ ಜನ ಮಾಡಿಕೊಂಡಿದ್ದಾರೆ. ಇದರಲ್ಲಿ ಒಟ್ಟು ಫಲಾನುಭವಿಗಳ ಸಂಖ್ಯೆ ಒಟ್ಟು 1.56 ಕೋಟಿ ಇದೆ. ಇನ್ನೂ 2023 ಆಗಸ್ಟ್‌ರಿಂದ 2024 ಜೂನ್‌ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟು ಸಬ್ಸಿಡಿ 8,239 ಕೋಟಿ ರೂಪಾಯಿಯಾಗಿದೆ.

ಈ ಬಗ್ಗೆ ಮಾತನಾಡಿದ ಕೆಜೆ ಜಾರ್ಜ್, 'ನುಡಿದಂತೆ ನಡೆದಿದ್ದೇವೆ. ಇದಕ್ಕಾಗಿ ಸಾರ್ಥಕ ಭಾವ ನಮ್ಮಲ್ಲಿದೆ. ಜೊತೆಗೆ ಡಿಲಿಂಕ್ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆಗೆ ಈ ಸೌಲಭ್ಯ ಒದಗಿಸಲಾಗಿದೆ'' ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+