Gruha Jyothi Scheme: ಪ್ರತಿ ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆ.ಜೆ. ಜಾರ್ಜ್

ಗೃಹಜ್ಯೋತಿ ಯೋಜನೆ: ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ ಗ್ಯಾರಂಟಿ ಘೋಷಣೆಯಲ್ಲಿ ಪರತ್ತುಗಳನ್ನ ಸರ್ಕಾರ ಹಾಕಿದ್ದು, ಹಲವು ಗೊಂದಲಗಳು ಸೃಷ್ಠಿಯಾಗಿವೆ. ಗೃಹಜ್ಯೋತಿ ಗ್ಯಾರಂಟಿಗೆ ಜನತೆಯಲ್ಲಿ ಹಲವು ಗೊಂದಲಗಳಿಗೆ ಇಂಧನ ಸಚಿವ ಕೆಜೆ ಜಾರ್ಜ್ ತೆರೆ ಎಳೆದಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಗೃಹ ಜ್ಯೋತಿ ಯೋಜನೆಗೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಮಾಹಿತಿಯನ್ನ ನೀಡಿದ್ದಾರೆ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹ ಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ ವಿದ್ಯುತ್ ಉಚಿತ ಕೊಡುತ್ತಿದ್ದೇವೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದರು

Gruha Jyothi Scheme

ಇನ್ನೂ ಗೃಹಜ್ಯೋತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಜನರು ಆಧಾರ್ ಕಾರ್ಡ್ ಅನ್ನು ಆರ್‌ಆರ್ ನಂಬರ್‌ಗೆ ಲಿಂಕ್ ಮಾಡಬೇಕು. ವಾಸದ ಕರಾರು ಪತ್ರ ಅಥವಾ ವೋಟರ್ ಐಡಿ ನೀಡಬೇಕು. ಬಾಡಿಗೆ ಮನೆಯವರಿಗೂ, ಸ್ವಂತ ಮನೆಯವರಿಗೂ ಇದು ಅನ್ವಯಿಸುತ್ತದೆ. ಬೆಂಗಳೂರು ಒನ್ ಸೇವಾ ಕೇಂದ್ರದಲ್ಲಿ ಈ ವ್ಯವಸ್ಥೆಯನ್ನು ಪಡೆಯಬಹುದು ಎಂದು ಸಚಿವ ಕೆಜೆ ಜಾರ್ಜ್ ಮಾಹಿತಿ ನೀಡಿದರು.

ಗೃಹ ಜ್ಯೋತಿ ಜೂನ್ 15 ರಿಂದ ನೋಂದಣಿ ಆರಂಭವಾಗಲಿದ್ದು, ಆಗಸ್ಟ್ 1 ರಿಂದ ಯೋಜನೆ ಜಾರಿಗೆ ಬರಲಿದೆ. 2 ಕೋಟಿ 16 ಲಕ್ಷ ಗೃಹಬಳಕೆ ಗ್ರಾಹಕರು ಇದ್ದಾರೆ. ಅದರಲ್ಲಿ 2 ಕೋಟಿ 14 ಲಕ್ಷ ಗ್ರಾಹಕರು 200 ಯೂನಿಟ್ ಒಳಗೆ ಬಳಕೆ ಮಾಡುವವರು ಇದ್ದಾರೆ. 2 ಲಕ್ಷ ಮಾತ್ರ 200 ಯೂನಿಟ್‌ಗೂ ಹೆಚ್ಚು ವಿದ್ಯುತ್ ಬಳಕೆ ಮಾಡುವವರು ಇದ್ದಾರೆ. ಅದರಲ್ಲಿ 53 ಯೂನಿಟ್ ಅತಿ ಹೆಚ್ಚು ಬಳಕೆ ಮಾಡುವವರು ಇದ್ದಾರೆ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+