Gruha Jyothi Application Status: ಗೃಹಜ್ಯೋತಿ ಅರ್ಜಿಯ ಸ್ಟೇಟಸ್ ತಿಳಿದುಕೊಳ್ಳುವುದು ಹೇಗೆ?
ಗೃಹಜ್ಯೋತಿ ಯೋಜನೆ ಭಾರಿ ಯಶಸ್ಸು ಕಂಡಿದ್ದು, ವಿದ್ಯುತ್ ಬಿಲ್ ಹೊರೆ ಕಡಿಮೆಯಾಗಿರುವುದಕ್ಕೆ ಜನ ಸಂತಸಗೊಂಡಿದ್ದಾರೆ. ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ 33 ಲಕ್ಷ ಗ್ರಾಹಕರು ಶೂನ್ಯ ಬಿಲ್ ಪಡೆದುಕೊಂಡಿದ್ದಾರೆ ಎಂದು ಎಸ್ಕಾಂ ಹೇಳಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಈ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಗೃಹಜ್ಯೋತಿ ಯೋಜನೆಗಾಗಿ ಅರ್ಜಿ ನೋಂದಣಿ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಆಗಸ್ಟ್ 25ರ ಒಳಗೆ ಅರ್ಜಿ ಸಲ್ಲಿಕೆ ಮಾಡಿದವರಿಗೆ ಸೆಪ್ಟೆಂಬರ್ ತಿಂಗಳಿನಿಂದಲೇ ಉಚಿತ ವಿದ್ಯುತ್ ಸಿಗಲಿದೆ. ನೋಂದಣಿ ಮಾಡಿಕೊಂಡವರಿಗೆ ತಾವು ಸಲ್ಲಿಸಿದ ಅರ್ಜಿ ಪರಿಸ್ಥಿತಿ ಏನಿದೆ ಎನ್ನುವುದು ಗೊತ್ತಾಗುವುದಿಲ್ಲ, ಈ ಗೊಂದಲಗಳನ್ನು ಪರಿಹರಿಸಲು ನಿಮ್ಮ ಅರ್ಜಿ ಸ್ಥಿತಿಯನ್ನು ನೋಡಬಹುದಾಗಿದೆ.
ಜೂನ್ 18ರಿಂದ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ಅರ್ಜಿ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆ ಗೃಹಜ್ಯೋತಿಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಈಗಾಗಲೇ 1.2 ಕೋಟಿಗೂ ಅಧಿಕ ಗ್ರಾಹಕರು ಉಚಿತ ವಿದ್ಯುತ್ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಸ್ಥಿತಿಯನ್ನು ತಿಳಿಯಲು ಕೂಡ ಅವಕಾಶ ಮಾಡಿಕೊಡಲಾಗಿದೆ.

ಅರ್ಜಿ ಸಲ್ಲಿಕೆ ಮಾಡಿದ್ದೀರಾ ಸರಿ, ಆದರೆ ನಿಮ್ಮ ಅರ್ಜಿಯ ಸ್ಟೇಟಸ್ ಏನು ಎಂದು ತಿಳಿಯುವ ಕುತೂಹಲ ಇರುತ್ತದೆ. ಇದರಿಂದ ಅರ್ಜಿ ಸಲ್ಲಿಕೆಯಾಗಿದೆಯಾ ಇಲ್ಲವಾ ಅಥವಾ ಮತ್ತೆ ಅರ್ಜಿ ಸಲ್ಲಿಸಬೇಕಾ ಎನ್ನುವುದು ಕೂಡ ಗೊತ್ತಾಗಲಿದೆ. ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಯಾವುದಕ್ಕೂ ಒಮ್ಮೆ ನಿಮ್ಮ ಅರ್ಜಿಯ ಸ್ಟೇಟಸ್ ತಿಳಿಯುವುದು ಒಳ್ಳೆಯದು.
ಅರ್ಜಿಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಅರ್ಜಿಯ ಸ್ಟೇಟಸ್ ಚೆಕ್ ಮಾಡುವುದು ಸುಲಭ ವಿಧಾನವಾಗಿದೆ. https://sevasindhugs.karnataka.gov.in/ಈ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದಾಗಿದೆ. ಈ ವೆಬ್‌ಸೈಟ್ ತೆರೆದ ನಂತರ 'ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ' ಎನ್ನುವ ಆಯ್ಕೆ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
ನಂತರ ಮತ್ತೊಂದು ವಿಂಡೋ ತೆರೆಯುತ್ತದೆ. Track Your Application Status ಎನ್ನುವ ಸಂದೇಶ ಕಾಣಿಸಿಕೊಳ್ಳುತ್ತದೆ. ನಿಮ್ಮ ಎಸ್ಕಾಂ ಯಾವುದು ಎನ್ನುವ ಆಯ್ಕೆ ಕಾಣಿಸುತ್ತದೆ ಅಲ್ಲಿ ನಿಮ್ಮ ಎಸ್ಕಾಂ ಯಾವುದು ಎಂದು ಆಯ್ಕೆ ಮಾಡಿದ ನಂತರ ವಿದ್ಯುತ್ ಬಿಲ್‌ನಲ್ಲಿರುವ ಖಾತೆ ಸಂಖ್ಯೆ ಅಥವಾ ಅಕೌಂಟ್ ಐಡಿಯನ್ನು ನಮೂದಿಸಿ ಚೆಕ್ ಸ್ಟೇಟಸ್ (Check Status) ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಯೋಜನೆಯ ಲಾಭ ಪಡೆಯಲು ಇಂದೇ ಅರ್ಜಿ ಸಲ್ಲಿಸಿ
ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸಲೇಬೇಕಾಗುತ್ತದೆ. ಜೂನ್ 25ರ ಒಳಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಜುಲೈ ತಿಂಗಳಲ್ಲಿ ನಿಬಂಧನೆಗಳಿಗೆ ಒಳಪಟ್ಟು ಉಚಿತ ವಿದ್ಯುತ್ ಸಿಗಲಿದೆ. ಜುಲೈ 25ರ ಒಳಗೆ ನೀವು ಅರ್ಜಿ ಸಲ್ಲಿಸಿದರೆ ಆಗಸ್ಟ್ ತಿಂಗಳಿನಲ್ಲಿ ಉಚಿತ ವಿದ್ಯುತ್ ಪಡೆಯಲು ಅರ್ಹರಾಗಿರುತ್ತೀರಾ.
ಸೇವಸಿಂಧು ವೆಬ್‌ಸೈಟ್‌ನಲ್ಲಿ ನೀವು ಅರ್ಜಿ ಸಲ್ಲಿಸಬಹುದು. ಯಾವುದೇ ನಕಲಿ ಲಿಂಕ್‌ಗಳು, ಆಪ್‌ಗಳನ್ನು ಬಳಸದಂತೆ ಗ್ರಾಹಕರಿಗೆ ಎಚ್ಚರಿಕೆ ನಿಡಲಾಗಿದೆ. ಅರ್ಜಿ ಸಲ್ಲಿಸಲು ನಿಮ್ಮ ಆಧಾರ್ ನಂಬರ್ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬೇಕಾಗಿರುತ್ತದೆ.
ಗೃಹಜ್ಯೋತಿ ಯೋಜನೆಯಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣ ಉಚಿತಾವಗಿದೆ. ಇದಕ್ಕೆ ಯಾವುದೇ ಹಣ ಕೊಡಬೇಡಿ ಎಂದು ಮನವಿ ಮಾಡಲಾಗಿದೆ. ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್, ವಿದ್ಯುತ್ ಇಲಾಖೆ ಕಚೇರಿಗಳಲ್ಲಿ ಕೂಡ ಅರ್ಜಿಯನ್ನು ನೋಂದಣಿ ಮಾಡಲಾಗುತ್ತಿದೆ.












Click it and Unblock the Notifications